ಲೋಕಸಭೆಯಲ್ಲಿ 2 ರೈತಪರ ಮಸೂದೆ ಮಂಡನೆ: ಡಾ. ಸುಧಾಕರ್‌

KannadaprabhaNewsNetwork |  
Published : Dec 18, 2025, 01:15 AM IST
ಪೋಟೋ 3 : ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಟ್ಟಸಂದ್ರ ಗ್ರಾಮದಲ್ಲಿ ಸಂಸದರ ಅನುದಾನದಲ್ಲಿ ನಿರ್ಮಿಸಿರುವ ಶುದ್ದ ನೀರಿನ ಘಟಕವನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ರಾಜ್ಯದ ಸಮಸ್ಯೆಗಳ ಬಗ್ಗೆ ವಿಶೇಷವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ, ಹೂವು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಿದ್ದು, ಲೋಕಸಭೆಯಲ್ಲಿ ರೈತರ ಪರವಾದ 2 ಮಹತ್ವದ ಮಸೂದೆ ಮಂಡಿಸಿದ್ದೇನೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ತಿಳಿಸಿದರು.

ದಾಬಸ್‍ಪೇಟೆ: ರಾಜ್ಯದ ಸಮಸ್ಯೆಗಳ ಬಗ್ಗೆ ವಿಶೇಷವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ, ಹೂವು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಿದ್ದು, ಲೋಕಸಭೆಯಲ್ಲಿ ರೈತರ ಪರವಾದ 2 ಮಹತ್ವದ ಮಸೂದೆ ಮಂಡಿಸಿದ್ದೇನೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ತಿಳಿಸಿದರು.

ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಟ್ಟಸಂದ್ರ ಹಾಗೂ ಮೈಲನಹಳ್ಳಿ ಗ್ರಾಮಗಳಲ್ಲಿ ಸಂಸದರ ಅನುದಾನದಲ್ಲಿ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಸಂಸದರು, ಹೈನುಗಾರರ ಕಲ್ಯಾಣ ಮಸೂದೆ ಹಾಗೂ ರಾಷ್ಟ್ರೀಯ ಪುಷ್ಟಕೃಷಿ ಮಂಡಳಿ ಮಸೂದೆ ಮಂಡಿಸಿದ್ದು, ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿ, ಹೈನುಗಾರರು ಮತ್ತು ಹೂವು ಬೆಳೆಗಾರರು ಗ್ರಾಮೀಣ ಭಾರತದ ಬೆನ್ನೆಲುಬಾಗಿದ್ದಾರೆ. ಈ ಮಸೂದೆಗಳು ಅವರ ಆದಾಯವನ್ನು ಭದ್ರಪಡಿಸಿ, ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಹೊಸ ಆರ್ಥಿಕ ಅವಕಾಶಗಳನ್ನು ನೀಡುತ್ತದೆ ಎಂದರು.

ಗುಣಮಟ್ಟದಿಂದ ಕೂಡಿರಲಿ: ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ಪರಿಶೀಲಿಸಿದ್ದೇನೆ. ರಸ್ತೆಯ ಅಕ್ಕಪಕ್ಕ ಇರುವ ಸಾರ್ವಜನಿಕರು ಸಹಕಾರ ನೀಡಿದಾಗ ಮಾತ್ರ ಬೇಗ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗುತ್ತದೆ. ಗ್ರಾಮಗಳಿಗೆ ಅಂಡರ್ ಪಾಸ್, ಸರ್ವೀಸ್ ರಸ್ತೆ ನಿರ್ಮಾಣ ಕುರಿತಂತೆ ಅಧಿಕಾರಿಗಳಿಗೆ ಅಗತ್ಯ ಸಲಹೆ ನೀಡಿ, ಒಟ್ಟಾರೆ ಈ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಅಪಘಾತ ನಿಯಂತ್ರಣಕ್ಕೆ ಕ್ರಮ:

ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‍ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷತಾ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು, ಜೊತೆಗೆ ಅಪಘಾತ ನಿಯಂತ್ರಣ ಕ್ರಮಗಳನ್ನು ಕೂಡ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಳೆದ ಒಂದು ವಾರದ ಹಿಂದೆಯಷ್ಟೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿ ಮೃತಪಟ್ಟ ಆಂಬ್ಯುಲೆನ್ಸ್ ಚಾಲಕ ನರೇಂದ್ರ ಕುಟುಂಬದವರು ಸಂಸದ ಡಾ.ಕೆ.ಸುಧಾಕರ್ ಅವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿ ಮಾಡಿದಾಗ ಸಂಸದರು ಸಾಂತ್ವನ ಹೇಳಿ ಸೂಕ್ತ ಪರಿಹಾರ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದರು.

ರಿಂಗ್ ರೋಡ್ ನಿರ್ಮಾಣಕ್ಕೆ ಮನವಿ:

ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ನೆಲಮಂಗಲ ಪಟ್ಟಣದಲ್ಲಿ ದಿನೇದಿನೇ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದ್ದು, ರಿಂಗ್ ರೋಡ್ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಮುಖಂಡ ಸಪ್ತಗಿರಿ ಶಂಕರ್ ನಾಯಕ್, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬೃಂಗೇಶ್, ಎಸ್ ಸಿ ಮೋರ್ಚಾ ಅಧ್ಯಕ್ಷ ಉಮೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪೋಟೋ 3 :

ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಟ್ಟಸಂದ್ರ ಗ್ರಾಮದಲ್ಲಿ ಸಂಸದರ ಅನುದಾನದಲ್ಲಿ ನಿರ್ಮಿಸಿರುವ ಶುದ್ದ ನೀರಿನ ಘಟಕವನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿ ಬಿಕ್ಕಟ್ಟು, ಬಲವಂತದ ಭೂಸ್ವಾಧೀನಕ್ಕೆ ಸಿಪಿಎಂ ವಿರೋಧ
ಕನ್ನಡಪ್ರಭ, ಸುವರ್ಣ ನ್ಯೂಸಿಂದ ಚಿತ್ರಕಲಾ ಸ್ಪರ್ಧೆ ಇಂದು