‘ಜಿಎಂ ಅರೆನಾ’ದಲ್ಲಿ 21ನೇ ವಾರ್ಷಿಕ ಕ್ರೀಡಾಕೂಟ ಸಂಪನ್ನ

KannadaprabhaNewsNetwork |  
Published : Nov 10, 2025, 02:00 AM IST
08ಜಿಎಂ | Kannada Prabha

ಸಾರಾಂಶ

ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನ ಸುಸಜ್ಜಿತ ಕ್ರೀಡಾಂಗಣ ಜಿ ಎಮ್ ಅರೆನಾದಲ್ಲಿ 21ನೇ ವಾರ್ಷಿಕ ಕ್ರೀಡಾಕೂಟ ಯಶಸ್ವಿಯಾಗಿ ಜರುಗಿತು.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನ ಸುಸಜ್ಜಿತ ಕ್ರೀಡಾಂಗಣ ಜಿ ಎಮ್ ಅರೆನಾದಲ್ಲಿ 21ನೇ ವಾರ್ಷಿಕ ಕ್ರೀಡಾಕೂಟ ಯಶಸ್ವಿಯಾಗಿ ಜರುಗಿತು.

ಕ್ರೀಡಾ ಪತ್ರಕರ್ತ ಸೋಮಶೇಖರ ಪಡುಕರೆ ಅವರು ಕ್ರೀಡಾಜ್ಯೋತಿಯನ್ನು ಬೆಳಗಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ನಿಮ್ಮ ಜೀವನಕ್ಕಾಗಿ ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಿ ಆದರೆ ನಿಮ್ಮ ಬದುಕಿನ ಅಂತರಾತ್ಮದಲ್ಲಿ ಒಬ್ಬ ಕ್ರೀಡಾಪಟುವಿರಲಿ ಎಂದು ಕರೆನೀಡಿದರು.ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್‌ರವರು ಧ್ವಜಾರೋಹಣಗೈದು ಮಾತನಾಡಿ ಶಾಲಾ ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ಯೋಗ, ಕರಾಟೆ, ನೃತ್ಯ ಕೌಶಲದ ಕುರಿತು ಪ್ರಶಂಸಿಸಿದರು. ಕ್ರೀಡೆಯು ನಮ್ಮ ಮಾನಸಿಕ ಆರೋಗ್ಯವನ್ನು ವೃದ್ಧಿಸುತ್ತದೆ ಎಂದು ತಿಳಿಸಿದರು.

ಶಾಲಾಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿಯವರು ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣಕ್ಕೆ ಮಹತ್ವ ನೀಡದೇ, ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಮಹತ್ವ ನೀಡಿ ಅನೇಕ ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಗೈದಿದ್ದಾರೆ ಎಂದು ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಬ್ರಹ್ಮಾವರ ಪಬ್ಲಿಕ್ ಸ್ಕೂಲ್ ದೈಹಿಕ ಶಿಕ್ಷಣ ನಿರ್ದೇಶಕ ಜಗದೀಶ್ ಕೆ. ಮಾತನಾಡಿ ಕ್ರೀಡೆಯು ನಮ್ಮಲ್ಲಿ ಜೀವನ ಕೌಶಲ, ನಾಯಕತ್ವ ಗುಣ, ಮನೋಲ್ಲಾಸ ಮತ್ತು ನಾವೆಲ್ಲರೂ ಒಂದೇ ಎಂಬ ಮನೋಭಾವನೆಯನ್ನು ಮೂಡಿಸುತ್ತದೆ ಎಂದು ತಿಳಿಸಿದರು.ಜಿ ಎಮ್ ಗ್ಲೋಬಲ್ ಸ್ಕೂಲ್ ನ ಆಡಳಿತ ನಿರ್ದೇಶಕ ಪ್ರಣವ್ ಶೆಟ್ಟಿ, ಶಾಲಾಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನೂಷಾ ಸುಬ್ರಹ್ಮಣ್ಯಂ, ಶ್ರೀಮಾ ಪ್ರಣವ್ ಶೆಟ್ಟಿ, ದಿನೇಶ್ ಭಟ್, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ಮೇಧಾ ತಂಡ ಚಾಂಪಿಯನ್‌ಶಿಪ್ ಪಡೆದುಕೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಥಣಿಯಲ್ಲಿ ರಸ್ತೆ ಅತಿಕ್ರಮಣ ತೆರವು
ಔದ್ಯೋಗಿಕ ಕ್ಷೇತ್ರದಲ್ಲಿ ಕೌಶಲ್ಯಯುಕ್ತ ವ್ಯಕ್ತಿತ್ವ ಅಗತ್ಯ: ಶ್ರೀನಿವಾಸನ್ ವರದರಾಜನ್‌