ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮೊದಲ ದಿನವೇ 264 ಮಂದಿ ಗೈರು!

KannadaprabhaNewsNetwork | Published : Mar 22, 2025 2:03 AM

ಸಾರಾಂಶ

ಜಿಲ್ಲೆಯ 81 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರದಿಂದ ಆರಂಭವಾದ ಎಸ್ಸೆಸ್ಸೆಲ್ಸಿ ಕನ್ನಡ ಭಾಷಾ ಪರೀಕ್ಷೆಗೆ 264 ವಿದ್ಯಾರ್ಥಿಗಳು ಗೈರಾಗಿದ್ದಾರೆ.

- ಜಿಲ್ಲೆಯ 81 ಕೇಂದ್ರಗಳಲ್ಲಿ ಪರೀಕ್ಷೆ ಬರೆದ 9784 ಬಾಲಕರು, 10625 ಬಾಲಕಿಯರು । ಜಿಪಂ ಸಿಇಒ, ಡಿಡಿಪಿಐರಿಂದ ಪರಿಶೀಲನೆ - - - ಕನ್ನಡಪ್ರಭ ವಾರ್ತೆ ದಾವಣಗೆರೆ ಜಿಲ್ಲೆಯ 81 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರದಿಂದ ಆರಂಭವಾದ ಎಸ್ಸೆಸ್ಸೆಲ್ಸಿ ಕನ್ನಡ ಭಾಷಾ ಪರೀಕ್ಷೆಗೆ 264 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯಲ್ಲಿ 20674 ಮಕ್ಕಳು ಪರೀಕ್ಷೆ ತೆಗೆದುಕೊಂಡಿದ್ದು, ಇದರಲ್ಲಿ 9784 ಬಾಲಕರು, 10625 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದಾರೆ. 150 ಬಾಲಕರು, 114 ಬಾಲಕಿಯರು ಸೇರಿದಂತೆ ಒಟ್ಟು 264 ವಿದ್ಯಾರ್ಥಿಗಳು ಕನ್ನಡ ಭಾಷಾ ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಸಾಶಿಇ ಉಪ ನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.

ಇಲ್ಲಿನ ಮೋತಿ ವೀರಪ್ಪ ಸರ್ಕಾರಿ ಪಿಯು ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್, ಸಾಶಿಇ ಉಪ ನಿರ್ದೇಶಕ ಜಿ.ಕೊಟ್ರೇಶ್ ಸೇರಿದಂತೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.

ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳು ನಡೆದ ಬಗ್ಗೆ ವರದಿಯಾಗಿಲ್ಲ. ಶಾಂತಿ, ಸುವ್ಯವಸ್ಥಿತವಾಗಿ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಭಾರಂಭವಾಗಿದ್ದು, ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆಗೆ 264 ವಿದ್ಯಾರ್ಥಿಗಳು ಗೈರಾಗಿದ್ದು ಆತಂಕದ ಸಂಗತಿಯಾಗಿದೆ.

- - - -21ಕೆಡಿವಿಜಿ4:

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ದಾವಣಗೆರೆ ಮೋತಿ ವೀರಪ್ಪ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್ ಭೇಟಿ ನೀಡಿ, ಪರಿಶೀಲಿಸಿದರು. -21ಕೆಡಿವಿಜಿ5, 6, 7, 8, 9:

ದಾವಣಗೆರೆ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಪ್ರವೇಶ ಸಂಖ್ಯೆ, ಕೊಠಡಿ ಸಂಖ್ಯೆ ಪರಿಶೀಲಿಸುತ್ತಿರುವ ಮಕ್ಕಳು.

-21ಕೆಡಿವಿಜಿ10:

ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಕನ್ನಡ ಭಾಷಾ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳ ಬಳಿ ಆಗಮಿಸಿರುವ ಮಕ್ಕಳು.

Share this article