ನಕಲಿ ಆರ್‌ಟಿಒ ಚಲನ್ ಸಂದೇಶ ಕಳುಹಿಸಿ ₹2.75 ಲಕ್ಷ ವಂಚನೆ

KannadaprabhaNewsNetwork |  
Published : Oct 29, 2026, 02:30 AM IST
ಸಾಂದರ್ಭಿಕ ಚಿತ್ರ. | Kannada Prabha

ಸಾರಾಂಶ

ಯಲ್ಲಾಪುರ ತಾಲೂಕಿನ ತಿಮ್ಮಯ್ಯ ಮಂಜುನಾಥ ನಾಯ್ಕ(40), ಹೆಸ್ಕಾಂನಲ್ಲಿ ಗುತ್ತಿಗೆ ನೌಕರ ವಂಚನೆಗೊಳಗಾದವರು. ಕಾರವಾರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ವಾಹನದ ಮೇಲೆ ಸಂಚಾರ ನಿಯಮ ಉಲ್ಲಂಘನೆಯ ಚಲನ್ ದಾಖಲಾಗಿದೆ ಎಂದು ನಕಲಿ ಎಸ್‌ಎಂಎಸ್ ಸಂದೇಶ ಕಳುಹಿಸಿ, ಲಿಂಕ್ ಮೂಲಕ ಮೊಬೈಲ್‌ನಲ್ಲಿ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿದ ಸೈಬರ್ ವಂಚಕರು ಯಲ್ಲಾಪುರದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಗಳಿಂದ ಒಟ್ಟು ₹2.75 ಲಕ್ಷ ಹಣವನ್ನು ವರ್ಗಾಯಿಸಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಕಾರವಾರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯಲ್ಲಾಪುರ ತಾಲೂಕಿನ ತಿಮ್ಮಯ್ಯ ಮಂಜುನಾಥ ನಾಯ್ಕ(40), ಹೆಸ್ಕಾಂನಲ್ಲಿ ಗುತ್ತಿಗೆ ನೌಕರ ವಂಚನೆಗೊಳಗಾದವರು. ಕಾರವಾರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವಜಾತ ಶಿಶು ಸಾವು: ವೈದ್ಯರ ಮೇಲೆ ಹಲ್ಲೆ

ಭಟ್ಕಳ: ಶಿರಾಲಿ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ನವಜಾತ ಶಿಶು ಮೃತಪಟ್ಟ ಹಿನ್ನೆಲೆ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ವೈದ್ಯರು ಹಾಗೂ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ತಾಲೂಕಿನ ಶಿರಾಲಿಯ ಸತೀಶ ರಾಮಾ ನಾಯ್ಕ ಹಾಗೂ ಹೇಮಾ ನಾಯ್ಕ ದಂಪತಿಯ ಎರಡನೇ ಮಗು ಅ. ೨೭ರಂದು ಶಿರಾಲಿಯ ಸಮುದಾಯ ಆಸ್ಪತ್ರೆಯಲ್ಲಿ ಜನಿಸಿತ್ತು. ಬುಧವಾರ ಬೆಳಗ್ಗೆ ತಾಯಿ ಮಗುವಿಗೆ ಹಾಲುಣಿಸುವ ಸಂದರ್ಭದಲ್ಲಿ ಮಗು ನೀಲಿ ಬಣ್ಣಕ್ಕೆ ತಿರುಗಿ ಸಾವಿಗೀಡಾಗಿದೆ ಎನ್ನಲಾಗಿದೆ.ತಕ್ಷಣ ಶಿಶು ವೈದ್ಯರು ಮಗುವನ್ನು ಪರೀಕ್ಷಿಸಿ ಚಿಕಿತ್ಸೆ ನೀಡಿದರಾದರೂ, ಮಗು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಮಗುವಿನ ಸಾವಿನಿಂದ ಆಕ್ರೋಶಗೊಂಡ ಸಂಬಂಧಿಕರು ಶಿಶು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಶಿಶು ವೈದ್ಯರು ಹಾಗೂ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶಿಶು ವೈದ್ಯ ಲೀಲಾಧರ ಮೊಗೇರ ಅವರು ಪ್ರಕರಣ ದಾಖಲಿದ್ದಾರೆ. ಶಿಶು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಸಂಬಂಧಿಕರು ಠಾಣೆಯ ಮೆಟ್ಟಿಲೇರಿದ್ದಾರೆ. ಮರಣೋತ್ತರ ವರದಿ ಬಂದ ಬಳಿಕ ಪ್ರತಿದೂರು ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಹಲ್ಲೆ ಘಟನೆಯನ್ನು ಕರ್ನಾಟಕ ಸರ್ಕಾರಿ ವೈದ್ಯರ ಸಂಘ, ಐಎಂಎ ಖಂಡಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲ ನೀಡದ್ದಕ್ಕೆ ಬೇಕರಿ ಮಾಲೀಕರಿಗೆಧಮ್ಕಿ ಹಾಕಿ ದಾಂಧಲೆ: ಇಬ್ಬರ ಬಂಧನ
ಮೆಟ್ರೋದಲ್ಲಿ ಮಹಿಳೆಯ ವಿಡಿಯೋ ಮಾಡಿದ ಕಿಡಿಗೇಡಿ ವಿರುದ್ಧ ಕೇಸ್