ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಕೂಲಿಕಾರ್ಮಿಕರು ಚಿರತೆ ಮರಿಗಳನ್ನು ಕಂಡು ಭಯಭೀತರಾಗಿದ್ದಾರೆ. ತಕ್ಷಣ ಅರಣ್ಯ ಇಲಾಖೆಯರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಯವರು ಚಿರತೆ ಮರಿಗಳನ್ನು ರಕ್ಷಿಸಿ ತಾಯಿ ಚಿರತೆ ಸೆರೆಹಿಡಿಯಲು ಬೋನನ್ನು ಇಟ್ಟಿದ್ದಾರೆ.
ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕೂಡಲೇ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳನ್ನು ಹಿಡಿದು ಸಾಕು ಪ್ರಾಣಿಗಳಿಗೆ ರಕ್ಷಣೆ ನೀಡಬೇಕಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಚಿರತೆ ದಾಳಿಗೆ ಮೂರು ಮೇಕೆಗಳು ಬಲಿ
ಚಿರತೆ ದಾಳಿಯಿಂದ ಮೂರು ಮೇಕೆಗಳು ಬಲಿಯಾಗಿರುವ ಘಟನೆ ತಾಲೂಕಿನ ಇಂಗಲಕುಪ್ಪೆ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಮೇಕೆಗಳನ್ನು ಕಳೆದುಕೊಂಡ ರೈತ ಕಾಳೇಗೌಡರಿಗೆ 50 ಸಾವಿರಕ್ಕೂ ಅಧಿಕ ನಷ್ಟ ಉಂಟಾಗಿದೆ. ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಇಲಾಖೆಯಿಂದ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು, ಜತೆಗೆ ಚಿರತೆಯ ಸೆರೆಗೆ ಬೋನ್ ಹಾಕಲಾಗುವುದು ಎಂದು ಭರವಸೆ ನೀಡಿದರು.