ಅಭಿಮಾನೋತ್ಸವಕ್ಕೆ ಉಡುಪಿಯಿಂದ 3,000 ಕಾರ್ಯಕರ್ತರು: ಕುತ್ಯಾರು

KannadaprabhaNewsNetwork |  
Published : May 08, 2026, 02:45 AM IST
ಕಸಾಪ ವತಿಯಿಂದ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು | Kannada Prabha

ಸಾರಾಂಶ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷಗಳ ಸಾರ್ಥಕ ಸೇವೆಯ ಸವಿ ನೆನಪಿಗಾಗಿ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ವೈ. ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಿಂದ 3,000 ಕ್ಕೂ ಮಿಕ್ಕಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಉಡುಪಿ: ರಾಜ್ಯ ಕಂಡ ಧೀಮಂತ ನಾಯಕ, ಅಪ್ರತಿಮ ಹೋರಾಟಗಾರ, ಮಾಸ್ ಲೀಡರ್ ಖ್ಯಾತಿಯ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷಗಳ ಸಾರ್ಥಕ ಸೇವೆಯ ಸವಿ ನೆನಪಿಗಾಗಿ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ವೈ. ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಿಂದ 3,000 ಕ್ಕೂ ಮಿಕ್ಕಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.ರೈತ ನಾಯಕರಾಗಿ, ರಾಜ್ಯಾದ್ಯಂತ ಸದೃಢ ಪಕ್ಷ ಸಂಘಟನೆಯ ಮೂಲಕ ದಕ್ಷಿಣ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಅಹರ್ನಿಶಿ ಶ್ರಮಿಸಿ ಯಶಸ್ಸನ್ನು ಕಂಡಿರುವ ಜೊತೆಗೆ ಅನೇಕ ಜನಪರ ಯೋಜನೆಗಳನ್ನು ನೀಡಿ ಜನ ಮನ್ನಣೆಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಾರ್ವಜನಿಕ ಬದುಕಿನ 50 ಸಂವತ್ಸರಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಜನರ ಮಡಿಲಲ್ಲಿ ಸಾರ್ಥಕ 50 ವರುಷ ಎಂಬ ಶೀರ್ಷಿಕೆಯೊಂದಿಗೆ ನಡೆಯಲಿರುವ ಈ ಅದ್ದೂರಿ ಕಾರ್ಯಕ್ರಮ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ತುಂಬಿ ಹಬ್ಬದ ವಾತಾವರಣ ಮೂಡಿಸಿದೆ ಎಂದು ಕುತ್ಯಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಳೇದಗುಡ್ಡ ಪುರಸಭೆ : ₹7.22 ಲಕ್ಷ ಉಳಿತಾಯ ಬಜೆಟ್ ಅಂಗೀಕಾರ
ನಾಗೂರು ಕೆರೆ ನಿರ್ಮಾಣವಾಗುತ್ತಾ? ಜವಳಿ ಪಾರ್ಕ್‌ ಬರುತ್ತಾ?