25ರಂದು ಕುಶಲೋತ್ಸವ: ಕಾರ್ಯಕ್ರಮ ಪೂರ್ವ ಸಿದ್ಧತೆ ಸಭೆ

KannadaprabhaNewsNetwork |  
Published : Feb 12, 2025, 12:31 AM IST
ಕುಶಲೊತ್ಸವ ಕಾರ್ಯಕ್ರಮ ಪೂರ್ವ ಸಿದ್ಧತೆ ಸಭೆ | Kannada Prabha

ಸಾರಾಂಶ

ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗ ಆಶ್ರಯದಲ್ಲಿ ಫೆ.25ರಂದು ಕುಶಾಲನಗರದಲ್ಲಿ ನಡೆಯಲಿರುವ ಕುಶಲೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗ ಆಶ್ರಯದಲ್ಲಿ ಫೆ.25ರಂದು ಕುಶಾಲನಗರದಲ್ಲಿ ನಡೆಯಲಿರುವ ಕುಶಲೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆ ಸಭೆ ನಡೆಯಿತು.ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರಿಗೆ ನುಡಿ ನಮನ ಕಾರ್ಯಕ್ರಮ ಹಾಗೂ ರೈತರ ಜೀವನಾಡಿ ಹಾರಂಗಿ ಜಲಾಶಯದ ನಿರ್ಮಾತೃ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ನಡೆಯಲಿರುವ ವಿಶೇಷ ಕಾರ್ಯಕ್ರಮ ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆಯಲಿದೆ. ಈ ಸಂಬಂಧ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಸಲಹೆ ಸೂಚನೆಗಳ ಬಗ್ಗೆ ಚರ್ಚೆ ನಡೆಯಿತು.ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮೀ ಚಂದ್ರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಕಾರ್ಯಕ್ರಮದ ಸಮಗ್ರ ಮಾಹಿತಿ ನೀಡಿದರು.ಫೆ.25ರಂದು ಬೆಳಗ್ಗೆ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಭವ್ಯ ಮಂಟಪ ಮೆರವಣಿಗೆ ಹೊರಟು ನಂತರ ಕುಶಾಲನಗರದ ಮುಖ್ಯ ರಸ್ತೆಯಲ್ಲಿ ಸಾಗಿ ರೈತ ಸಹಕಾರ ಭವನದಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದ ಲೋಕೇಶ್ ಸಾಗರ್, ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಈಗಾಗಲೇ ಒಂದು ವರ್ಷಗಳ ಅವಧಿಯಲ್ಲಿ 50 ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದೆ.ಶಾಸಕ ಡಾ.ಮಂತರ್ ಗೌಡ, ಮೆರವಣಿಗೆ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರು ಸೇರಿದಂತೆ ಹಾರಂಗಿ ಯೋಜನಾ ವೃತ್ತದ ವ್ಯಾಪ್ತಿಯ ಕ್ಷೇತ್ರಗಳ ಪ್ರತಿನಿಧಿಗಳು, ರಾಜ್ಯ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತಾಪಿ ವರ್ಗ ಮತ್ತು ಸಾರ್ವಜನಿಕರು ಪಾಲ್ಗೊಳಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಹಿರಿಯರಾದ ವಿ.ಎನ್. ವಸಂತ ಕುಮಾರ್, ಎಂ.ಎಚ್. ನಝೀರ್ ಅಹ್ಮದ್, ಎಂ.ಎನ್. ಕುಮಾರಪ್ಪ ಮಾತನಾಡಿದರು.ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಲಹೆ ಸೂಚನೆ ನೀಡುವುದರ ಜೊತೆಗೆ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ