ಮೂರು ವರ್ಷದಲ್ಲಿ 2809 ಜನ ರೈತರ ಸಾವು: ಕೇಂದ್ರ ಸಚಿವ ಸೋಮಣ್ಣ

KannadaprabhaNewsNetwork |  
Published : Apr 04, 2026, 02:45 AM IST
(ಫೋಟೊಬಿಕೆಟಿ4,  ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು) | Kannada Prabha

ಸಾರಾಂಶ

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರು ತಮ್ಮ ಅಧಿಕಾರವನ್ನು ಸ್ವಂತಕ್ಕೋಸ್ಕರ, ಸ್ವಾರ್ಥಕ್ಕೋಸ್ಕರ ಬಳಸಿಕೊಳ್ಳುತ್ತಿದ್ದು, ರಾಜ್ಯದ ಜನರಿಗೆ ವಂಚನೆ ಮಾಡುತ್ತ ರಾಜ್ಯವನ್ನು ಕತ್ತಲೆ ಕೋಣೆಯಲ್ಲಿಡುವ ಕೆಲಸ ಮಾಡಿದ್ದಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರು ತಮ್ಮ ಅಧಿಕಾರವನ್ನು ಸ್ವಂತಕ್ಕೋಸ್ಕರ, ಸ್ವಾರ್ಥಕ್ಕೋಸ್ಕರ ಬಳಸಿಕೊಳ್ಳುತ್ತಿದ್ದು, ರಾಜ್ಯದ ಜನರಿಗೆ ವಂಚನೆ ಮಾಡುತ್ತ ರಾಜ್ಯವನ್ನು ಕತ್ತಲೆ ಕೋಣೆಯಲ್ಲಿಡುವ ಕೆಲಸ ಮಾಡಿದ್ದಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಬೆಂಗಳೂರು ನಗರದ ಅಭಿವೃದ್ಧಿಯಲ್ಲಿ ನಮ್ಮದೇ ಆದ ಪಾಲುದಾರಿಕೆ ಕೊಟ್ಟಿದ್ದೇವೆ. ಯಾವುದೇ ಶಾಸಕರೂ ತನ್ನ ಕಾರ್ಯಕ್ಷೇತ್ರಕ್ಕೆ ಹೋಗಿ ನಾನು ಒಳ್ಳೆಯ ಕೆಲಸ ಮಾಡಿದ್ದೇನೆ, ನನ್ನಿಂದ ಇಷ್ಟು ಕೆಲಸ ಆಗಿದೆ ಎಂದು ಹೇಳುವ ಧೈರ್ಯ ಹೊಂದಿಲ್ಲ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮಿತಿಮೀರಿದೆ. ತಮ್ಮವರೇ ನಿಂದಿಸಿದರೂ ಸರ್ಕಾರ, ಸಿಎಂ ಎಚ್ಚೆತ್ತುಕೊಳ್ಳದೇ ನಿರ್ಲಿಪ್ತವಾಗಿದ್ದಾರೆ. ಮೂಲ ಸೌಕರ್ಯದತ್ತ ಗಮನ ಕೊಡದೇ ಇಡೀ ಸಚಿವ ಸಂಪುಟ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ದೂರಿದರು.

ಕೇಂದ್ರ ಸರ್ಕಾರ ವಿವಿಧ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಿದರೂ ಸರಿಯಾಗಿ ಸ್ಪಂದಿಸದೇ ರಾಜ್ಯದಲ್ಲಿ ಮೂರು ವರ್ಷದಲ್ಲಿ 2809 ಜನ ರೈತರು ಮೃತಪಟ್ಟಿದ್ದಾರೆ. ಸುಮಾರು 2.5 ಲಕ್ಷಕ್ಕೂ ಅಧಿಕ ಉದ್ಯೋಗಗಳು ಖಾಲಿ ಇವೆ. ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಸಂತ್ರಸ್ತರಿಗೆ ಒಂದು ರುಪಾಯಿ ಬಿಡುಗಡೆ ಮಾಡಿಲ್ಲ. ಇದೀಗ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗುತ್ತಿದೆ ಎಂದರು.

ಜನರನ್ನು ದಿಕ್ಕು ತಪ್ಪಿಸುವ ಕೆಲಸ:

ಒಂದು ಸಮಾಜವನ್ನು ಇನ್ನೊಂದು ಸಮಾಜದ ಮೇಲೆ ಎತ್ತಿಕಟ್ಟುವ ಕ್ರಾಂತಿಕಾರಿ ಕಾರ್ಯ, ದೊಡ್ಡಸ್ಥಿಕೆಯನ್ನು ಈ ಸರ್ಕಾರ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಟೀಕಿಸಿದರು. ಬಳಕೆ ಸರ್ಟಿಫಿಕೇಟ್ ನೀಡಿ ಹಣ ಪಡೆಯಬಹುದು ಎಂದು ಜಲಜೀವನ ಮಿಷನ್‌ನಡಿ ₹28 ಸಾವಿರ ಕೋಟಿ ಠೇವಣಿ ಇಟ್ಟಿದ್ದೇವೆ. ಕೇವಲ ₹11 ಸಾವಿರ ಕೋಟಿ ಪಡೆದಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅನವಶ್ಯಕವಾಗಿ ಟೀಕೆ ಮಾಡುವುದರಲ್ಲಿ ಕಾಂಗ್ರೆಸ್ಸಿನವರು ನಿಸ್ಸೀಮರು. ಜಿ ರಾಮ್ ಜಿ ವಿಚಾರಕ್ಕೆ ಬಂದರೆ 41 ಲಕ್ಷ ಬೋಗಸ್ ಕಾರ್ಡ್‌ ಇಟ್ಟುಕೊಂಡ ಜನ ನೀವು. ಜೆಸಿಬಿ ಕೆಲಸ ಮಾಡಿ ಯಾರದೋ ಹೆಸರಿನಲ್ಲಿ ಹಣ ಪಡೆಯಲಾಗುತ್ತಿತ್ತು. ಪ್ರಧಾನಿಯವರು ದೇಶದ ಸರ್ವಾಂಗೀಣ ಅಭಿವೃದ್ಧಿ ಮತ್ತು ಹಳ್ಳಿಗಾಡಿನ ಜನರ ಜೀವನಮಟ್ಟ ಸುಧಾರಣೆಗಾಗಿ ₹88 ಸಾವಿರ ಕೋಟಿಯಿಂದ ಹೆಚ್ಚಿಸಿ ₹97 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ. ಜಿ ರಾಮ್ ಜಿ ಎಂದು ಮಾಡಿ, ವಿಕಸಿತ ಭಾರತದ ಪರಿಕಲ್ಪನೆ ಮುಂದಿಟ್ಟಿದ್ದಾರೆ. ಇದೊಂದು ಕೆಟ್ಟ-ನಿರ್ಲಿಪ್ತ ಸರ್ಕಾರ. ರಾಜ್ಯದ ಅನೇಕ ಯೋಜನೆಗಳು ನನೆಗುದಿಗೆ ಬಿದ್ದಿವೆ ಎಂದು ಆರೋಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ನಷ್ಟು ಲಜ್ಜೆಗೇಡಿ ಸರ್ಕಾರ ನಾನು ನೋಡಿಲ್ಲ: ಸಂಸದ ಜಿಗಜಿಣಗಿ
ಓದುಗರ ಸಂಖ್ಯೆ ಕ್ಷೀಣಿಸುತ್ತಿರುವುದು ಒಳ್ಳೆಯ ಲಕ್ಷಣವಲ್ಲ: ಕಾಳಿಮಾಡ ಮೋಟಯ್ಯ