23ರಂದು ಬೆಂಗಳೂರಿನಲ್ಲಿ ರೈತರ ಮಹಾ ಅಧಿವೇಶನ । ಪತ್ರಿಕಾಗೋಷ್ಠಿಯಲ್ಲಿ ಶಾಂತಕುಮಾರ್ ಮಾಹಿತಿ
ಕಳೆದ ಎರಡು ವರ್ಷದಿಂದ ಅತಿವೃಷ್ಟಿ ಹಾಗೂ ಈ ಬಾರಿ ಉಂಟಾಗಿರುವ ಬರಗಾಲಕ್ಕೆ ರೈತರ ಬದುಕು ದುಸ್ತರವಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಕೇವಲ 2000 ರು. ಬರ ಪರಹಾರ ನೀಡುವುದು ಸರಿಯಲ್ಲ. ಕೂಡಲೇ ಎಕರೆಗೆ 25 ಸಾವಿರ ರು. ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಒತ್ತಾಯಿಸಿದರು.
ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದು, ಬೆಳೆ ನಾಶವಾಗಿವೆ. ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟ ನೆರವು ಸಾಲಮನ್ನಾ 12 ಲಕ್ಷ ಕೋಟಿ ರುಪಾಯಿ ಮಾಡಿರುವ ರೀತಿ ರೈತರ ಸಾಲಮನ್ನಾ ಮಾಡಬೇಕು. ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಯಾವುದೇ ಪರಿಹಾರ ಕ್ರಮಗಳನ್ನು ಸರ್ಕಾರಗಳು ಕೈಗೊಳ್ಳುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬದುಕಿನಲ್ಲಿ ಚೆಲ್ಲಾಟವಾಡುತ್ತಿವೆ ಎಂದು ಆರೋಪಿಸಿದರು.ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು, ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೂಡಲೇ ಜಾರಿ ಮಾಡಬೇಕು. ಕಬ್ಬಿನ ಉತ್ಪಾದನಾ ವೆಚ್ಚ ಏರಿಕೆಯಾಗಿದೆ. ಪ್ರತಿ ಟನ್ ಕಬ್ಬಿನ ಉತ್ಪಾದನಾ ವೆಚ್ಚ 3580, ಕೇಂದ್ರ ಸರ್ಕಾರ ನಿಗದಿ ಮಾಡಿರುವ ದರ 3150 ರು. ಆಗಿದ್ದು, ಇದು ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ಕಬ್ಬು ಬೇಸಾಯ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ಆರ್‌ಇಜಿ ಯೋಜನೆಯನ್ನು ಲಿಂಕ್ ಮಾಡಬೇಕು ಎಂದು ಆಗ್ರಹಿಸಿದರು.
23ಕ್ಕೆ ರೈತರ ಮಹಾ ಅಧಿವೇಶನ:
ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ದೇವಕುಮಾರ್ ಮತ್ತಿತರರು ಇದ್ದರು.