ಮಲೆ ಮಹದೇಶ್ವರ ಬೆಟ್ಟ: 22 ದಿನದಲ್ಲಿ ₹2.21 ಕೋಟಿ ಕಾಣಿಕೆ

KannadaprabhaNewsNetwork |  
Published : May 22, 2026, 01:45 AM IST
,   ಹನೂರುತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ | Kannada Prabha

ಸಾರಾಂಶ

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 22 ದಿನಗಳ ಅವಧಿಯಲ್ಲಿ 2.21 ಕೋಟಿ ರು. ಕಾಣಿಕೆ ಸಂಗ್ರಹವಾಗಿದೆ.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 22 ದಿನಗಳ ಅವಧಿಯಲ್ಲಿ 2.21 ಕೋಟಿ ರು. ಕಾಣಿಕೆ ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಗುರುವಾರ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಗೊಂಡು ಸಂಜೆ 6 ಗಂಟೆಗೆ ಮುಕ್ತಾಯವಾಯಿತು.ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ 22 ದಿನಗಳ ಅವಧಿಯಲ್ಲಿ 2,21,49,797 ರು. ನಗದು ಹಣ, 24 ಗ್ರಾಂ ಚಿನ್ನ ಹಾಗೂ 1 ಕೆಜಿ 550 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ.ಅಲ್ಲದೇ, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 6 ನೋಟುಗಳು ಹಾಗೂ 3 ವಿದೇಶಿ ನೋಟುಗಳು ಕಂಡುಬಂದಿವೆ.ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯ ಮರಿಸ್ವಾಮಿ ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಉಪ ಕಾರ್ಯದರ್ಶಿ ಚಂದ್ರಶೇಖರ. ಜಿ.ಎಲ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಸ್ವರ್ಣ ಹಾಗೂ ಪ್ರಾಧಿಕಾರದ ಸಿಬ್ಬಂದಿ, ಪೊಲೀಸ್ ಅಧಿಕಾರಗಳು ಮತ್ತು ಸಿಬ್ಬಂದಿ ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಫ್‌ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.---

21ಸಿಎಚ್ಎನ್‌14

ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಗುವಳಿ ಚೀಟಿಗಾಗಿ ಭೂ ಹಕ್ಕುದಾರರ ವೇದಿಕೆ ಪ್ರತಿಭಟನೆ
ಎಚ್‌ಸಿಜಿ ಸಂಸ್ಥೆಯಿಂದ ಉತ್ತರ ಬೆಂಗಳೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ಶುಭಾರಂಭ,