ಮಡಿಕೇರಿ ದಸರಾಕ್ಕೆ 20 ಲಕ್ಷ ರು. ಹೆಚ್ಚುವರಿ ಅನುದಾನ

KannadaprabhaNewsNetwork | Published : Oct 15, 2023 12:45 AM

ಸಾರಾಂಶ

: ಮಡಿಕೇರಿ ದಸರಾಕ್ಕೆ 20 ಲಕ್ಷ ರು. ಹಾಗೂ ಗೋಣಿಕೊಪ್ಪ ದಸರಾಕ್ಕೆ 10 ಲಕ್ಷ ರು. ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಮಡಿಕೇರಿ: ಮಡಿಕೇರಿ ದಸರಾಕ್ಕೆ 20 ಲಕ್ಷ ರು. ಹಾಗೂ ಗೋಣಿಕೊಪ್ಪ ದಸರಾಕ್ಕೆ 10 ಲಕ್ಷ ರು. ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜ್, ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್. ಪೊನ್ನಣ್ಣ ಪ್ರಯತ್ನದಿಂದ ಕೊಡಗು ಜಿಲ್ಲೆಯ ದಸರಾಕ್ಕೆ 30 ಲಕ್ಷ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಮಡಿಕೇರಿ ದಸರಾಕ್ಕೆ 75 ಲಕ್ಷ ರು., ಗೋಣಿಕೊಪ್ಪ ದಸರಾಕ್ಕೆ 50 ಲಕ್ಷ ರು. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಮಾಡಿದೆ.

Share this article