ರಾಜ್ಯದಲ್ಲಿ 2127 ಪೌರ ಕಾರ್ಮಿಕರ ಕೆಲಸ ಕಾಯಂ: ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್

KannadaprabhaNewsNetwork |  
Published : Sep 28, 2024, 01:32 AM ISTUpdated : Sep 28, 2024, 12:04 PM IST
ಚಿತ್ರ 27ಬಿಡಿಆರ್55 | Kannada Prabha

ಸಾರಾಂಶ

ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿಗೆ ಒಳಪಟ್ಟ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು.

  ಬೀದರ್ : ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿಗೆ ಒಳಪಟ್ಟ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು.

ಅವರು ರಾಜ್ಯ ಪೌರ ನೌಕರರ ಸಂಘದಿಂದ ನಗರದ ಜನವಾಡ ರಸ್ತೆಯಲ್ಲಿರುವ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ ಈ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಒಂದು ದಿನದ ರಜೆ ಕೂಡ ಘೋಷಿಸಲಾಗಿದೆ ಎಂದ ಅವರು ಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ವಾಟರ್ ಮೆನ್ ಹಾಗೂ ಚಾಲಕರ ಸೇವೆಯನ್ನು ಕಾಯಂಗೊಳಿಸುವ ದಿಸೆಯಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು.

ನಗರ, ಪಟ್ಟಣಗಳನ್ನು ಸ್ವಚ್ಛ, ಸುಂದರವಾಗಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹಳ ಮಹತ್ವದ್ದಾಗಿದೆ. ಪೌರ ಕಾರ್ಮಿಕರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ತಿಳಿಸಿದರು.

ಹೊರ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ 48 ಜನರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು.

ಸಂಸದ ಸಾಗರ್ ಖಂಡ್ರೆ ಮಾತನಾಡಿ, ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನಿಮ್ಮ ಕೈ ಬಿಡೋದಿಲ್ಲ. ಪೌರ ಕಾರ್ಮಿಕರ ಸ್ವಚ್ಛತಾ ಕಾರ್ಯದಿಂದಲೇ ಸಮಾಜ ಸ್ವಚ್ಛವಾಗಿರುತ್ತದೆ. ಕೆಲಸ ಮಾಡುವ ನಿಮ್ಮ ಗಟ್ಟಿಯಾದ ಕೈಗಳು ನಮಗೆಲ್ಲ ಮಾದರಿ. ಕೊರೊನಾ ಸಂದರ್ಭದಲ್ಲಿ ನಿಮ್ಮ ಸೇವೆ ಅಪಾರವಾಗಿದೆ. ನಿಮ್ಮ ರಕ್ಷಣೆಯೇ ನಮ್ಮ ಗುರಿಯಾಗಿದೆ ಎಂದು ಸಾಗರ ಖಂಡ್ರೆ ತಿಳಿಸಿದರು.

ನಗರ ಸಭೆ ಅಧ್ಯಕ್ಷ ಮಹಮದ ಗೌಸ್, ಮಾಜಿ ಎಂಎಲ್ಸಿ ಅರವಿಂದಕುಮಾರ ಅರಳಿ, ಆದಿಜಾಂಬವ ನಿಗಮದ ಅಧ್ಯಕ್ಷ ಮಂಜುನಾಥ, ರಾಜ್ಯ ಪೌರ ನೌಕರರ ಸಂಘದ ರಾಜ್ಯ ಅಧ್ಯಕ್ಷ ಕೆ. ಪ್ರಭಾಕರ, ಕಾರ್ಯಾಧ್ಯಕ್ಷ ಸುರೇಶ ಬಬಲಾದ, ಪ್ರಧಾನ ಕಾರ್ಯದರ್ಶಿ ಎಂ. ಗುರುನಾಥ, ಜಿಲ್ಲಾ ಅಧ್ಯಕ್ಷ ಸೈಯದ್ ಖಾನ್, ಪ್ರಧಾನ ಕಾರ್ಯದರ್ಶಿ ಸುಭಾಷ್ ಧನ್ನೂರಕರ್ ಮತ್ತಿತರರು ಉಪಸ್ಥಿತರಿದ್ದರು. 

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು