ಆಕಾಶ್ ಉಡುಪಿ ಶಾಖೆಯ 2 ವಿದ್ಯಾರ್ಥಿಗಳು ಟಾಪ್

KannadaprabhaNewsNetwork |  
Published : Jun 07, 2024, 12:32 AM IST
ಅಕಾಶ್05 | Kannada Prabha

ಸಾರಾಂಶ

ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ನೀಟ್‌ ಪರೀಕ್ಷೆಯಲ್ಲಿ 705 ಹಾಗೂ ಹೆಚ್ಚಿನ ಅಂಕಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಸಾಧನೆ ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯ ಉಡುಪಿ ಶಾಖೆಯ ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ನೀಟ್ ಪರೀಕ್ಷೆಯಲ್ಲಿ 705 ಹಾಗೂ ಹೆಚ್ಚಿನ ಅಂಕಗಳನ್ನು ಗಳಿಸಿ, ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಪ್ರಜ್ಞಾನ್ ಪಿ .ಶೆಟ್ಟಿ 715 ಅಂಕಗಳೊಂದಿಗೆ ಅಖಿಲ ಭಾರತ ರ್ಯಾಂಕ್ 94 ಹಾಗೂ ವೈಭವಿ ಆಚಾರ್ಯ 705 ಅಂಕಗಳೊಂದಿಗೆ ಅಖಿಲ ಭಾರತ ರ್ಯಾಂಕ್ 1,138 ಗಳಿಸಿದ್ದಾರೆ. ಈ ಗಮನಾರ್ಹ ಸಾಧನೆಯು ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸಂಸ್ಥೆ ಒದಗಿಸಿದ ಉತ್ಕೃಷ್ಟ ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ.

ಬುಧವಾರ ಉಡುಪಿ ಅಕಾಶ್ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಿಷಯಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಶಿಸ್ತಿನ ಅಧ್ಯಯನ ವೇಳಾಪಟ್ಟಿಯನ್ನು ಪಾಲಿಸಿರುವುದು ತಮ್ಮ ಯಶಸ್ಸಿಗೆ ಕಾರಣ. ಆಕಾಶ್ ಸಂಸ್ಥೆಯು ನೀಡಿರುವ ತರಬೇತಿ ಅಲ್ಲದಿದ್ದರೆ ಈ ಅಲ್ಪಾವಧಿಯಲ್ಲಿ ನಾವು ವಿವಿಧ ವಿಷಯಗಳಲ್ಲಿ ಅನೇಕ ಪರಿಕಲ್ಪನೆಗಳನ್ನು ಗ್ರಹಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಈ ವಿದ್ಯಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ.

ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯ ಮುಖ್ಯ ಶೈಕ್ಷಣಿಕ ಮತ್ತು ವ್ಯವಹಾರ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ, ‘ವಿದ್ಯಾರ್ಥಿಗಳನ್ನು ಅವರ ಅನುಕರಣೀಯ ಸಾಧನೆಗಾಗಿ ನಾವು ಅಭಿನಂದಿಸುತ್ತೇವೆ. ನಮ್ಮ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮಾಡುವ ಎಲ್ಲ ಪ್ರಯತ್ನಗಳಿಗೆ ನಾವು ಶುಭ ಹಾರೈಸುತ್ತೇವೆ ಎಂದರು.

ಮಂಗಳೂರಿನ ಶಾಖೆ.ಯ ಸಹಾಯಕ ನಿರ್ದೇಶಕ ಶ್ಯಾಮ್ ಪ್ರಸಾದ ಎಂ., ಉಡುಪಿ ಕಚೇರಿಯ ಮುಖ್ಯಸ್ಥರಾದ ಪರಮೇಶ್ವರ ಬೀರಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ