ಹೊನ್ನಾಳಿಯಲ್ಲಿ ಪರೀಕ್ಷೆ ಬರೆದ 2733 ವಿದ್ಯಾರ್ಥಿಗಳು

KannadaprabhaNewsNetwork | Published : Mar 22, 2025 2:06 AM

ಸಾರಾಂಶ

2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡಿದ್ದು. ಏಪ್ರಿಲ್ 4ರವರೆಗೆ ನಡೆಯಲಿದೆ. ಅ‍ವಳಿ ತಾಲೂಕುಗಳ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಭಾಷೆಯ ಪರೀಕ್ಷೆ ಯಾವುದೇ ಅಡೆತಡೆ ಇಲ್ಲದೇ ಯಶಸ್ವಿಯಾಗಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 22 ಬಾಲಕರು, 8 ಬಾಲಕಿಯರು ಗೈರು: ಶಿಕ್ಷಣ ಇಲಾಖೆ ಮಾಹಿತಿ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ

2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡಿದ್ದು. ಏಪ್ರಿಲ್ 4ರವರೆಗೆ ನಡೆಯಲಿದೆ. ಅ‍ವಳಿ ತಾಲೂಕುಗಳ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಭಾಷೆಯ ಪರೀಕ್ಷೆ ಯಾವುದೇ ಅಡೆತಡೆ ಇಲ್ಲದೇ ಯಶಸ್ವಿಯಾಗಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾದವರಲ್ಲಿ ನೋಂದಾವಣೆಯಾದ ಬಾಲಕರು 1220 ಹಾಗೂ ಬಾಲಕಿಯರು 1543 ಸೇರಿ ಒಟ್ಟು 2763 ಮಂದಿ. ಪರೀಕ್ಷೆಗೆ ಹಾಜರಾದ ಬಾಲಕರು 1198, ಬಾಲಕಿಯರು 1535 ಸೇರಿ ಒಟ್ಟು 2733 ಮಂದಿ. ಈ ಪೈಕಿ 22 ಬಾಲಕರು, 8 ಬಾಲಕಿಯರು ಸೇರಿ ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆ ಗೈರುಹಾಜರಾಗಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಲೂಕು ಶಿಕ್ಷಣ ಇಲಾಖೆ ಪರೀಕ್ಷೆ ಯಶಸ್ವಿಗಾಗಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಮೊದಲ ದಿನದ ಪರೀಕ್ಷೆ ವೇಳೆ ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ತಹಸೀಲ್ದಾರ್ ಪಟ್ಟರಾಜ ಗೌಡ ಪಟ್ಟಣದ ಪರೀಕ್ಷಾ ಕೇಂದ್ರಗಳಿಂದ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ಪೋಷಕರು ಪರೀಕ್ಷಾ ಕೇಂದ್ರದ ಬಳಿ ಆಗಮಿಸಿ, ಪರೀಕ್ಷೆ ಆರಂಭವಾಗುವವರೆಗೆ ಹೊರಗೆ ನಿಂತು ಮಕ್ಕಳಿಗೆ ಪ್ರೋತ್ಸಾಹ ಮತ್ತಿತರ ಸಲಹೆಗಳನ್ನು ನೀಡಿದರು. ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ ಪೂರ್ವದಲ್ಲಿ ನೋಂದಣೆ ಸಂಖ್ಯೆ ಯಾವ ಕೊಠಡಿಯಲ್ಲಿ ಬರುತ್ತದೆ ಎಂದು ಪರಿಶೀಲಿಸುವಲ್ಲಿ ತಲ್ಲೀನರಾಗಿದ್ದುದು ಅವರಲ್ಲಿನ ಆಸಕ್ತಿಗೆ ಸಾಕ್ಷಿಯಾಗಿತ್ತು.

- - -

(ಬಾಕ್ಸ್‌-1)

* ಚನ್ನಗಿರಿ ತಾಲೂಕಿನಲ್ಲಿ 66 ವಿದ್ಯಾರ್ಥಿಗಳು ಗೈರು

ಚನ್ನಗಿರಿ: ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಆರಂಭಗೊಂಡಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲೂಕಿನ ಎಲ್ಲ ಪ್ರೌಢಶಾಲೆಗಳಿಂದ 3611 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದರು. ಈ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸುವ ಉದ್ದೇಶದಿಂದ 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.

ಪರೀಕ್ಷೆಯ ಪ್ರಥಮ ದಿನವಾದ ಶುಕ್ರವಾರ ಪ್ರಥಮ ಭಾಷೆ ಕನ್ನಡ ಪಠ್ಯ ವಿಷಯಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ನೋಂದಾಯಿತ 3611ರಲ್ಲಿ 66 ವಿದ್ಯಾರ್ಥಿಗಳು ಗೈರಾಗಿ, 3545 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಮಾಹಿತಿ ನೀಡಿದರು. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ತಾಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರತಿಯೊಂದು ಕೊಠಡಿಗಳಲ್ಲಿ ವೆಬ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 100 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಾಗಿತ್ತು.

- - -

(ಬಾಕ್ಸ್‌-2) * ನ್ಯಾಮತಿ: 994 ಹಾಜರು, 9 ಮಂದಿ ಗೈರುನ್ಯಾಮತಿ: ತಾಲೂಕಿನಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮೊದಲ ದಿನವಾದ ಶುಕ್ರವಾರ ಕನ್ನಡ ವಿಷಯ ಪರೀಕ್ಷೆ ಯಾವುದೆ ಅಡೆತಡೆ ಇಲ್ಲದೇ ಸುಸೂತ್ರವಾಗಿ ನಡೆದಿದೆ. ನ್ಯಾಮತಿ ಪಟ್ಟಣ ಸೇರಿದಂತೆ ತಾಲೂಕಿನ ಸವಳಂಗ, ಜೀನಹಳ್ಳಿ ಮತ್ತು ಚೀಲೂರು ಪರಿಕ್ಷಾ ಕೇಂದ್ರದಿಂದ ಒಟ್ಟು 1005 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು. ಅದರಲ್ಲಿ 464 ಬಾಲಕರು ಮತ್ತು 530 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. 7 ಬಾಲಕರು ಮತ್ತು 4 ಬಾಲಕಿಯರು ಗೈರಾಗಿದ್ದು, 994 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪ ತಿಳಿಸಿದ್ದಾರೆ.

- - - -21ಎಚ್.ಎಲ್.ಐ1.ಜೆಪಿಜಿ:

ರಾಜ್ಯದಲ್ಲಿ ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು, ಹೊನ್ನಾಳಿ ಪಟ್ಟಣದ ಸರ್ಕಾರಿ ಪ್ರೌಢಶಾಲಾ ಕೇಂದ್ರದ ಬಳಿ ಮಕ್ಕಳು ಪರೀಕ್ಷೆ ಬರೆಯಲು ಆಗಮಿಸಿರುವುದು.

Share this article