ಮೇಲುಕೋಟೆ ಕ್ಷೇತ್ರದ ವಿವಿಧ ಗ್ರಾಮದಲ್ಲಿ ಕೋಟ್ಯಂತರ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಮೂರು ಗ್ರಾಮಗಳಲ್ಲಿ 2 ಕೋಟಿ ಮೌಲ್ಯದ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಲಾಗಿದೆ. ಬನ್ನಂಗಾಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಲಾಗಿದೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಬನ್ನಂಗಾಡಿ, ಬೇಬಿ ಹಾಗೂ ಕಣಿವೆಕೊಪ್ಪಲು ಗ್ರಾಮದಲ್ಲಿ 2 ಕೋಟಿ ರು. ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು.
ಬನ್ನಂಗಾಡಿಯಲ್ಲಿ 1 ಕೋಟಿ ವೆಚ್ಚ, ಬೇಬಿ ಗ್ರಾಮದಲ್ಲಿ 50 ಲಕ್ಷ ರು. ಹಾಗೂ ಕಣಿವೆಕೊಪ್ಪಲು ಗ್ರಾಮದಲ್ಲಿ 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ ಭೂಮಿಪೂಜೆ ಸಲ್ಲಿಸಿದರು. ಇದೇ ವೇಳೆ ಬನ್ನಂಗಾಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಹ ಉದ್ಘಾಟಿಸಿದರು.
ನಂತರ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಮಾತನಾಡಿ, ಮೇಲುಕೋಟೆ ಕ್ಷೇತ್ರದ ವಿವಿಧ ಗ್ರಾಮದಲ್ಲಿ ಕೋಟ್ಯಂತರ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಮೂರು ಗ್ರಾಮಗಳಲ್ಲಿ 2 ಕೋಟಿ ಮೌಲ್ಯದ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಲಾಗಿದೆ ಎಂದರು.
ಬನ್ನಂಗಾಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಲಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಈ ವೇಳೆ ಸರ್ವೋದಯ ಕರ್ನಾಟಕ ಪಕ್ಷದ ಅಧ್ಯಕ್ಷ ಕೆ.ಎಸ್.ದಯಾನಂದ್, ಹಿರಿಯ ಮುಖಂಡ ಕೆ.ಟಿ.ಗೋವಿಂದೇಗೌಡ, ರೈತ ಸಂಘದ ಅಧ್ಯಕ್ಷ ಮಂಜುನಾಥ್, ಮಹಿಳಾಧ್ಯಕ್ಷೆ ರೂಪಾ ನಿತಿನ್, ಮುಖಂಡರಾದ ಕಣಿವೆ ರಾಮು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಜೆ.ಸ್ವಾಮಿ, ವೆಂಕಟೇಶ್, ಬಿ.ಕೆ.ರೇವಣ್ಣ, ಸಿಡಿಸಿ ಉಪಾಧ್ಯಕ್ಷ ಬಿ.ಕೆ.ಶ್ರೀನಿವಾಸ್, ಶಂಕರ, ನಾಗಣ್ಣ, ರಮೇಶ್, ಕೆನ್ನಾಳು ನಾಗರಾಜು, ನಾಗೇಶ್, ದಸಂಸ ಮುಖಂಡ ಶ್ರೀಮೂರ್ತಿ, ಯಾ.ಮರಿಗೌಡ, ಅಂಕಪ್ಪ, ರಾಮಚಂದ್ರು, ಸಂದೇಶ್, ಲವ, ಷಡಕ್ಷರಿ, ಸಿದ್ದರಾಜು, ಕುಮಾರ್, ರಾಜಣ್ಣ, ತಮ್ಮಯ್ಯ, ಸೇರಿದಂತೆ ಬೇಬಿ ಮತ್ತು ಕಣಿವೆಕೊಪ್ಪಲು ಗ್ರಾಮದ ಮುಖಂಡರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.