ಕನ್ನಡಪ್ರಭ ವಾರ್ತೆ ಶಿರಾ ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತಾದಿಗಳನ್ನು ಹೊಂದಿದೆ. ಇಂತಹ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ಕೆಲವು ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ ಅವರನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕು. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಒತ್ತಾಯಿಸಿದರು. ಅವರು ಶನಿವಾರ ಭಾರತೀಯ ಜನತಾ ಪಾರ್ಟಿ ಮಧುಗಿರಿ ಸಂಘಟನಾ ಜಿಲ್ಲೆ, ಶಿರಾ ನಗರ ಗ್ರಾಮಾಂತರ ಮಂಡಲ ವತಿಯಿಂದ ಹಾಗೂ ಶಿರಾ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ನಿರಂತರ ಅಪಪ್ರಚಾರವನ್ನು ಖಂಡಿಸಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಶೀರ್ಷಿಕೆಯಡಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಆಡಳಿತ ಕಚೇರಿವರೆಗೆ ಸರಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಕೂಡಲೇ ರಾಜ್ಯ ಸರಕಾರವು ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ನಿಲ್ಲಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿರುವ ಕಿಡಿಗೆಳಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಆನಂದ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಕೆ ಮಂಜುನಾಥ್, ನಗರ ಬಿಜೆಪಿ ಅಧ್ಯಕ್ಷ ಗಿರಿಧರ್, ಗ್ರಾಮಾಂತರ ಅಧ್ಯಕ್ಷ ಈರಣ್ಣ ಪಟೇಲ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾ ವಿಜಯರಾಜ್, ಓಬಿಸಿ ಮೋರ್ಚಾ ಅಧ್ಯಕ್ಷ ಮಾಗೋಡ್ ಪ್ರತಾಪ್, ಚಿಕ್ಕಣ್ಣ, ನಾಗರಾಜ್ ಗೌಡ, ಬೊಪ್ಪರಾಯಪ್ಪ, ಪ್ರ ಭಾಸ್ಕರ್, ಹನುಮಂತ ನಾಯಕ, ನಟರಾಜ್ ಸಂತೆಪೇಟೆ, ಮಾಲತೇಶ್, ಪುರುಷೋತ್ತಮ್, ರೈತ ಮೋರ್ಚಾ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣಪ್ಪ, ನಗರ ಹಾಗೂ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಸ್ನೇಹಪ್ರಿಯಾ, ಹರೀಶ್, ಎಸ್ ಕೆ ಜಿ ರಾಮಣ್ಣ, ಕುಮಾರ್ ಮಾಸ್ಟರ್, ದೇವರಾಜು, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಲಲಿತಮ್ಮ, ಪದ್ಮ ಮಂಜುನಾಥ್, ಕವಿತಾ, ಶೋಭಾ, ನಾಗರತ್ನಮ್ಮ, ಕೃಷ್ಣಪ್ಪ, ಸೈಯದ್ ಬಾಬಾ, ಮೂಗನಹಳ್ಳಿ ರಾಮು, ಎಮ್ ಶಿವಲಿಂಗಯ್ಯ, ನಾಗಣ್ಣ, ಕರಿಯಣ್ಣ, ಕೊಟ್ಟ ರಂಗನಾಥ್, ಅರೇಹಳ್ಳಿ ರಂಗನಾಥ್, ತಿಮ್ಮರಾಜು, ಪಾಂಡು, ಧರ್ಮಸ್ಥಳ ಸಂಘದ ನಿರ್ದೇಶಕರಾದ ಸದಾಶಿವಯ್ಯ ಸೇರಿದಂತೆ ಹಲವರು ಹಾಜರಿದ್ದರು.