ಕನ್ನಡಪ್ರಭ ವಾರ್ತೆ ಮಳವಳ್ಳಿಮಂಡ್ಯದಲ್ಲಿ ಫೆ.21ರಂದು ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಗಳ 79ನೇ ಜಯಂತ್ಯುತ್ಸವ ಹಾಗೂ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ 10ನೇ ವರ್ಷದ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಒಕ್ಕಲಿಗರ ಸೇವಾ ಟ್ರಸ್ಟ್ ಜಿಲ್ಲಾಧ್ಯಕ್ಷ ರವೀಂದ್ರ ತಿಳಿಸಿದರು.
ಪಟ್ಟಣದಲ್ಲಿ ನಡೆದ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಒಕ್ಕಲಿಗರ ಸೇವಾ ಟ್ರಸ್ಟ್ ಮಂಡ್ಯ, ಅಖಿಲ ಕನಾ೯ಟಕ ಒಕ್ಕಲಿಗರ ಸಂಘ ಜಿಲ್ಲಾ ಘಟಕ ಆಶ್ರಯದಲ್ಲಿ ನಗರದ ರೈತ ಸಭಾಂಗಣದಲ್ಲಿ ಸಮುದಾಯವನ್ನು ಒಗ್ಗೂಡಿಸಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮವನ್ನು ವಿಶೇಷ ರೀತಿಯಲ್ಲಿ ಆಯೋಜನೆ ಮಾಡಲಾಗುತ್ತಿದೆ ಎಂದರು.ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರು ಶಿಕ್ಷಣ, ಆರೋಗ್ಯ ಸಮಾಜಿಕ ಸೇವೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಭೈರವೈಕ್ಯ ಶ್ರೀಗಳನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಜಯದೇವ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಮಂಜುನಾಥ್ ಅವರನ್ನು ಅಭಿನಂದಿಸುವ ಮಹತ್ವದ ಕಾರ್ಯ ಹಮ್ಮಿಕೊಳ್ಳಲಾಗಿದೆ. ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಸಂಸದೆ ಸುಮಾಲತಾ, ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಪಿ.ಎಂ. ನರೇಂದ್ರಸ್ವಾಮಿ, ಕೆ.ಎಂ. ಉದಯ್, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ. ಮಂಜು, ಮರಿತಿಬ್ಬೇಗೌಡ, ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್ಪಿ ಯತೀಶ್, ಅಪಾರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜು, ಅಖಿಲ ಕರ್ನಾಟಕ ರಾಜ್ಯಾಧ್ಯಕ್ಷ ಸಿ.ಜೆ. ಗಂಗಾಧರ್ ಸೇರಿದಂತೆ ಇತರರು ಪಾಲ್ಗೊಳ್ಳುವರು ಹೇಳಿದರು.
ಅಖಿಲ ಕನಾ೯ಟಕ ಒಕ್ಕಲಿಗರ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಸಿ.ಜೆ. ಸುಜಾತ ಕೃಷ್ಣ ಮಾತನಾಡಿ, ಒಕ್ಕಲಿಗರ ಸಂಘದ ಎಲ್ಲ ಸಂಘಟನೆಗಳ ಜೊತೆಗೂಡಿ ಸಂಕ್ರಾಂತಿ ಸುಗ್ಗಿ ಸಂಭ್ರಮ, ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಸಭೆಯಲ್ಲಿ ಒಕ್ಕಲಿಗರ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ತಮ್ಮಯ್ಯ, ರಾಜ್ಯ ಸಂಚಾಲಕ ಕೃಷ್ಣೇಗೌಡ, ಮುಖಂಡರಾದ ಜವರೇಗೌಡ, ಜಯಮ್ಮ, ತಾಲೂಕು ಅಧ್ಯಕ್ಷ ಕೆ.ಸಿ. ನಾಗೇಗೌಡ, ಕುಮಾರ್, ಮುದ್ದುಮಲ್ಲು ಚಂದ್ರು, ಲಲಿತಾ ಸೇರಿದಂತೆ ಇತರರು ಇದ್ದರು.