ಪಾಲಿಕೆಯಿಂದ 250 ಪೌರಕಾರ್ಮಿಕರ ಸೇವೆ ಕಾಯಂ: ಆಯುಕ್ತೆ

KannadaprabhaNewsNetwork |  
Published : Jul 08, 2024, 12:39 AM IST
ಕ್ಯಾಪ್ಷನಃ7ಕೆಡಿವಿಜಿ33ಃದಾವಣಗೆರೆಯಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಪೌರಕಾರ್ಮಿಕರಿಗೆ ಖಾಯಂಗೊಳಿಸಿದ ಆದೇಶ ಪ್ರತಿ ನೀಡಿದರು.........ಕ್ಯಾಪ್ಷನಃ7ಕೆಡಿವಿಜಿ34ಃದಾವಣಗೆರೆಯಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ವಿಕಲಚೇತನ ಫಲಾನುಭವಿಗಳಿಗೆ ತ್ರಿ-ಚಕ್ರವಾಹನ ಮತ್ತು ಜೆರಾಕ್ಸ್ ಯಂತ್ರಗಳನ್ನು ವಿತರಿಸಿದರು. | Kannada Prabha

ಸಾರಾಂಶ

20 ವರ್ಷಗಳಿಂದ ನೇರ ಪಾವತಿಗೆ ಒಳಗಾಗಿದ್ದ ಪೌರಕಾರ್ಮಿಕರನ್ನು ಕಾಯಂಗೊಳಿಸಿದ ಆದೇಶ ಪ್ರತಿ ಹಾಗೂ ಶೇ.5ರ ಯೋಜನೆಯಡಿ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಮತ್ತು ಜೆರಾಕ್ಸ್ ಯಂತ್ರಗಳನ್ನು ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ವಿತರಿಸಿದರು.

- ಪೌರಕಾರ್ಮಿಕರ ಕಾಯಂ ಆದೇಶ ಪ್ರತಿ, ವಿಕಲಚೇತನರಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮ - - - ಕನ್ನಡಪ್ರಭ ವಾರ್ತೆ, ದಾವಣಗೆರೆ

20 ವರ್ಷಗಳಿಂದ ನೇರ ಪಾವತಿಗೆ ಒಳಗಾಗಿದ್ದ ಪೌರಕಾರ್ಮಿಕರನ್ನು ಕಾಯಂಗೊಳಿಸಿದ ಆದೇಶ ಪ್ರತಿ ಹಾಗೂ ಶೇ.5ರ ಯೋಜನೆಯಡಿ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಮತ್ತು ಜೆರಾಕ್ಸ್ ಯಂತ್ರಗಳನ್ನು ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ವಿತರಿಸಿದರು.

ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಈ ಸಂದರ್ಭ ಮಾತನಾಡಿ, ಮಹಾನಗರ ಪಾಲಿಕೆ ವತಿಯಿಂದ ನೇರಪಾವತಿ ಪೌರಕಾರ್ಮಿಕರನ್ನು ಹಂತ ಹಂತವಾಗಿ ಒಟ್ಟು 250 ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗಿದೆ. ಇಂದು ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪ್ರತಿ ಹಾಗೂ ಶೇ.5ರ ಯೋಜನೆಯಡಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಮತ್ತು ಜೆರಾಕ್ಸ್‌ ಯಂತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಪೌರಕಾರ್ಮಿಕರ ಶ್ರಮದಿಂದಾಗಿ ರಾಜ್ಯದಲ್ಲಿ 4ನೇ ಸ್ಥಾನ ಪಡೆದಿರುವ ದಾವಣಗೆರೆ ಮಹಾನಗರ ಪಾಲಿಕೆ ಮುಂದಿನ ದಿನಗಳಲ್ಲಿ ನಂಬರ್ 1 ಸ್ಥಾನಕ್ಕೆ ಬರಲು ಶ್ರಮಿಸಬೇಕು. ಪೌರಕಾರ್ಮಿಕರು ನಗರ ಸ್ವಚ್ಛತೆ ವೇಳೆ ತಮ್ಮ ಆರೋಗ್ಯ ಸುರಕ್ಷತೆಗೂ ಗಮನಹರಿಸಿ ಕಾರ್ಯನಿರ್ವಹಿಸಬೇಕು. ಈ ಹಿಂದೆ ಪೌರಕಾರ್ಮಿಕರಿಗಾಗಿ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗಿತ್ತು. ತಮ್ಮ ಆರೋಗ್ಯ ಮತ್ತು ವಸತಿ ಸಮಸ್ಯೆ ಪರಿಹರಿಸಲು ನಾವಿದ್ದು, ನೀವು ಯಾವುದೇ ಕಾರಣಕ್ಕೂ ಎದೆಗುಂದಬಾರದು ಎಂದರು.

ಪಾಲಿಕೆಯಿಂದ ಪೌರಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಉನ್ನತ ಶಿಕ್ಷಣ ಪಡೆದವರಿಗೆ ಲ್ಯಾಪ್‌ಟಾಪ್ ಒದಗಿಸುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ. ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಇಂದು ಶೇ.5ರ ಯೋಜನೆಯಡಿ ಅರ್ಹ ವಿಕಲಚೇತನ ಫಲಾನುಭವಿಗಳಿಗೆ 29 ರೆಟ್ರೋಫಿಟ್‌ಮೆಂಟ್ ದ್ವಿಚಕ್ರ ವಾಹನ ಹಾಗೂ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುವ ಅಂಗವಿಕಲ ಯು.ಆರ್.ಡಬ್ಲ್ಯೂ.ಗಳಿಗೆ ಚೇರ್, ಟೇಬಲ್, ಕಂಪ್ಯೂಟರ್, ಜೆರಾಕ್ಸ್ ಮಿಷನ್, ಪ್ರಿಂಟರ್ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ ಎಂದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮಹಾಪೌರರಾದ ವಿನಾಯಕ ಪೈಲ್ವಾನ್, ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಜಗದೀಶ್, ಮಹಾನಗರ ಪಾಲಿಕೆ ಸದಸ್ಯರಾದ ಎಲ್.ಡಿ. ಗೋಣೆಪ್ಪ, ಜಿ.ಎಸ್. ಮಂಜುನಾಥ (ಗಡಿಗುಡಾಳ್), ಜಾಕೀರ್ ಅಲಿ, ಸೋಗಿ ಶಾಂತಕುಮಾರ, ಹುಲ್ಮನಿ ಗಣೇಶ್, ಜಯಮ್ಮ ಗೋಪಿನಾಯ್ಕ, ರಹೀಂಸಾಬ್, ಪೌರಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಎಲ್.ಎಂ. ಹನುಮಂತಪ್ಪ, ರಾಜ್ಯ ವಿಭಾಗೀಯ ಪ್ರಧಾನ ಕಾರ‍್ಯದರ್ಶಿ ಎಲ್.ಎಚ್. ಸಾಗರ್, ಪೌರಕಾರ್ಮಿಕರ ಸಂಘದ ಮುಖಂಡರಾದ ಎಲ್.ಜಿ. ಬಸವರಾಜ, ಉಮೇಶ್ ಎಂ., ರವಿವರ್ಧನ್, ಶಿವರಾಜ್, ರೇಣುಕಮ್ಮ, ಮಥುರಮ್ಮ, ಮಂಜಮ್ಮ, ಪರಶುರಾಮ, ಶಿವಕುಮಾರ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯಕುಮಾರ, ವ್ಯವಸ್ಥಾಪಕ ನಾಗರಾಜ ಮತ್ತಿತರರಿದ್ದರು.

- - -

ಬಾಕ್ಸ್‌* 100 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ: ಎಸ್‌ಎಸ್‌ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮಾತನಾಡಿ, ನಗರ ಸ್ವಚ್ಛತೆಗಾಗಿ 2002ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಗುತ್ತಿಗೆದಾರರ ಮೂಲಕ 270 ಪೌರಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗಿತ್ತು. ಗುತ್ತಿಗೆದಾರರು ಪೌರ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದೇ ಇರುವುದರಿಂದ 2017ರ ನವಂಬರ್‌ನಲ್ಲಿ ಈ ಹಿಂದೆ ನಮ್ಮ ಸರ್ಕಾರ ಇದ್ದಾಗಲೇ ನೇರವಾಗಿ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ವೇತನ ಪಾವತಿ ಮಾಡುವಂತೆ ಆದೇಶ ಹೊರಡಿಸಲಾಗಿತ್ತು ಎಂದು ತಿಳಿಸಿದರು.

2019 ರಲ್ಲಿ 34 ಪೌರಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ಕಾಯಂಗೊಳಿಸಲಾಗಿದ್ದು, 2023 ರಲ್ಲಿ 114 ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಕರೆದು 106 ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗಿದೆ. ಪ್ರಸ್ತುತ ಸಾಲಿನಲ್ಲಿ (2024) 119 ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿಯನ್ನು ಕರೆದು 100 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶವನ್ನು ಇಂದು ನೀಡುತ್ತಿದ್ದೇವೆ ಎಂದರು.

ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ 381 ಪೌರಕಾರ್ಮಿಕರಿಗೆ ಹಾಗೂ ಇತರೆ ಸ್ವಚ್ಛತಾ ಸಿಬ್ಬಂದಿಗೆ ₹40 ಕೋಟಿ ವೆಚ್ಚದಲ್ಲಿ ವಸತಿ ಕಟ್ಟಡ ನಿರ್ಮಿಸಿ, ಸ್ವಾಧೀನ ಪತ್ರಗಳನ್ನು ಹಂಚಿಕೆ ಮಾಡಲಾಗಿದೆ. ಪೌರಕಾರ್ಮಿಕರಿಗೆ ಸುರಕ್ಷತೆ ಹಾಗೂ ಆರೋಗ್ಯಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಸಮವಸ್ತ್ರ, ಶೂ, ರಿಫ್ಲೆಕ್ಟಿಂಗ್ ಚಾಕೆಟ್, ಸೈಟರ್, ರೈನ್‌ಕೋಟ್, ಹ್ಯಾಂಡ್ ಗ್ಲೌಸ್, ಮಾಸ್ಕ್, ಗಂಬೂಟ್ ಹಾಗೂ ಇತರೆ ಸುರಕ್ಷಾ ಸಾಮಗ್ರಿಗಳನ್ನು ವಿತರಿಸಲಾಗಿದೆ ಎಂದರು.

ಶೇ.5ರ ಯೋಜನೆಯಡಿ 94 ಅವಲಂಬಿತ ವಿಕಲಚೇತನ ಮಕ್ಕಳಿಗೆ ಅಂದಾಜು ₹5300 ರಂತೆ ಪೋಷಣಾ ಭತ್ಯೆ ಹಾಗೂ 27 ವಿಕಲಚೇತನ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ, ಮೌನೇಶ್ವರಿ ಶ್ರವಣನ್ಯೂನತಾ ವಸತಿ ಶಾಲೆಗೆ ಮೂಲಸೌಕರ್ಯ ಕೈಗೊಳ್ಳಲು ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

- - - -7ಕೆಡಿವಿಜಿ33ಃ:

ದಾವಣಗೆರೆಯಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಪೌರಕಾರ್ಮಿಕರಿಗೆ ಕಾಯಂಗೊಳಿಸಿದ ಆದೇಶ ಪ್ರತಿ ನೀಡಿದರು.

-7ಕೆಡಿವಿಜಿ34ಃ:

ದಾವಣಗೆರೆಯಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಮತ್ತು ಜೆರಾಕ್ಸ್ ಯಂತ್ರಗಳನ್ನು ವಿತರಿಸಿದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ