ಕನ್ನಡಪ್ರಭ ವಾರ್ತೆ ಬೆಳಗಾವಿ
ಖಾನಾಪುರದ ಲೋಕಮಾನ್ಯ ಟಿಳಕ ಭವನದಲ್ಲಿ ಸೋಮವಾರ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವಲ್ಲಿ ಆಂದೋಲನ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಲು ಈ ಆಂದೋಲನದ ಮೂಲಕ ಅವಕಾಶ ಕಲ್ಪಿಸಲಾಗಿದೆ. ಸ್ವೀಕರಿಸಲಾದ ಅಹವಾಲುಗಳ ಕುರಿತು ಸಂಬಂಧಿಸಿದ ಇಲಾಖೆಗಳು ನಿಯಮಿತವಾಗಿ ಪರಿಶೀಲಿಸಿ, ನಿಯಮಾನುಸಾರ ಶೀಘ್ರ ಪರಿಹಾರ ಒದಗಿಸಬೇಕು. ಸಾಧ್ಯವಾದಷ್ಟು ಪ್ರಕರಣಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸತೀಶ್ ಭರವಸೆ ನೀಡಿದರು.
ಶಾಸಕ ವಿಠ್ಠಲ ಹಲಗೇಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಬಸವರಾಜ ಅಡವಿಮಠ, ಜಿಪಂ ಯೋಜನಾ ನಿರ್ದೇಶಕ ರವೀಂದ್ರ ಬಂಗಾರಪ್ಪನವರ, ಖಾನಾಪೂರ ತಹಶೀಲ್ದಾರ ದುಂಡಪ್ಪ ಕೋಮಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ ಕೋಳೇಕರ, ಬೆಳಗಾವಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ.ಎನ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.ಈ ಹಿಂದೆ ಯರಗಟ್ಟಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಸುಮಾರು 250 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ ಸುಮಾರು ಶೇ.30ರಷ್ಟು ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನೂ ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ಪರಿಶೀಲಿಸಿ ವಿಲೇವಾರಿ ಮಾಡಲು ಸೂಚಿಸಲಾಗಿದೆ. ಖಾನಾಪುರ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಿ ಆಂದೋಲನದ ಸದುಪಯೋಗ ಪಡೆದುಕೊಂಡರು.