ಧ.ಗ್ರಾ.ಯೋಜನೆಯಿಂದ 3.12 ಕೋಟಿ ಗಿಡ ನಾಟಿ: ಹನುಮಂತಪ್ಪ

KannadaprabhaNewsNetwork |  
Published : Jun 05, 2025, 11:49 PM IST
ನರಸಿಂಹರಾಜಪುರ ತಾಲೂಕಿನ ಬಿ.ಎಚ್.ಕೈಮರ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾಹಿತಿ ಕಾರ್ಯಕ್ರಮ, ಗಿಡ ನೆಡುವ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ನರಸಿಂಹರಾಜಪುರ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕಳೆದ 4 ದಶಕಗಳಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಭೂಮಿಯನ್ನು ರಕ್ಷಿಸಿ ಹಾಗೂ ಮುಂದಿನ ಪೀಳಿಗೆಗೆ ಹಸ್ತಾಂತರಿಸಿ ಎಂಬ ಅಭಿಯಾನದಡಿ 1.74 ಲಕ್ಷ ಎಕರೆ ಪ್ರದೇಶದಲ್ಲಿ 3.13 ಕೋಟಿ ಗಿಡಗಳನ್ನು ನೆಡಲಾಗಿದೆ ಎಂದು ಧ.ಗ್ರಾ.ಯೋಜನೆಯ ಕೃಷಿ ಅಧಿಕಾರಿ ಹನುಮಂತಪ್ಪ ತಿಳಿಸಿದರು.

ಬಿ.ಎಚ್.ಕೈಮರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ನರಸಿಂಹರಾಜಪುರ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕಳೆದ 4 ದಶಕಗಳಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಭೂಮಿಯನ್ನು ರಕ್ಷಿಸಿ ಹಾಗೂ ಮುಂದಿನ ಪೀಳಿಗೆಗೆ ಹಸ್ತಾಂತರಿಸಿ ಎಂಬ ಅಭಿಯಾನದಡಿ 1.74 ಲಕ್ಷ ಎಕರೆ ಪ್ರದೇಶದಲ್ಲಿ 3.13 ಕೋಟಿ ಗಿಡಗಳನ್ನು ನೆಡಲಾಗಿದೆ ಎಂದು ಧ.ಗ್ರಾ.ಯೋಜನೆಯ ಕೃಷಿ ಅಧಿಕಾರಿ ಹನುಮಂತಪ್ಪ ತಿಳಿಸಿದರು.

ಗುರುವಾರ ಬಿ.ಎಚ್. ಕೈಮರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ.ಗ್ರಾ.ಯೋಜನೆ, ಅರಣ್ಯ ಇಲಾಖೆ ಸಹ ಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು. ಶಾಲೆ ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಸಾಮಾಜಿಕ ಅರಣ್ಯ ಇಲಾಖೆ ಉಪ ವಲಯ ಅರಣ್ಯಾಧಿಕಾರಿ ವರುಣ ಶೆಟ್ಟಿ ಪರಿಸರದ ಬಗ್ಗೆ ಮಾಹಿತಿ ನೀಡಿ, ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿ ವರ್ಷ ವಾರ್ಷಿಕೋತ್ಸವದಲ್ಲಿ ಪರಿಸರದ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಿದರೆ ಮುಂದಿನ ಪೀಳಿಗೆಗೆ ಭೂಮಿ ಉಳಿಯಲಿದೆ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಧ.ಗ್ರಾ.ಯೋಜನೆ ಬಿ.ಎಚ್.ಕೈಮರ ವಲಯ ಮೇಲ್ವೀಚಾರಕ ತೀರ್ಥರಾಜ್, ಶಾಲೆ ಮುಖ್ಯ ಶಿಕ್ಷಕ ವೀಣಾ, ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿಗಳು, ಸ್ವಸಹಾಯ ಸಂಘದ ಸದಸ್ಯರು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ನಂತರ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!