ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ

KannadaprabhaNewsNetwork |  
Published : Aug 22, 2025, 02:00 AM IST
32 | Kannada Prabha

ಸಾರಾಂಶ

ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆ ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹಾಗೂ ಬೆಂಗಳೂರು-ಮಡ್ಗಾಂವ್‌ ಜಂಕ್ಷನ್‌-ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ನಡುವೆ ತಲಾ ಒಂದು ಟ್ರಿಪ್ ವಿಶೇಷ ರೈಲು ಸಂಚಾರ ಪ್ರಾರಂಭಿಸಲಿದೆ.

 ಮಂಗಳೂರು : ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹಾಗೂ ಬೆಂಗಳೂರು-ಮಡ್ಗಾಂವ್‌ ಜಂಕ್ಷನ್‌-ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ನಡುವೆ ತಲಾ ಒಂದು ಟ್ರಿಪ್ ವಿಶೇಷ ರೈಲು ಸಂಚಾರ ಪ್ರಾರಂಭಿಸಲಿದೆ.

ರೈಲು ಸಂಖ್ಯೆ 07341 ಎಸ್‌ಎಸ್‌ಎಸ್ ಹುಬ್ಬಳ್ಳಿ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಆಗಸ್ಟ್ 26 ರಂದು ಸಂಜೆ 4 ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ರೈಲು ಸಂಖ್ಯೆ 07342 ಆಗಸ್ಟ್ 27 ರಂದು ಮಧ್ಯಾಹ್ನ 2.15ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮರುದಿನ ಬೆಳಗ್ಗೆ 9.45ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿ ತಲುಪಲಿದೆ. ಎಸ್‌ಎಸ್ಎಸ್‌ ಹುಬ್ಬಳ್ಳಿ-ಮಂಗಳೂರು ಸೆಂಟ್ರಲ್‌ ಎಕ್ಸ್‌ಪ್ರೆಸ್‌ ರೈಲು ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ ಪುತ್ತೂರು ಮತ್ತು ಬಂಟ್ವಾಳ ನಿಲ್ದಾಣದಲ್ಲಿ ನಿಲುಗಡೆ ಇರಲಿದೆ.

ಮಡ್ಗಾಂವ್‌ ಜಂಕ್ಷನ್‌-ಬೆಂಗಳೂರು ರೈಲು:

ರೈಲು ನಂಬರ್‌ 06569 ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು-ಮಡ್ಗಾಂವ್‌ ಜಂಕ್ಷನ್‌ ವಿಶೇಷ ರೈಲು ಆ. 26ರಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 5.30ಕ್ಕೆ ಮಡ್ಗಾಂವ್‌ ಜಂಕ್ಷನ್‌ ತಲುಪಲಿದೆ. ನಂಬರ್‌ 06570 ಮಡ್ಗಾಂವ್‌ ಜಂಕ್ಷನ್‌-ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ವಿಶೇಷ ರೈಲು ಆ. 27 ರಂದು ಮಡ್ಗಾಂವ್‌ ಜಂಕ್ಷನ್‌ನಿಂದ ಬೆಳಗ್ಗೆ 6.30 ಗಂಟೆಗೆ ಹೊರಟು ರಾತ್ರಿ 11.40ಕ್ಕೆ ಬೆಂಗಳೂರು ತಲುಪಲಿದೆ.

ಈ ರೈಲು ಚಿಕ್ಕಬಾಣಾವರ, ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ಮಾರ್ಗ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್‌, ಮೂಲ್ಕಿ, ಉಡುಪಿ, ಕುಂದಾಪುರ, ಮೂಕಾಂಬಿಕಾ ರೋಡ್‌, ಬೈಂದೂರು, ಭಟ್ಕಳ್‌, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣರೋಡ್‌, ಅಂಕೋಲ ಹಾಗೂ ಕಾರವಾರದಲ್ಲಿ ನಿಲುಗಡೆ ಹೊಂದಲಿದೆ. ಈ ರೈಲು ಮಂಗಳೂರು ಜಂಕ್ಷನ್‌ ಅಥವಾ ಸೆಂಟ್ರಲ್‌ ಪ್ರವೇಶಿಸದೆ ನೇರವಾಗಿ ಪಡೀಲ್‌ ಮೂಲಕ ಸಂಚರಿಸಲಿದೆ.

ಈ ರೈಲಿಗೆ ಆ.22ರಿಂದ ಮುಂಗಡ ಬುಕ್ಕಿಂಗ್‌ ಲಭ್ಯವಿರಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶೇಷ ರೈಲು ಸಂಚಾರಕ್ಕಾಗಿ ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದು ಆಗ್ರಹಿಸಿದ್ದರು. ಈ ಬಗ್ಗೆ ಕರಾವಳಿಯ ರೈಲು ಸಂಘಟನೆಗಳು ಸಂಸದರಿಗೆ ಮನವಿ ಸಲ್ಲಿಸಿದ್ದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!