ದ.ಕ. ಜಿಲ್ಲೆಯಲ್ಲಿ 17.85 ಲಕ್ಷ ಮತದಾರರು

KannadaprabhaNewsNetwork |  
Published : Jan 24, 2024, 02:03 AM IST
ಅಧಿಕಾರಿಗಳ ಸಭೆ ನಡೆಸಿದ ಡಾ.ಬಿ.ಆರ್‌. ಮಮತಾ | Kannada Prabha

ಸಾರಾಂಶ

ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈಗಿನ ಕರಡು ಮತದಾರರ ಪಟ್ಟಿಯಲ್ಲಿ 17,85,835 ಮತದಾರರು ಇದ್ದಾರೆ. ಈ ಪೈಕಿ 8,73,389 ಗಂಡಸರು, 9,12,369 ಮಹಿಳೆಯರು ಹಾಗೂ 77 ತೃತೀಯ ಲಿಂಗಿಗಳು ಇದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತೆ ಡಾ.ಬಿ.ಆರ್. ಮಮತಾ ಅವರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿಗಳ ಮಾಹಿತಿ ಪಡೆದರು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈಗಿನ ಕರಡು ಮತದಾರರ ಪಟ್ಟಿಯಲ್ಲಿ 17,85,835 ಮತದಾರರು ಇದ್ದಾರೆ. ಈ ಪೈಕಿ 8,73,389 ಗಂಡಸರು, 9,12,369 ಮಹಿಳೆಯರು ಹಾಗೂ 77 ತೃತೀಯ ಲಿಂಗಿಗಳು ಇದ್ದಾರೆ ಎಂದರು.ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಜಿಲ್ಲೆಯಲ್ಲಿ 27,740 ಹೆಸರು ಸೇರ್ಪಡೆ, 15,961 ತಿದ್ದುಪಡಿ, 24,870 ಹೆಸರು ತೆಗೆದು ಹಾಕಲಾಗಿದೆ ಎಂದು ಅವರು ಹೇಳಿದರು.ಜಿಲ್ಲೆಯಲ್ಲಿ ಪ್ರಸ್ತುತ 22,511 ಯುವ ಮತದಾರರು (18-19 ವರ್ಷ) ಇದ್ದಾರೆ. ಮತದಾರರ ಪಟ್ಟಿಯ ಲಿಂಗಾನುಪಾತ 1000: 1048 ಇದೆ. ಒಟ್ಟು 13,755 ವಿಕಲಚೇತನರು ಹಾಗೂ 233 ಅನಿವಾಸಿ ಭಾರತೀಯರು ಮತದಾರರ ಪಟ್ಟಿಯಲ್ಲಿ ಇದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.ಸಭೆಯ ಬಳಿಕ ವೀಕ್ಷಕರಾದ ಡಾ. ಬಿ.ಆರ್. ಮಮತಾ ಅವರು ಬೆಳ್ತಂಗಡಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತಗಟ್ಟೆಗಳ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಅವರು, ಯುವ ಮತದಾರರ ಸೇರ್ಪಡೆ ಹಾಗೂ ಮೃತ ಮತದಾರರ ಹೆಸರು ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ಪುನರ್ ಪರಿಶೀಲಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ಮತ್ತು ಮೇಲ್ವಿಚಾರಕರಿಗೆ ನಿರ್ದೇಶಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್‌ ಬಿಡಿ ಪುಸ್ತಕ ಹಿಡಿ’ ಅಭಿಯಾನ
ಬಾಗಲಕೋಟೆ ಗಲಭೆಗೆ ಕೇಸರಿ ಪಡೆ ಗರಂ