ಮಧುಗಿರಿ: ತಾಲೂಕಿನ ಮಿಡಿಗೇಶಿ ಪೋಲಿಸ್ ಠಾಣಾ ಸರಹದ್ದಿನಲ್ಲಿ ಅಕ್ರಮವಾಗಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 27 ಹಸುಗಳನ್ನು ಮಿಡಿಗೇಶಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಸುಗಳನ್ನು ಲಾರಿಯ ಕಿರಿದಾದ ಜಾಗದಲ್ಲಿ ತುಂಬಿದ್ದು ಇದರಿಂದ ಹಸುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಕಂಡು ಬಂದಿದೆ. ಎಲ್ಲ ಹಸುಗಳನ್ನು ಸುರಕ್ಷಿತವಾಗಿ ಕ್ಯಾತ್ಸಂದ್ರದ ಗೋಶಾಲೆಗೆ ಕಳುಹಿಸಿ ಕೊಡಲಾಗಿದೆ ಎಂದು ಪಿಎಸ್‌ಐ ರವೀಂದ್ರ ತಿಳಿಸಿದ್ದಾರೆ.
ಈ ಸಂಬಂಧ ಲಾರಿ ಚಾಲಕ ಚೇತನ್, ಕ್ಲೀನರ್ ರಘು, ತಬರೀಸ್, ತಬರೀಸ್ ಒಟ್ಟು 4 ಜನರ ವಿರುದ್ಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ. ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರು ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗದ ಭಾಗಗಳಿಂದ ಬರುತ್ತಿದ್ದೇವೆಂದು ಪ್ರಾಥಮಿಕ ವಿಚಾರಣೆಯಲ್ಲಿ ಮಾಹಿತಿ ನೀಡಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಸೇರಿದಂತೆ ಸಂಬಂಧಿತ ಕಾನೂನುಗಳ ವಿಧಿಯಡಿ ಪ್ರಕರಣ ದಾಖಲಿಸಲಾಗಿದೆ.ಡಿವೈಎಸ್‌ಪಿ ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ಹನುಮಂತರಾಯಪ್ಪ ಅವರ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆಯಲ್ಲಿ ಮಿಡಿಗೇಶಿ ಠಾಣೆಯ ಪಿಎಸ್‌ಐ ರವೀಂದ್ರ ಹಾಗೂ ಸಿಬ್ಬಂದಿಗಳಾದ ನಟರಾಜು ಇತರೆ ಪೊಲೀಸ್ ಸಿಬ್ಬಂದಿ ಬಿರುಸಿನ ನಡೆಸಿದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.