ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾಧಿಕಾರಿ ಕಚೇರಿ ಸಭಾಂಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಹಸೀಲ್ದಾರ್ ಕಚೇರಿಗಳು, ತಾಪಂ ಹಾಗೂ ಗ್ರಾಪಂಗಳಲ್ಲಿ ಈ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಪಟ್ಟಿ ಪರಿಶೀಲಿಸಿ, ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಆ.24 ರಿಂದ ಸೆ.23ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಬಿಎಲ್‌ಒ ಅಥವಾ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 1ಕ್ಕೆ 18 ವರ್ಷ ತುಂಬುವ ಯುವ ಮತದಾರರೂ ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆಯ ನಂತರ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 16,84,968 ಮತದಾರರಿದ್ದಾರೆ. ಈ ಪೈಕಿ 8,57,619 ಪುರುಷರು, 8,27,170 ಮಹಿಳೆಯರು ಹಾಗೂ 179 ಇತರರಿದ್ದಾರೆ.ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ಕಾರ್ಯದಲ್ಲಿ ಗೈರು ಹಾಜರಿರುವವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತಪಟ್ಟವರು, ಈಗಾಗಲೇ ನೋಂದಾಯಿಸಿಕೊಂಡಿರುವ (ಡೂಪ್ಲಿಕೇಟ್) ಹಾಗೂ ಇತರೆ ವರ್ಗಗಳಿಗೆ ಸೇರಿದ ಒಟ್ಟು 2,97,146 ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲೆಯಾದ್ಯಂತ ಒಟ್ಟು 59,092 ಮತದಾರರು ಗೈರು ಹಾಜರಿದ್ದು, 1,52,169 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. 54,768 ಮಂದಿ ಮೃತಪಟ್ಟಿದ್ದು, 30,592 ಡುಪ್ಲಿಕೇಟ್ ಹಾಗೂ 525 ಇತರೆ ಪ್ರಕರಣಗಳು ಕಂಡುಬಂದಿದ್ದು, ಒಟ್ಟು 2,97,146 ಮತದಾರರ (ಎಸ್‌ಎಸ್‌ಡಿಡಿಒ) ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.