ಯಾದಗಿರಿ: ತಾಲೂಕಿನ ಹೆಡಗಿಮದ್ರಾ ಶ್ರೀ ಶಾಂತಶಿವಯೋಗೀಶ್ವರ ಜಾತ್ರೆ ಫೆ.21ರಂದು ನಡೆಯಲಿದ್ದು, ಅಂದು ಸಂಜೆ 7 ಗಂಟೆಗೆ ಶ್ರೀಮಠದ ಪೀಠಾಧಿಪತಿಗಳಾದ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಸ್ವಾಮೀಜಿ ನೇತೃತ್ವದಲ್ಲಿ ಭವ್ಯ ರಥೋತ್ಸವ ಜರುಗಲಿದೆ ಎಂದು ಶ್ರೀಮಠದ ಭಕ್ತರಾದ ರಾಚನಗೌಡ ಮುದ್ನಾಳ ತಿಳಿಸಿದರು.
ಫೆ.21ರಂದು ರಥೋತ್ಸವ ನಂತರ ನಡೆಯುವ ಧಾರ್ಮಿಕ ಸಾಂಸ್ಕೃತಿಕ ಉತ್ಸವ ಸಾನ್ನಿಧ್ಯವನ್ನು ರಾಯಚೂರು ಕಿಲ್ಲಾ ಬ್ರಾಹನ್ಮಠದ ಶಾಂತಮಲ್ಲ ಶಿವಾಚಾರ್ಯ ಶ್ರೀ, ದೇವಾಪುರದ ಜಡಿ ಶಾಂತಲಿಂಗೇಶ್ವರ ಶ್ರೀ, ಕಲಬುರಗಿಯ ಡಾ.ರಾಜಶೇಖರ ಶಿವಾಚಾರ್ಯ ಶ್ರೀ. ಚನದಾಪುರಿ ಹಿರೇಮಠ ಕಲಬುರ್ಗಿ, ತೊನಸನಳ್ಳಿಯ ರೇವಣಸಿದ್ಧಚರಂತೇಶ್ವರ ಶಿವಾಚಾರ್ಯ ಶ್ರೀಗಳು ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಚನ್ನಾರಡ್ಡಿ ಪಾಟೀಲ ತುನ್ನೂರ, ಶರಣಗೌಡ ಕಂದಕೂರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ರಾಚನಗೌಡ ಮುದ್ನಾಳ ಪ್ರಾಸ್ತಾವಿಕ ಮಾತನಾಡಲಿದ್ದು, ಮುಖ್ಯ ಅತಿಥಿಗಳಾಗಿ ಮಹೇಶರಡ್ಡಿಗೌಡ ಮುದ್ನಾಳ, ನಾಗರತ್ನ ಕುಪ್ಪಿ, ಚೆನ್ನಪ್ಪಗೌಡ ಮೊಸಂಬಿ, ಬಸರಡ್ಡಿಗೌಡ ಅನಪೂರ, ಬಸ್ಸುಗೌಡ ಬಿಳ್ತಾರ, ವಿನಾಯಕ ಮಾಲಿಪಾಟೀಲ್, ರಾಮರಡ್ಡಿ ಸಾಹು ತಂಗಡಗಿ, ಚಂದ್ರಾಯಗೌಡ ಗೋಗಿ, ಭೀಮನಗೌಡ ಕ್ಯಾತನಾಳ, ಬಸವರಾಜ ಚಂಡ್ರಿಕೆ ಸೇರಿದಂತೆ ಮತ್ತಿತರರು ಆಗಮಿಸಲಿದ್ದಾರೆಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಸಿದ್ದುಗೌಡ ಕಾಮರಡ್ಡಿ, ಸಿದ್ರಾಮರಡ್ಡಿ ಅಣಿಬಿ, ವೀರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಮತ್ತಿತರರಿದ್ದರು.
ಯಾದಗಿರಿ: ಫೆ.19 ರಂದು ಸಂಜೆ 5 ಗಂಟೆಗೆ ಶ್ರೀಮಠದ ವಿದ್ಯಾಸಂಸ್ಥೆಯಾದ ಎಸ್.ಎಸ್.ವಿದ್ಯಾಪೀಠದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಸಾನ್ನಿಧ್ಯವನ್ನು ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರಸೋಮೇಶ್ವರ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಸ್ವಾಮೀಜಿ ವಹಿಸಲಿದ್ದು, ದೇವಾಪುರದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಹೆಡಗಿಮದ್ರಾ ಶ್ರೀ ಶಾಂತಶಿವಯೋಗಿ ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಲಕ್ಷ್ಮೀ ಅರುಣಾ ರೆಡ್ಡಿ ಉದ್ಘಾಟಿಸಲಿದ್ದಾರೆ ಎಂದು ರಾಚನಗೌಡ ಮುದ್ನಾಳ ತಿಳಿಸಿದರು.