ಅಕ್ಟೋಬರ್‌ ಕೊನೆಗೆ 23ನೇ ಕನ್ನಡ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ

KannadaprabhaNewsNetwork |  
Published : Oct 08, 2026, 01:15 AM IST
ಫೋಟೋ- ಸಾಹಿತ್ಯ | Kannada Prabha

ಸಾರಾಂಶ

ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ರಕ್ಷಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾ 23 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಆಯೋಜಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ರಕ್ಷಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾ 23 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಆಯೋಜಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.ನಗರದ ಕನ್ನಡ ಭವನದಲ್ಲಿ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾಹಿತಿ ನೀಡಿದ ಅವರು, ಈ ಸಮ್ಮೇಳನ ಕೇವಲ ಸಾಹಿತಿಗಳ ಸಮ್ಮಿಲನವಲ್ಲ. ಜಿಲ್ಲೆಯ ಸಾವಿರಾರು ಕನ್ನಡಿಗರು ಸೇರುವ ಒಂದು ಸಾಂಸ್ಕೃತಿಕ ಉತ್ಸವವಾಗಿರುತ್ತದೆ. ಕನ್ನಡದ ಉಳಿವಿಗಾಗಿ ನಡೆಯುವ ಈ ಸಮ್ಮೇಳನ ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ ಎಂದರು.ನಾಡು-ನುಡಿ, ನೆಲ-ಜಲದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಇಂದಿನ ಜಿಲ್ಲಾ ಸಾಹಿತ್ಯ ಸಮ್ಮೇಳನವು ಯುವ ಜನತೆಯಲ್ಲಿ ದೇಶ ಪ್ರೇಮ ಮತ್ತು ಭಾಷಾಭಿಮಾನ ಬಿತ್ತಿ, ಹೊಸ ಪೀಳಿಗೆಯು ಕನ್ನಡದ ಕಹಳೆಯನ್ನು ಜಿಲ್ಲೆಯಾದ್ಯಂತ ಮೊಳಗಿಸುವ ಪ್ರಯತ್ನ ಈ ಸಮ್ಮೇಳನದ್ದಾಗಿದೆ ಎಂದು ವಿವರಣೆ ನೀಡಿದರು.ಸಮ್ಮೇಳನಾಧ್ಯಕ್ಷರ ಆಯ್ಕೆ ಮತ್ತು ಸ್ವಾಗತ ಸಮಿತಿ ರಚನೆ ಸೇರಿ ವಿವಿಧ ಸಮಿತಿಗಳನ್ನು ಮುಂದಿನ ವಾರದಲ್ಲಿ ಜರುಗಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು. ನಾಲ್ಕೂವರೆ ವರ್ಷಗಳಲ್ಲಿ ಈಗಾಗಲೇ 5 ಜಿಲ್ಲಾ ಸಮ್ಮೇಳನಗಳು, 15 ವಿಶೇಷ ಸಮ್ಮೇಳನಗಳು, ನೂರಾರು ರಚನಾತ್ಮಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ರಾಜ್ಯದಲ್ಲೇ ಹೆಚ್ಚು ಕಾರ್ಯಕ್ರಮಗಳು ಮಾಡಿದ ಕೀರ್ತಿ ಜಿಲ್ಲೆಯ ಪರಿಷತ್‍ಗೆ ಸಲ್ಲುತ್ತದೆ ಎಂದರು. ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ ಮಾತನಾಡಿ, ಆಡಂಬರವಿಲ್ಲದೆ, ಅರ್ಥಪೂರ್ಣ ಚರ್ಚೆಗಳು ಮತ್ತು ಸಾಂಸ್ಕೃತಿಕ ಕ್ಷೇತ್ರದ ಕುರಿತಾದ ವಿಷಯಗಳ ವಿನಿಮಯಕ್ಕೆ ಆದ್ಯತೆ ನೀಡುವುದರ ಮೂಲಕ ಈ ಸಮ್ಮೇಳನವನ್ನು ಇನ್ನಷ್ಟು ಅರ್ಥಪೂರ್ಣವಾಗಿ ಜರುಗಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು. ಪ್ರಮುಖರಾದ ಶಕುಂತಲಾ ಪಾಟೀಲ ಜಯಶ್ರೀ ಜಮಾದಾರ, ಡಾ. ರೆಹಮಾನ್ ಪಟೇಲ್, ಕಲ್ಯಾಣಕುಮಾರ ಶೀಲವಂತ, ಶಿವಾನಂದ ಸುರವಸೆ, ಶಿವಾನಂದ ಪೂಜಾರಿ, ಧರ್ಮರಾಜ ಜವಳಿ, ಜೆ.ಎಸ್. ವಿನೋದಕುಮಾರ, ಸಿದ್ಧಲಿಂಗ ಬಾಳಿ, ಗಣೇಶ ಚಿನ್ನಾಕಾರ, ಸೋಮಶೇಖರಯ್ಯ ಹೊಸಮಠ, ಹಣಮಂತರಾವ ಪೆಂಚನಪಳ್ಳಿ, ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ರಾಜೇಂದ್ರ ಮಾಡಬೂಳ, ರಾಜಶೇಖರ ಚೌದ್ರಿ, ಸಂದೀಪ ಭರಣಿ, ರಮೇಶ ಬಡಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಳುಪಿನಕಟ್ಟೆ ಬಳಿ ಹೈಕೋರ್ಟ್ ಪೀಠ ಸ್ಥಾಪಿಸಲು ಮನವಿ
ಕೂಡಲ ಸಂಗಮದಲ್ಲಿ ಗೋಮಾಂಸ ಭಕ್ಷಣೆ ವಿರುದ್ಧ ಸೂಕ್ತ ಕ್ರಮವಾಗಲಿ: ಮುತಾಲಿಕ್‌