ಜಿಲ್ಲೆಯಲ್ಲಿ 20 ಬ್ಲಾಕ್ ಸ್ಪಾಟ್ಸ್, ಅಪಘಾತ ಮುಕ್ತಗೊಳಿಸಲು ಕ್ರಮ: ಡಿಸಿ ಡಾ. ಕೆ.ವಿದ್ಯಾಕುಮಾರಿ

KannadaprabhaNewsNetwork |  
Published : Oct 29, 2024, 12:59 AM IST
28ರೋಡ್ | Kannada Prabha

ಸಾರಾಂಶ

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.ಅವರು ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ 2020ರಿಂದ 2022ರ ವರೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತವಾದ 20 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಪಾದಚಾರಿಗಳ ಕ್ರಾಸಿಂಗ್ ಹಾಗೂ ಜೀಬ್ರಾ ಕ್ರಾಸಿಂಗ್, ಸೂಚನಾ ಫಲಕಗಳು, ಹೈಮಾಸ್ಟ್ ದ್ವೀಪಗಳು, ಬ್ಲಿಂಕರ್ಸ್‌ಗಳು, ರಸ್ತೆ ಬದಿಯಲ್ಲಿ ಮೆಟಲ್ ಕ್ರಾಸ್ ಬ್ಯಾರಿಯರ್ಸ್‌, ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆಗಳಿಗೆ ಹಂಪ್ಸ್, ಫೂಟ್‌ ಓವರ್ ಬ್ರಿಡ್ಜ್, ಕೆಲವು ಸ್ಥಳಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಒಳಚರಂಡಿ, ಎಂ.ಎಸ್ ರೈಲಿಂಗ್ಸ್, ಕಾಮಗಾರಿ ಕೈಗೊಳ್ಳಲು ಅವಶ್ಯಕತೆಗಳಿದ್ದು, ಇವುಗಳನ್ನು ಆದ್ಯತೆಯ ಮೇಲೆ ಶೀಘ್ರವಾಗಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ವಾಹನ ಸವಾರರು ಸಾರ್ವಜನಿಕ ರಸ್ತೆಯಲ್ಲಿ ಚಲಿಸುವಾಗ ತಪ್ಪದೇ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದ್ದಲ್ಲಿ ಹಾಗೂ ವೇಗಮಿತಿಯೊಳಗೆ ಸುಗಮವಾಗಿ ಸಂಚರಿಸಿದ್ದಲ್ಲಿ ಮಾತ್ರ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಇದಕ್ಕೆ ಸಾರ್ವಜನಿಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.ಕುಂದಾಪುರ ಘಟಕದಿಂದ ಹೊರಡುವ ಗ್ರಾಮೀಣ ಸಾರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪ್ರಯಾಣಿಕರನ್ನು ಇಳಿಸಬಾರದು. ಬಸ್ ನಿಲ್ದಾಣದಲ್ಲಿಯೇ ಪ್ರಯಾಣಿಕರನ್ನು ಇಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳಲ್ಲಿ ಅಗತ್ಯವಿರುವ ಸುರಕ್ಷತಾ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯಾ ಯೋಜನೆಯಡಿ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವುದರೊಂದಿಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲ ಮೊಹಮ್ಮದ್ ಅಜ್ಮಿ, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕಿ ಜೆ.ಜಿ. ಶಾಂತಲಾ, ಪೌರಾಯುಕ್ತ ರಾಯಪ್ಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ
ಜಿಲ್ಲೆಯ ರೈಲ್ವೆ, ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ವಿ,ಸೋಮಣ್ಣ