26ರಂದು ದೀವರ ಸಾಂಸ್ಕತಿಕ ವೈಭವ ಕಾರ್ಯಕ್ರಮ

KannadaprabhaNewsNetwork |  
Published : Nov 24, 2023, 01:30 AM IST
ಶಿವಮೊಗ್ಗದಲ್ಲಿ ದೀವರ ಸಾಂಸ್ಕತಿಕ ವೈಭವವನ್ನು ಕಾರ್ಯಕ್ರಮ ಕುರಿತು ಬಳಗದ ಸಂಚಾಲಕ  ಸುರೇಶ್ ಬಾಳೆಗುಂಡಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಕಾರ್ಯಕ್ರಮವನ್ನು ಅಂದು ಬೆಳಗ್ಗೆ 10 ಗಂಟೆಗೆ ಸಮಾರಂಭವನ್ನು ಸಾರಗನ ಜಡ್ಡು ಕಾರ್ತಿಕೇಯ ಪೀಠದ ಯೋಗೇಂದ್ರ ಅವದೂತರು ಉದ್ಘಾಟಿಸುವರು. ನಿಟ್ಟೂರಿನ ನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಹರತಾಳು ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ಆಗಮಿಸುವರು. ಸಂಚಾಲಕ ನಾಗರಾಜ ನೇರಿಗೆ ಉಪಸ್ಥಿತರಿರುವರು ಎಂದರು.

ಶಿವಮೊಗ್ಗ: ಧೀರ ದೀವರ ಬಳಗ ಮತ್ತು ಹಳೆಪೈಕ ದೀವರ ಸಂಸ್ಕೃತಿ ಸಂವಾದ ಬಳಗ ಇವರ ವತಿಯಿಂದ ನ.26ರಂದು ನಗರದ ಈಡಿಗರ ಭವನದಲ್ಲಿ ದೀವರ ಸಾಂಸ್ಕೃತಿಕ ವೈಭವ ಮತ್ತು ರಾಜ್ಯಮಟ್ಟದ ಭೂಮಣ್ಣಿ ಬುಟ್ಟಿ, ಹಸೆ ಚಿತ್ತಾರ ಸ್ಪರ್ಧೆ ಮತ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಬಳಗದ ಸಂಚಾಲಕ ಸುರೇಶ್ ಬಾಳೆಗುಂಡಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಂದು ಬೆಳಗ್ಗೆ 10 ಗಂಟೆಗೆ ಸಮಾರಂಭವನ್ನು ಸಾರಗನ ಜಡ್ಡು ಕಾರ್ತಿಕೇಯ ಪೀಠದ ಯೋಗೇಂದ್ರ ಅವದೂತರು ಉದ್ಘಾಟಿಸುವರು. ನಿಟ್ಟೂರಿನ ನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಹರತಾಳು ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ಆಗಮಿಸುವರು. ಸಂಚಾಲಕ ನಾಗರಾಜ ನೇರಿಗೆ ಉಪಸ್ಥಿತರಿರುವರು ಎಂದರು.

ಮಧ್ಯಾಹ್ನ 3 ಗಂಟೆಗೆ ‘ಧೀರ ದೀವರು’ ಪುರಸ್ಕಾರವನ್ನು ಸಿಗಂದೂರು ಕ್ಷೇತ್ರ ಧರ್ಮದರ್ಶಿ ಎಸ್.ರಾಮಪ್ಪ, ಜಾನಪದ ಕಲಾವಿದ ಟಾಕಪ್ಪ ಕಣ್ಣೂರು ಮತ್ತು ಲಕ್ಷ್ಮಮ್ಮ ಗಡೆಮನೆ ಅವರಿಗೆ ಪ್ರದಾನ ಮಾಡಲಾಗುವುದು. ಸಿರಿವಂತೆ ಚಂದ್ರಶೇಖರ್ ಸಮಾರೋಪ ಭಾಷಣ ಮಾಡುವರು. ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಿಕೊಡುವರು. ಅತಿಥಿಗಳಾಗಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಭೀಮಣ್ಣ ನಾಯ್ಕ, ಗೃಹ ಸಚಿವರ ಆಪ್ತ ಕಾರ್ಯದರ್ಶಿ ಕೆ.ಚನ್ನಬಸಪ್ಪ, ನಗರಾಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ, ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಬ್ರ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಾ. ಜಿ.ಡಿ. ನಾರಾಯಣಪ್ಪ, ಡಾ. ರಾಜನಂದಿನಿ ಕಾಗೋಡು, ಮಹಿಳಾ ಈಡಿಗ ಸಂಘದ ಜಿಲ್ಲಾಧ್ಯಕ್ಷೆ ಗೀತಾಂಜಲಿ ದತ್ತಾತ್ರೇಯ ಆಗಮಿಸುವರು. ಸಂಚಾಲಕ ನಾಗರಾಜ ನೇರಿಗೆ ಅಧ್ಯಕ್ಷತೆ ವಹಿಸುವರು. ಇನ್ನೊಬ್ಬ ಸಂಚಾಲಕ ಸುರೇಶ್ ಬಾಳೆಗುಂಡಿ, ಹಳೆಪೈಕ ದೀವರ ಸಂಸ್ಕತಿ ಬಳಗದ ಅರವಿಂದ ಕರ್ಕಿಕೋಡಿ ಹೊನ್ನಾವರ ಉಪಸ್ಥಿತರಿರುವರು ಎಂದು ವಿವರಿಸಿದರು.

ಮುಖಂಡರಾದ ಲಕ್ಷ್ಮೀಕಾಂತ ಚಿಮಣೂರು, ಪುನೀತ್, ಕೃಷ್ಣಮೂರ್ತಿ, ಜಯದೇವಪ್ಪ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷವಿರೋಧಿ ಚಟುವಟಿಕೆ ನಡೆಸಿದ್ದರೆ ನನ್ನ ವಿರುದ್ಧವೂ ಕ್ರಮ ಆಗಲಿ: ಜಮೀರ್‌
ಈಗಾಗಲೇ ಸಾಕಷ್ಟು ಅನುಭವಿಸಿದ್ದೇವೆ, ಜಮೀರ್‌ರನ್ನು ಮತ್ತೆ ಸೇರ್ಸಿಕೊಳ್ಳಲ್ಲ: ಎಚ್ಡಿಕೆ