ಕೆ.ಆರ್.ಪೇಟೆಯಲ್ಲಿ 262.30 ಮಿ,ಮೀ.ಮಳೆ; ಕೃಷಿ ಚಟುವಟಿಕೆ ಚುರುಕು

KannadaprabhaNewsNetwork |  
Published : May 23, 2024, 01:07 AM IST
ಕೃಷಿ ಚಟುವಟಿಕೆ ಚುರುಕು | Kannada Prabha

ಸಾರಾಂಶ

ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಅಧಿಕೃತ ಪರವಾನಿಗೆ ಹೊಂದಿರುವ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಯೂರಿಯಾ, ಡಿ.ಎ.ಪಿ, ಪೊಟ್ಯಾಷ್, 20:20:0.13 ಸೇರಿದಂತೆ ಎಲ್ಲಾ ಕಾಂಪ್ಲೆಕ್ಸ್ ರಸಗೊಬ್ಬರಗಳ ದಾಸ್ತಾನಿದ್ದು ರೈತರು ಇದರ ಉಪಯೋಗ ಪಡೆದುಕೊಳ್ಳಬಹುದು. ಕೃತಕವಾಗಿ ರಸಗೊಬ್ಬರದ ಅಭಾವ ಸೃಷ್ಟಿಸುವವರು ಮತ್ತು ರಸಗೊಬ್ಬರವನ್ನು ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ದ ಕಟ್ಟಿನಿಟ್ಟಿನ ಕ್ರಮ ಜರುಗಿಸಲಾಗುವುದು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನಲ್ಲಿ ಮೇ ೨೧ರವರೆಗೆ ನಿರೀಕ್ಷೆಗೂ ಮೀರಿ 262.30 ಮಿ.ಮೀ ಮಳೆಯಾಗಿದೆ. ಈ ಬಾರಿ ಶೇ.60 ರಷ್ಟು ಅಧಿಕ ಮಳೆಯಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.

ಈ ತಿಂಗಳು 160.50 ಮಿ.ಮೀ. ಬೇಕಾಗಿದ್ದ ಮಳೆ ಸುಮಾರು 262.30 ಮಿ.ಮೀ.ಸುರಿದಿದೆ. ಇದರಿಂದ ರೈತರು ಸಂತಸಗೊಂಡಿದ್ದಾರೆ. ತಮ್ಮ ಜಮೀನುಗಳಲ್ಲಿ ಅಗತ್ಯ ಬೆಳೆಗಳನ್ನು ಹಾಕಲು ಸಿದ್ಧತೆ ಕೈಗೊಂಡಿದ್ದಾರೆ.

ಕ್ಷೇತ್ರದಲ್ಲಿ ದ್ವಿದಳ ದಾನ್ಯ ಭಿತ್ನೆ ಬೀಜಗಳಿಗೆ ಬೇಡಿಕೆ ಹೆಚ್ಚಿರುತ್ತದೆ. ರೈತರ ಬೇಡಿಕೆಯನ್ವಯ ತಾಲೂಕಿನ 6 ರೈತ ಸಂಪರ್ಕ ಕೇಂದ್ರಗಳಲ್ಲಿ ಅಲಸಂದೆ(ಡಿ ಸಿ-15) ತೊಗರಿ (ಬಿ.ಆರ್,ಜಿ -5) ಮತ್ತು ತೊಗರಿ ಬಿ.ಜಿ.ಎಸ್-9 ಹಾಗೂ ಹೈಬ್ರೀಡ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸಹಾಯಧನದಲ್ಲಿ ವಿತರಣೆ ಮಾಡಲಾಗುತ್ತಿದೆ.

ಇದರ ಜೊತೆಗೆ ಡಯಾಂಚ ಹಸಿರೆಲೆ ಗೊಬ್ಬರ ಬಿತ್ತನೆ ಬೀಜವನ್ನೂ ಸಹಾ ಸಹಾಯಧನ ಯೋಜನೆಯಡಿಯಲ್ಲಿ ವಿತರಿಸಲಾಗುತ್ತಿದೆ. ಆಯಾ ಭಾಗದ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಪಡೆಯಲು ಅಗತ್ಯ ಕ್ರಮ ವಹಿಸಲಾಗಿದೆ.

ತಾಲೂಕಿನ ಎಲ್ಲಾ ಅಧಿಕೃತ ಪರವಾನಿಗೆ ಹೊಂದಿರುವ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಯೂರಿಯಾ, ಡಿ.ಎ.ಪಿ, ಪೊಟ್ಯಾಷ್, 20:20:0.13 ಸೇರಿದಂತೆ ಎಲ್ಲಾ ಕಾಂಪ್ಲೆಕ್ಸ್ ರಸಗೊಬ್ಬರಗಳ ದಾಸ್ತಾನಿದ್ದು ರೈತರು ಇದರ ಉಪಯೋಗ ಪಡೆದುಕೊಳ್ಳಬಹುದು. ಕೃತಕವಾಗಿ ರಸಗೊಬ್ಬರದ ಅಭಾವ ಸೃಷ್ಟಿಸುವವರು ಮತ್ತು ರಸಗೊಬ್ಬರವನ್ನು ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ದ ಕಟ್ಟಿನಿಟ್ಟಿನ ಕ್ರಮ ಜರುಗಿಸಲಾಗುವುದು.

ನಿಗಧಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರುವವರ ವಿರುದ್ದ ರೈತರು ದೂರು ನೀಡಬೇಕು. ಮುಂಗಾರು ಹಂಗಾಮಿಗೆ ಬೇಕಾಗಿರುವ ರಾಗಿ ಮತ್ತು ಭತ್ತದ ಬಿತ್ತನೆ ಬೀಜಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ತರ ಹಿತಕ್ಕೆ ಧಕ್ಕೆಯಾಗದಂತೆ ಕೃಷಿ ಇಲಾಖೆ ರಾಗಿ ಮತ್ತು ಭತ್ತದ ಬಿತ್ತನೆ ಬೀಜವನ್ನು ಪೂರೈಕೆ ಮಾಡಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ಜಿ.ಸಂತೋಷ್ ಕುಮಾರ್ ತಿಳಿಸಿದ್ದಾರೆ.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ