ಶಿಕ್ಷಕರ ಸಮುದಾಯ ಭವನಕ್ಕೆ ₹20 ಲಕ್ಷ ಅನುದಾನ

KannadaprabhaNewsNetwork |  
Published : Nov 20, 2026, 02:45 AM IST
ದೇವರಹಿಪ್ಪರಗಿ | Kannada Prabha

ಸಾರಾಂಶ

ಸಶಕ್ತ ಭಾರತದ ನಿರ್ಮಾಣದ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಶಿಕ್ಷಕರ ಅಶೋತ್ತರಗಳಿಗೆ ಸದಾಕಾಲವೂ ಸ್ಪಂದಿಸುತ್ತೇನೆ. ಶೈಕ್ಷಣಿಕ ಚಟುವಟಿಕೆಗಳಿಗಾಗಿ ಶಿಕ್ಷಕರ ಸಮುದಾಯ ಭವನ ನಿರ್ಮಾಣಕ್ಕೆ ₹20 ಲಕ್ಷ ಅನುದಾನ ನೀಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಸಶಕ್ತ ಭಾರತದ ನಿರ್ಮಾಣದ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಶಿಕ್ಷಕರ ಅಶೋತ್ತರಗಳಿಗೆ ಸದಾಕಾಲವೂ ಸ್ಪಂದಿಸುತ್ತೇನೆ. ಶೈಕ್ಷಣಿಕ ಚಟುವಟಿಕೆಗಳಿಗಾಗಿ ಶಿಕ್ಷಕರ ಸಮುದಾಯ ಭವನ ನಿರ್ಮಾಣಕ್ಕೆ ₹20 ಲಕ್ಷ ಅನುದಾನ ನೀಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಭರವಸೆ ನೀಡಿದರು.

ಪಟ್ಟಣದ ಸರ್ಕಾರಿ ಶಾಲಾ ಆವರಣದಲ್ಲಿ ಬುಧವಾರ ನಡೆದ ಶಿಕ್ಷಕರ ಭವನದ ಭೂಮಿ ಪೂಜೆ ನೆರವೇರಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕು ಕೇಂದ್ರದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಒದಗಿಸಲು ಸಿದ್ಧನಿದ್ದೇನೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಸಹಕಾರ ನೀಡಲಾಗುವುದು. ಪಟ್ಟಣ ಸೇರಿದಂತೆ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮುಂದೆಯೂ ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಮಾತನಾಡಿ, ಶಿಕ್ಷಕರ ಭವನಕ್ಕೆ ಅತ್ಯಂತ ಉತ್ಸಾಹದಿಂದ ಚಾಲನೆ ನೀಡಿರುವ ಶಾಸಕರ ಕಾರ್ಯಕ್ಕೆ ಶಿಕ್ಷಕರು ಸದಾ ಚಿರಋಣಿಯಾಗಿರುತ್ತಾರೆ ಎಂದರು.ಸ್ಥಳೀಯ ಅವೋಗೇಶ್ವರ ತಪೋಧಾಮದ ಶಿವಯೋಗೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಿ.ಸಿ.ತಳಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ತ್ರಿಚಕ್ರ ವಾಹನ ವಿತರಿಸಿದರು. ತಹಸೀಲ್ದಾರ್ ಎಂ.ಜಿ. ಬಿರಾದಾರ, ಪ.ಪಂ ಅಧ್ಯಕ್ಷರ ಪ್ರತಿನಿಧಿ ಬಸವರಾಜ ದೇವಣಗಾಂವ, ಉಪಾಧ್ಯಕ್ಷ ರಮೇಶ ಮಸಬಿನಾಳ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಿಯಾಜ್‌ ಯಲಗಾರ, ತಾಲೂಕು ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ, ಪ.ಪಂ ಸದಸ್ಯರುಗಳಾದ ಕಾಸುಗೌಡ ಬಿರಾದಾರ, ಶಾಂತಯ್ಯ ಜಡಿಮಠ, ಸಿಂಧೂರ ಡಾಲೇರ, ಸೋಮು ದೇವೂರ,ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹಣಮಂತ ಕೊಣದಿ, ಬಿಆರ್‌ಸಿ ಐ.ಎಸ್.ಟಕ್ಕೆ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚನ್ನವೀರ ಕುದರಿ, ಮುಖಂಡರುಗಳಾದ ಡಾ.ಆರ್.ಆರ್.ನಾಯಕ, ಶೇಖರಗೌಡ ಪಾಟೀಲ, ಕಸಾಪ ಅಧ್ಯಕ್ಷ ಸಿದ್ದು ಮೇಲಿನಮನಿ, ದೇವರಹಿಪ್ಪರಗಿ,ಸಿಂದಗಿ,ಆಲಮೇಲ ತಾಲೂಕಿನ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.ಶಿಕ್ಷಕ ಬಸವರಾಜ ನಾಗರಾಳ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಎ.ಎಚ್.ವಾಲೀಕಾರ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಂಕ್ ಸೌಲಭ್ಯ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಿ: ಸದಾಶಿವ ಮೇತ್ರಿ
ಕಲಾ ಜಗತ್ತಿನಲ್ಲಿ ಪ್ರತಿಭೆ ಗುರುತಿಸಿಕೊಳ್ಳಿ