ಚಿಕ್ಕಸಂಗಮ ಮೂಲಸೌಲಭ್ಯ ಅಭಿವೃದ್ಧಿಗೆ ₹2 ಕೋಟಿ ಅನುದಾನ: ಜೆ.ಟಿ.ಪಾಟೀಲ

KannadaprabhaNewsNetwork |  
Published : Nov 18, 2026, 02:45 AM IST
ಫೋಟೊ17ಬಿಕೆಟಿ6,(1) ಬೀಳಗಿ ತಾಲೂಕಿನ ಚಿಕ್ಕ ಸಂಗಮದಲ್ಲಿ ಸೋಮವಾರ ಸಂಜೆ ಆಯೋಜಿಸಲಾಗಿದ್ದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೀಪ ಬೆಳೆಗಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು) | Kannada Prabha

ಸಾರಾಂಶ

ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತ ಅಧ್ಯಕ್ಷ ಜೆ.ಟಿ.ಪಾಟೀಲ ಅವರು ಬೀಳಗಿ ತಾಲೂಕಿನ ಚಿಕ್ಕ ಸಂಗಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಚಿಕ್ಕ ಸಂಗಮ ಧಾರ್ಮಿಕವಾಗಿ ವಿಶೇಷ ಮಹತ್ವ ಹೊಂದಿದ್ದು, ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಭಕ್ತರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ₹2 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಬೀಳಗಿ ಶಾಸಕ ಜೆ.ಟಿ.ಪಾಟೀಲ ಹೇಳಿದರು.

ಬೀಳಗಿ ತಾಲೂಕಿನ ಚಿಕ್ಕ ಸಂಗಮದಲ್ಲಿ ಸೋಮವಾರ ಆಯೋಜಿಸಿದ್ದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೀಪ ಬೆಳೆಗಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚಿಕ್ಕಸಂಗಮದ ಧಾರ್ಮಿಕ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತಷ್ಟು ಆದ್ಯತೆ ನೀಡಲಾಗುವುದು. ಮೂಲ ಸೌಕರ್ಯ ಅಭಿವೃದ್ದಿಗಾಗಿ ₹2 ಕೋಟಿ ಅನುದಾನ ಒದಗಿಸಲಾಗಿದ್ದು, ರಸ್ತೆ, ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ ಸೇರಿ ಅಗತ್ಯ ಸೌಲಭ್ಯ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

ಭಕ್ತರ ಬಹುದಿನಗಳ ಆಶಯದಂತೆ ಚಿಕ್ಕ ಸಂಗಮದಲ್ಲಿ ₹1 ಕೋಟಿ ವೆಚ್ಚದಲ್ಲಿ ರಥ ನಿರ್ಮಾಣ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಮತ್ತಷ್ಟು ಮೆರಗು ಬರಲಿದ್ದು, ಭಕ್ತರ ಭಾವನೆ ಹಾಗೂ ಆಶಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಚಿಕ್ಕಸಂಗಮದ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಯೋಜನೆಯಾಗಿ ₹25 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಕಾಮಗಾರಿಗೆ ಶೀಘ್ರ ಚಾಲನೆ ನೀಡುವ ಉದ್ದೇಶ ಹೊಂದಲಾಗಿದೆ. ಇದರಿಂದ ಸ್ಥಳೀಯ ಜನರಿಗೆ ಹಾಗೂ ಚಿಕ್ಕಸಂಗಮಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಚಿಕ್ಕಸಂಗಮದಲ್ಲಿ ಧಾರ್ಮಿಕ, ಪ್ರವಾಸೋದ್ಯಮ ಹಾಗೂ ಮೂಲಭೂತ ಸೌಲಭ್ಯಗಳ ದೃಷ್ಟಿಯಿಂದ ಸಮಗ್ರವಾಗಿ ಅಭಿವೃದ್ಧಿಪಡಿಸುವ ಮೂಲಕ ಈ ಭಾಗದ ಮಹತ್ವ ಮತ್ತಷ್ಟು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಸಾವಿರಾರು ದೀಪಗಳು ಬೆಳೆಗಿದ ಹಿನ್ನೆಲೆ ಚಿಕ್ಕ ಸಂಗಮದ ಪರಿಸರ ಭಕ್ತಿಭಾವದಿಂದ ಕಂಗೊಳಿಸಿತು.

ಕಾರ್ಯಕ್ರಮದಲ್ಲಿ ಗಿರಿಸಾಗರದ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಹೊಸರೊಳ್ಳಿಯ ಹಿರೇಮಠದ ಶಂಕರಯ್ಯನವರು, ಬೀರಕಬ್ಬಿಯ ವೀರತಯ್ಯಸ್ವಾಮೀಜಿ, ಜಿಲ್ಲಾಧಿಕಾರಿ ಸಂಗಪ್ಪ, ಅವರ ತಂದೆ ಹಸನಪ್ಪ, ತಾಯಿ ಕಮಲಾ ಹಾಗೂ ಅವರ ಕುಟುಂಬಸ್ಥರು, ಬಸವಪ್ರಭು ಸರನಾಡಗೌಡ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ
ವಿಶ್ವಮಟ್ಟದ ಶ್ರೇಷ್ಠ ವಾಸ್ತುಶಿಲ್ಪಗಳ ತಾಣ ವಿಜಯಪುರ