ಲೋಕಾಯುಕ್ತ 207 ಪ್ರಕರಣ ವಿಚಾರಣೆಗೆ ಬಾಕಿ

KannadaprabhaNewsNetwork |  
Published : Jul 04, 2026, 02:30 AM IST
ಚಿತ್ರ :  3ಎಂಡಿಕೆ3 : ಸಾರ್ವಜನಿಕರ ಸಮಸ್ಯೆ ಆಲಿಸಿದ  ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಲೋಕಾಯುಕ್ತ ವಿಚಾರಣೆಗೆ 207 ಪ್ರಕರಣಗಳು ಬಾಕಿ ಇದ್ದು, 80 ಪ್ರಕರಣಗಳನ್ನು ವೈಯಕ್ತಿಕ ನೆಲೆಯಲ್ಲಿ ಆಯ್ಕೆ ಮಾಡಿಕೊಂಡು ಸಂಬಂಧಿಸಿದ ಅಧಿಕಾರಿಗಳು ಹಾಗೂ ದೂರುದಾರರನ್ನು ವಿಚಾರಿಸಿ ಇತ್ಯರ್ಥ ಮಾಡಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದ್ದಾರೆ.

ಮಡಿಕೇರಿ: ಜಿಲ್ಲೆಯಲ್ಲಿ ಲೋಕಾಯುಕ್ತ ವಿಚಾರಣೆಗೆ 207 ಪ್ರಕರಣಗಳು ಬಾಕಿ ಇದ್ದು, 80 ಪ್ರಕರಣಗಳನ್ನು ವೈಯಕ್ತಿಕ ನೆಲೆಯಲ್ಲಿ ಆಯ್ಕೆ ಮಾಡಿಕೊಂಡು ಸಂಬಂಧಿಸಿದ ಅಧಿಕಾರಿಗಳು ಹಾಗೂ ದೂರುದಾರರನ್ನು ವಿಚಾರಿಸಿ ಇತ್ಯರ್ಥ ಮಾಡಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದ್ದಾರೆ.ನಗರದ ಜಿ.ಪಂ.ಸಭಾಂಗಣದಲ್ಲಿ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಚಾರಣಾ ಸಭೆಗೂ ಮೊದಲು ಮಾತನಾಡಿದರು.

ಕಾನೂನಾತ್ಮಕವಾಗಿ ಕರ್ತವ್ಯ ನಿರ್ವಹಿಸಬೇಕು. ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಸಮಾಜದಲ್ಲಿ ಹುಟ್ಟಿರುವ ಪ್ರತಿಯೊಬ್ಬರಿಗೂ ಉತ್ತಮ ಜೀವನ ನಡೆಸುವ ಹಕ್ಕು ಇದೆ. ಆ ನಿಟ್ಟಿನಲ್ಲಿ ಸೌಲಭ್ಯಗಳನ್ನು ತಲುಪಿಸಲು ಮುಂದಾಗಬೇಕು ಎಂದರು.

ಕಾಲಕಾಲಕ್ಕೆ ಮಾಸಾಶನ ನೀಡಬೇಕು. ಸರ್ಕಾರದ ಸೌಲಭ್ಯ ಸಕಾಲದಲ್ಲಿ ತಲುಪಿಸಬೇಕು. ಕಚೇರಿ ಕೆಲಸ ನಿರ್ವಹಣೆಯಲ್ಲಿ ನಿಧಾನಗತಿ ಇರಬಾರದು ಎಂದು ಎಚ್ಚರಿಸಿದರು.

ಸರ್ಕಾರಿ ಸೇವಕರಲ್ಲಿ ದುರಾಡಳಿತ ಇರಬಾರದು. ಕೆಟ್ಟ ಹೆಸರು ಬರದಂತೆ ಕೆಲಸ ನಿರ್ವಹಿಸಬೇಕು. ಸರ್ಕಾರಿ ಅಧಿಕಾರಿಗಳು ಕರ್ತವ್ಯ ಲೋಪ ಉಂಟಾಗದಂತೆ ಕಾರ್ಯನಿರ್ವಹಿಸಬೇಕು. 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ನೀಡಲಾಗುತ್ತಿದೆ ಎಂದರು. ಭೂಮಿ, ಕಟ್ಟಡ ಪರವಾನಗಿ, ವಿದ್ಯುತ್ ಸಂಪರ್ಕ, ಬಸ್ ಸಂಪರ್ಕ ಮತ್ತಿತರ ಬಗ್ಗೆ ಹಲವು ವಿಚಾರಗಳ ಕುರಿತು ವಿಚಾರಣೆ ನಡೆಯಿತು. ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶರಾದ ಕಿರಣ್ ಪಾಟೀಲ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ಲೋಕಾಯುಕ್ತ ಎಸ್ಪಿ ಉದೇಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶುಭ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಕೊಡಗು ಲೋಕಾಯುಕ್ತ ಡಿವೈಎಸ್‌ಪಿ ದಿನಕರ್ ಶೆಟ್ಟಿ ತಹಸೀಲ್ದಾರ್ ಶ್ರೀಧರ, ನಗರಾಭಿವೃದ್ಧಿ ಯೋಜನಾ ಯೋಜನಾ ನಿರ್ದೇಶಕರಾದ ಮಂಜುನಾಥ ರಾಮಣ್ಣ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್: ಇಲಾಖೆ ಸಿಬ್ಬಂದಿಗೆ ಹೆಚ್ಚುವರಿ ಜವಾಬ್ದಾರಿ
ಬೆಳೆ ವಿಮೆ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರಕ್ಕೆ ಕೋಟ ಪತ್ರ