ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 2,58,118 ಮತದಾರರು: ಡಿಸಿ ಸಂಗಪ್ಪ

KannadaprabhaNewsNetwork |  
Published : Feb 15, 2026, 04:15 AM IST
ಅಂತಿಮ ಮತದಾರರ ಪಟ್ಟಿ ಪ್ರಕಟ | ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶಬಾಗಲಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ 2,58,118 ಮತದಾರರು | Kannada Prabha

ಸಾರಾಂಶ

ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಅಂತಿಮ ಮತದಾರರ ಪಟ್ಟಿಯನ್ನು ಶನಿವಾರ ಪ್ರಕಟಿಸಲಾಗಿದ್ದು, 1,26,233 ಪುರುಷ ಹಾಗೂ 1,31,863 ಮಹಿಳಾ ಮತದಾರರು ಸೇರಿ ಒಟ್ಟು 2,58,118 ಮತದಾರರು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಅಂತಿಮ ಮತದಾರರ ಪಟ್ಟಿಯನ್ನು ಶನಿವಾರ ಪ್ರಕಟಿಸಲಾಗಿದ್ದು, 1,26,233 ಪುರುಷ ಹಾಗೂ 1,31,863 ಮಹಿಳಾ ಮತದಾರರು ಸೇರಿ ಒಟ್ಟು 2,58,118 ಮತದಾರರು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮುಂಬರುವ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ವಿವಿಧ ರಾಜಕೀಯ ಪ್ರತಿನಿಧಿಗಳಿಗೆ ವಿತರಿಸಿ ಮಾತನಾಡಿದ ಅವರು, ಬಾಗಲಕೋಟೆ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 2,58,118 ಅಂತಿಮ ಮತದಾರರು, 391 ಸೇವಾ ಮತದಾರರು ಇದ್ದಾರೆ. ಇದರಲ್ಲಿ ಯುವ ಮತದಾರರು 3538, ವಿಕಲಚೇತನ ಮತದಾರರು 2582, 85ಕ್ಕಿಂತ ಹೆಚ್ಚಿನ ವಯಸ್ಸಿನ ಮತದಾರರು 3039 ಇತರೆ 22 ಮತದರರು ಹಾಗೂ 391 ಸೇವಾ ಮತದಾರರು ಇದ್ದಾರೆಂದು ತಿಳಿಸಿದರು.

ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ 3915 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದು, 1300 ಮತದಾರರನ್ನು ತೆಗೆದು ಹಾಕಲಾಗಿದೆ. ತೆಗೆದು ಹಾಕಲಾದ ಮತದಾರರಲ್ಲಿ 543 ಮೃತಪಟ್ಟವರು, 413 ವರ್ಗಾವಣೆಯಾದವರು, 344 ಪುನರಾವರ್ತನೆಗೊಂಡ ಮತದಾರರು ಇದ್ದಾರೆ ಎಂದು ತಿಳಿಸಿದರು.

ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮತದಾರರ ನೋಂದಣಿ ಅಧಿಕಾರಿ (ಉಪವಿಭಾಗಾಧಿಕಾರಿಗಳ) ಕಚೇರಿ, ಸಹಾಯಕ ಮತದಾರರ ನೋಂದಣಿ ಅಧಿಕಾರಿ (ತಹಸೀಲ್ದಾರ) ಕಚೇರಿ ಹಾಗೂ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಎಲ್ಲ ಮತಗಟ್ಟೆಗಳಲ್ಲಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಹಾಗೂ ವಿವರಗಳು ಸರಿಯಾಗಿ ಇರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದರು.

ಅರ್ಹ ಮತದಾರರು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಇಲ್ಲವೆ ವೆಬ್‌ಸೈಟ್‌ ಮೂಲಕ ಸರಿಯಾದ ವಿವರಗಳೊಂದಿಗೆ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿ, ಮತದಾರರ ಗುರುತಿನ ಚೀಟಿ ಹಾಗೂ ಅರ್ಜಿಗಳ ಸಲ್ಲಿಕೆಗೆ ಸಂಬಂಧಿಸಿದ ಮಾಹಿತಿಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಸೀಲ್ದಾರ್‌ ವಾಸುದೇವ ಸ್ವಾಮಿ, ಚುನಾವಣೆ ವಿಭಾಗದ ಅಧಿಕಾರಿ ಮಹೇಶ ಪಾಂಡವ, ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಶ್ರೀನಿವಾಸ ಬಳ್ಳಾರಿ, ನಾಗರಾಜ ಹದ್ಲಿ, ಬಸವರಾಜ ಮಲ್ಲಪ್ಪ ಹುನಗುಂದ, ಜಯಂತ ಕುರಂದವಾಡ, ಯಮನಪ್ಪ ಶಿರೂರ, ಭೀಮಪ್ಪ, ಪ್ರಭುರಾಜ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಚುನಾವಣೆ ಘೋಷಣೆಯಾದ ದಿನಾಂಕದಿಂದ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾದ 10 ದಿನ ಮುಂಚಿತವಾಗಿ ಸ್ವೀಕೃತಗೊಂಡ ಅರ್ಜಿಗಳನ್ನು ವಿಲೇವಾರಿ ಮಾಡಲು ಅವಕಾಶವಿರುವುದರಿಂದ ಅರ್ಜಿಗಳನ್ನು ಸಂಬಂಧಿಸಿದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಅಧಿಸೂಚಿತ ಮತದಾರರ ನೋಂದಣಿ ಅಧಿಕಾರಿ, ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳಲ್ಲಿ ನಿಗದಿತ ನಮೂನೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

- ಸಂಗಪ್ಪ ಜಿಲ್ಲಾಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟುಂಬ ಹಾಳು ಮಾಡುತ್ತಿರುವ ಪ್ರೇಮಿಗಳ ದಿನ
ರಾಜಕೀಯ ಬದುಕಿಗೆ ಜನ್ಮ ನೀಡಿದ್ದು ಗ್ರಾಮೀಣ ಕ್ಷೇತ್ರ