ರೇಬಿಸ್‌ಗೆ ದೇಶದಲ್ಲಿ 20 ಸಾವಿರ ಸಾವು

KannadaprabhaNewsNetwork | Published : Sep 29, 2024 1:46 AM

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ದೇಶದಲ್ಲಿ ಪ್ರತಿ ವರ್ಷ 20 ಸಾವಿರಕ್ಕೂ ಹೆಚ್ಚು ಜನ ರೇಬಿಸ್‌ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ನಾಯಿ ಸೇರಿದಂತೆ ಯಾವುದೇ ಪ್ರಾಣಿಯ ಕಡಿತವನ್ನು ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಾಲೂಕು ಪಶುವೈದ್ಯಾಧಿಕಾರಿ ಡಾ. ಮಾರುತಿ ತಡಲಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ದೇಶದಲ್ಲಿ ಪ್ರತಿ ವರ್ಷ 20 ಸಾವಿರಕ್ಕೂ ಹೆಚ್ಚು ಜನ ರೇಬಿಸ್‌ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ನಾಯಿ ಸೇರಿದಂತೆ ಯಾವುದೇ ಪ್ರಾಣಿಯ ಕಡಿತವನ್ನು ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಾಲೂಕು ಪಶುವೈದ್ಯಾಧಿಕಾರಿ ಡಾ. ಮಾರುತಿ ತಡಲಗಿ ಹೇಳಿದರು.ಪಟ್ಟಣದ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ತಾಲೂಕು ಆರೋಗ್ಯ ಇಲಾಖೆ, ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ರೇಬಿಸ್‌ ನಿಯಂತ್ರಣ ಕಾರ್ಯಕ್ರಮ ಮತ್ತು ವಿಶ್ವ ರೇಬಿಸ್‌ ದಿನಾಚರಣೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸೆ. 28 ಅನ್ನು ವಿಶ್ವ ರೇಬಿಸ್‌ ದಿನವೆಂದು ಆಚರಿಸಲಾಗುತ್ತದೆ ಎಂದರು.ನಾಯಿಕಡಿತ, ರೇಬಿಸ್‌ ಲಕ್ಷಣಗಳು ಮತ್ತು ರೇಬಿಸ್‌ ನಂತರದ ರೋಗ ನಿರೋಧಕ ನಿರ್ವಹಣೆ ಕುರಿತು ಪ್ರೋಜೆಕ್ಟರ್ ಮೂಲಕ ಡಾ.ಮಾರುತಿ ತಡಲಗಿ ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ವಿವರಿಸಿದರು.

ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಮಾತನಾಡಿ, ರೇಬಿಸ್‌ನಿಂದ ಮಾನವ ಸಾವುಗಳನ್ನು ನಿರ್ಮೂಲನೆ ಮಾಡುವದು ಸಾಧಿಸಬಹುದಾದ ಗುರಿಯಾಗಿದೆ. ರೇಬಿಸ್‌ ಯಾವುದೇ ನಿರ್ಧಿಷ್ಟ ಚಿಕಿತ್ಸೆ ಇಲ್ಲದಿರುವುದರಿಂದ ಅದನ್ನು ತಡೆಯಲು ಎಲ್ಲ ಪ್ರಯತ್ನಗಳು ಅಗತ್ಯ. ಸಾಕು ನಾಯಿ ಮತ್ತು ಬೆಕ್ಕುಗಳಿಗೆ ನಿಯಮಿತವಾಗಿ ರೇಬಿಸ್ ನಿರೋಧಕ ಚುಚ್ಚುಮದ್ದನ್ನು ಕೊಡಿಸಬೇಕು, ಅವುಗಳ ಆರೋಗ್ಯದ ಬಗ್ಗೆ ಪಶುವೈದ್ಯರಿಂದ ಸೂಕ್ತ ಸಲಹೆಗಳನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಗ್ರಾಮೀಣ ಮಟ್ಟದಲ್ಲಿ ರೇಬಿಸ್‌ ಬಗ್ಗೆ ಜನಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪಪ್ರಾಚಾರ್ಯ ಪಿ.ವ್ಹಿ.ಮಹಲಿನಮಠ, ತಾಲೂಕಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವೈ.ಚೌಡಕಿ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಪವಾಡಿ ಮಾತನಾಡಿದರು. ಎನ್.ಬಿ.ಪೂಜಾರಿ, ಎಸ್.ಎಸ್.ತಾಳಿಕೋಟಿ, ಎಸ್.ಸಿ.ಜೋಗೂರ, ಶಿವಶರಣ ಬೂದಿಹಾಳ, ವ್ಹಿ.ಪಿ.ನಂದಿಕೋಲ, ಸಂಗಮೇಶ ಚಾವರ್, ಎನ್.ಎಂ.ಶೆಳ್ಳಗಿ, ರೋಹಿತ್ ಸುಲ್ಪಿ, ಚಂದ್ರು ಬಬಲೇಶ್ವರ್, ಎಸ್.ಜಿ.ಮಾರ್ಸನಳ್ಳಿ, ಎಸ್.ಎಚ್.ಜಾಧವ, ಬಿ.ಬಿ.ಜಮಾದಾರ, ಎಸ್.ಎಸ್.ಹೂಗಾರ, ರಾಹುಲ ನಾರಾಯಣಕರ್, ರಾಹುಲ ಕುನ್ನಾಳ, ಸುನೀಲ ಪಾಟೀಲ, ಪ್ರಸನ್ ಜೋಗೂರ, ಗವಿಸಿದ್ದಪ್ಪ ಆನೆಗುಂದಿ ಸೇರಿದಂತೆ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಇನ್ನಿತರರು ಇದ್ದರು.

ಸಿಂದಗಿ : ಪಟ್ಟಣದ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ತಾಲೂಕಾ ಆರೋಗ್ಯ ಇಲಾಖೆ, ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮ ಮತ್ತು ವಿಶ್ವ ರೇಬೀಸ್ ದಿನಾಚರಣೆಯ ಕುರಿತು ಜನಜಾಗೃತಿ ಮೂಡಿಸಿದರು.

Share this article