ಕನ್ನಡಪ್ರಭ ವಾರ್ತೆ ಬೀಳಗಿ
ಇಲ್ಲಿನ ಬಸವೇಶ್ವರ ದೇವಾಲಯದ ಸಭಾಭವನದಲ್ಲಿ ಗುರುವಾರ ನಿಜಶರಣ ಹಡಪದ ಅಪ್ಪಣ್ಣ ಇವರ ೮೯೧ನೇ ಜಯಂತಿ ಉತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಹಡಪದ ಸಮಾಜದವರು ಶ್ರಮಜೀವಿಗಳಾಗಿದ್ದು, ನಿಮ್ಮ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ. ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗಬೇಡಿ, ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಜನಪರ ಕೆಲಸ ಮಾಡಿದೆ ಈ ಬಾರಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿ ರಾಜ್ಯದ ಎಲ್ಲ ವರ್ಗದ ಜನರಿಗೂ ಅನುಕೂಲವಾಗುವಂತೆ ಮಾಡಲಾಗಿದೆ. ಸರ್ಕಾರದಿಂದ ಮಂಜೂರಾದ ಯೋಜನೆಗಳು ಸದುಪಯೋಗ ಮಾಡಿಕೊಂಡು ಸದೃಢ ಸಮಾಜ ನಿರ್ಮಿಸಲು ಮುಂದಾಗಿ ಎಂದು ಸಲಹೆ ನೀಡಿದರು.ವಕೀಲ ರಾಜು ಜಡ್ರಾಮಕುಂಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಗಂಡಗಿಯ ಹಡಪದ ಅಪ್ಪಣ್ಣ ಮಹಾಸಂಸ್ಥಾನ ಮಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಾವಿತ್ರಿ ಶರಣಮ್ಮನವರು, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಅನವೀರಯ್ಯ ಪ್ಯಾಟಿಮಠ, ವಿನಯ ತಿಮ್ಮಾಪೂರ, ಪಪಂ ಅಧ್ಯಕ್ಷ ಮುತ್ತು ಬೋರ್ಜಿ, ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಪ್ರವೀಣ ಪಾಟೀಲ, ಸಿಪಿಐ ಎಚ್.ಬಿ. ಸನಮನಿ, ಕಾಂಗ್ರೆಸ್ ತಾಲೂಕು ಅಧ್ಯಕ್ಷ ಹಣಮಂತ ಕಾಖಂಡಕಿ, ಬಿಜೆಪಿ ತಾಲೂಕಾಧ್ಯಕ್ಷ ಹೊಳಬಸು ಬಾಳಶೆಟ್ಟಿ, ಡಿಎಸ್ ಎಸ್ ಬೆಳಗಾವಿ ವಿಭಾಗೀಯ ಅಧ್ಯಕ್ಷ ಮಹಾದೇವ ಹಾದಿಮನಿ, ಪಪಂ ಸದಸ್ಯರಾದ ಸಂತೋಷ ನಿಂಬಾಳಕ, ಎಚ್.ಡಿ. ವೈದ್ಯ, ಮಲ್ಲಿಕಾರ್ಜುನ ಹಡಪದ, ರವಿ ಕೋಲಾರ, ನಾಗರಾಜ್ ಹಡಪದ ಇದ್ದರು.
ಸ್ವಾಭಿಮಾನಿ ನಿರಂತರ ದುಡಿಮೆ ಕಾಯಕ ಮಾಡುವ ಸಮಾಜ ಹಡಪದ ಅಪ್ಪಣ್ಣ ಸಮಾಜ, ನಿತ್ಯ ಅವರು ಕ್ಷೌರಿಕ ವೃತ್ತಿ ಮಾಡಿ ಜೀವನ ಸಾಗಿಸುತ್ತಿದ್ದವರು. ಈ ಸಮಾಜದ ಬಹುತೇಕ ಕುಟುಂಬಗಳಲ್ಲಿ ಜಮೀನು ಇಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಇಂತಹ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯ ನೀಡಲಾಗುವುದು ಜೊತೆಗೆ ಹಡಪದ ಅಪ್ಪಣ್ಣ ಅಭಿವೃದ್ಧಿ ನಿಗಮದ ಕುರಿತಾಗಿ ಚರ್ಚಿಸಿ ಹಣಕಾಸು ಮಂಜೂರು ಮಾಡಲು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು.
-ಜೆ.ಟಿ. ಪಾಟೀಲ ಶಾಸಕರು ಬೀಳಗಿ