ರಾಜ್ಯೋತ್ಸವದಂದು 2500 ಅಡಿ ಕನ್ನಡ ಧ್ವಜ ಮೆರವಣಿಗೆ: ತೌಫಿಕ್ ಅಹಮದ್

KannadaprabhaNewsNetwork |  
Published : Oct 31, 2025, 02:00 AM IST
ಪತ್ರಿಕಾಗೋಷ್ಠಿ | Kannada Prabha

ಸಾರಾಂಶ

ಈ ಬಾರಿ ನಡೆಯಲಿರುವ 70ನೇ ಕನ್ನಡ ರಾಜ್ಯೋತ್ಸವದ ವಿಶೇಷ ಆಕರ್ಷಣೆಯೆಂದರೆ 2500 ಅಡಿ ಉದ್ದದ ಬೃಹತ್ ಕನ್ನಡ ಧ್ವಜ. ನವೆಂಬರ್ 1 ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮೆರವಣಿಗೆ ಪ್ರಾರಂಭವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಹಾಸನ

ಕನ್ನಡ ನಾಡಿನ ಆತ್ಮಗೌರವ ಮತ್ತು ಏಕತೆಯ ಸಂಕೇತವಾಗಿ, ಈ ವರ್ಷದ ರಾಜ್ಯೋತ್ಸವ ದಿನದಂದು ನಮ್ಮ ಹಾಸನ ಟಿವಿ 5ನೇ ವರ್ಷದ ಸಂಭ್ರಮದ ಅಂಗವಾಗಿ ಜಿಲ್ಲಾಡಳಿತದ ಸಹಯೋಗದಲ್ಲಿ ಪ್ರಥಮ ಬಾರಿಗೆ 2500 ಅಡಿ ಉದ್ದದ ಕನ್ನಡ ಧ್ವಜ ಮೆರವಣಿಗೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಪಾದಕ ತೌಫಿಕ್ ಅಹಮದ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನಡೆಯಲಿರುವ 70ನೇ ಕನ್ನಡ ರಾಜ್ಯೋತ್ಸವದ ವಿಶೇಷ ಆಕರ್ಷಣೆಯೆಂದರೆ 2500 ಅಡಿ ಉದ್ದದ ಬೃಹತ್ ಕನ್ನಡ ಧ್ವಜ. ನವೆಂಬರ್ 1 ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮೆರವಣಿಗೆ ಪ್ರಾರಂಭವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ ಎಂದು ಹೇಳಿದರು. ವಿವಿಧ ಶಾಲಾ ಮತ್ತು ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಕನ್ನಡ ನಾಡಿನ ಗೌರವ, ನುಡಿ ಹಾಗೂ

ಸಂಸ್ಕ್ರತಿಯ ಪ್ರತಿಬಿಂಬವಾಗಿ ಈ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿಗಳು ಹೆಜ್ಜೆ ಹಾಕಲಿದ್ದಾರೆ. ಮೆರವಣಿಗೆಯಲ್ಲಿ ಕನ್ನಡಪರ ಸಂಘಟನೆಗಳು, ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು, ಮಹಿಳಾ ಸಹಕಾರ ಸಂಘಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ಈ ಬೃಹತ್ ಧ್ವಜ ನಡಿಗೆ ರಾಜ್ಯೋತ್ಸವದ ಉತ್ಸಾಹಕ್ಕೆ ಹೊಸ ಚೈತನ್ಯ ನೀಡಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಕೀಲ್ ಅಹಮದ್, ಸೈಯದ್ ತಾಜ್, ಗುರುಪ್ರಸಾದ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?