ಭಾರಿ ಮಳೆಯಿಂದ 2454 ವಿದ್ಯುತ್‌ ಕಂಬಗಳಿಗೆ ಹಾನಿ: ಸೆಸ್ಕ್‌

KannadaprabhaNewsNetwork |  
Published : Jul 31, 2024, 01:04 AM IST
32 | Kannada Prabha

ಸಾರಾಂಶ

ತೀವ್ರ ಮಳೆ, ಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 2454 ಕಂಬಗಳು ಹಾಗೂ 46 ಸಂಖ್ಯೆಯ ವಿದ್ಯುತ್ ಪರಿವರ್ತಕಗಳು ಮತು 1.72 ಕಿ.ಲೋಮೀಟರ್ ವಾಹಕಗಳು ಹಾನಿಗೊಳಗಾಗಿರುತ್ತದೆ. ಈಗಾಗಲೇ 2150 ಕಂಬಗಳನ್ನು ಹಾಗೂ ಎಲ್ಲಾ ಪರಿವರ್ತಕಗಳನ್ನು ದುರಸ್ತಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಸೆಸ್ಕ್‌ ಮೂಲಗಳು ತಿಳಿಸಿವೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ತೀವ್ರ ಮಳೆ, ಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 2454 ಕಂಬಗಳು ಹಾಗೂ 46 ಸಂಖ್ಯೆಯ ವಿದ್ಯುತ್ ಪರಿವರ್ತಕಗಳು ಮತು 1.72 ಕಿ.ಲೋಮೀಟರ್ ವಾಹಕಗಳು ಹಾನಿಗೊಳಗಾಗಿರುತ್ತದೆ. ಈಗಾಗಲೇ 2150 ಕಂಬಗಳನ್ನು ಹಾಗೂ ಎಲ್ಲಾ ಪರಿವರ್ತಕಗಳನ್ನು ದುರಸ್ತಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಸೆಸ್ಕ್‌ ಮೂಲಗಳು ತಿಳಿಸಿವೆ.

ಮಳೆ-ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ಪ್ರತಿದಿನ ಸರಾಸರಿ 80-100 ಕಂಬಗಳ ಮುರಿಯುವಿಕೆ ವರದಿಯಾಗುತ್ತಿದೆ. ವಿದ್ಯುತ್ ಜಾಲದ ದುರಸ್ತಿ ಕಾರ್ಯ ಚುರುಕಗೊಳಿಸಲು, ವಿದ್ಯುತ್ ಜಾಲವನ್ನು ಪುನಃ ಸ್ಥಾಪಿಸಲು ಮಡಿಕೇರಿ ವಿಭಾಗದ 231 ಸಂಖ್ಯೆಯ ಸಿಬ್ಬಂದಿ, ಇತರ ವಿಭಾಗಗಳಿಂದ ಹಾಗೂ ಹೊರಗುತ್ತಿಗೆಯಿಂದ 136 ಸಿಬ್ಬಂದಿ, ವಿದ್ಯುತ್ ಗುತ್ತಿಗೆದಾರರ 135 ಸಿಬ್ಬಂದಿ ಒಟ್ಟು 502 ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಎಲ್ಲರೂ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ 10 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ವಿಪರೀತ ಗಾಳಿಯಿಂದ ಕಂಬದ ಬದಲಾವಣೆ ಕಾಮಗಾರಿ ಹಾಗೂ ಮಾರ್ಗದ ವಿಫಲತೆ ಸರಿಪಡಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದ್ದು, ಮಳೆಗಾಳಿಯಿಂದ ಪದೇ ಪದೇ ವಿದ್ಯುತ್ ಜಾಲಕ್ಕೆ ಹಾನಿ ಉಂಟಾಗುತ್ತಿರುವುದರಿಂದ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.

ಜಿಲ್ಲೆಯಾದ್ಯಂತ ಮಳೆ, ಗಾಳಿಯಿಂದ ಶಾಖಾಧಿಕಾರಿಗಳು ವಿದ್ಯುತ್ ಜಾಲದ ಮರುಸ್ಥಾಪನೆಯಲ್ಲಿ ನಿರತರಾಗಿದ್ದಾರೆ. ಶಾಖಾಧಿಕಾರಿಗಳು ಬ್ರೇಕ್‌ಡೌನ್ ನಿರ್ವಹಣೆ ಕಾಮಗಾರಿಗಳಲ್ಲಿ ನಿರತರಾಗಿದ್ದು, ಕೆಲವೊಂದು ಸಂದರ್ಭಗಳಲ್ಲಿ ಗ್ರಾಹಕರ ದೂರವಾಣಿ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಗ್ರಾಹಕರ ದೂರಗಳನ್ನು ದಾಖಲಿಸಿ ನಿವಾರಿಸುವ ನಿಟ್ಟಿನಲ್ಲಿ ಮಡಿಕೇರಿ ವಿಭಾಗಕ್ಕೆ ಪ್ರತ್ಯೇಕವಾಗಿ ಟೋಲ್ ಫ್ರೀ ನಂಬರ್ 9141038902 ನೀಡಲಾಗಿದ್ದು, ವಿದ್ಯುತ್ ಜಾಲದ ಯಾವುದೇ ಸಮಸ್ಯೆ ಇದ್ದಲ್ಲಿ ಗ್ರಾಹಕರು ಈ ಸಂಖ್ಯೆಯನ್ನು ಸಂಪರ್ಕಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ
ತೈಲ ಕೊರತೆ ವದಂತಿ: ಖರೀದಿಗೆ ಮುಗಿಬಿದ್ದ ಜನ-ಬಂಕ್‌ಗಳಲ್ಲಿ ಭಾರೀ ರಷ್‌