ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಹಾಗೂ ವಿವಿಧ ಸಂಘ ಸಂಸ್ಥೆಗಳ ಜೊತೆಗೂಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆ ಕಾರ್ಯದರ್ಶಿ ಸಿ.ಅಪೂರ್ವ ಚಂದ್ರ, ಮಾಜಿ ಸಿಎಂ ದಿ.ಎಸ್.ಎಂ.ಕೃಷ್ಣರ ಅಧಿಕಾರ ಅವಧಿಯಲ್ಲಿ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ ಅನುದಾನ ನೀಡಿರುವುದನ್ನು ಬಿಟ್ಟರೆ ಯಾವುದೇ ಜನಪ್ರತಿನಿಧಿಗಳು ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಈ ಹಿಂದೆಯೇ ಧ್ವಜ ಸತ್ಯಾಗ್ರಹ ಸೌಧದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆ. ಹೀಗಾಗಿ ಸೌಧದ ಅಭಿವೃದ್ಧಿಗೆ ಈಗಾಗಲೇ 2 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು.ಮುಂದಿನ ಸ್ವಾತಂತ್ಯ್ರ ದಿನಾಚರಣೆ ವೇಳೆಗೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ನಂತರ ಸೌಧವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಆಶ್ವಾಸನೆ ನೀಡಿದರು.