ಫೆಬ್ರವರಿಯಲ್ಲಿ ಮಾದಪ್ಪನ ಬೆಟ್ಟದಲ್ಲಿ ₹3.41 ಕೋಟಿ ಹುಂಡಿ ಕಾಣಿಕೆ ಸಂಗ್ರಹ

KannadaprabhaNewsNetwork |  
Published : Mar 05, 2026, 01:45 AM IST
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ 28 ದಿನಗಳ ಅವಧಿಯಲ್ಲಿ ದಾಖಲೆಯ 3.41 ಕೋಟಿ ರೂ. ಸಂಗ್ರಹವಾಗಿದೆ. | Kannada Prabha

ಸಾರಾಂಶ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ 28 ದಿನಗಳ ಅವಧಿಯಲ್ಲಿ ದಾಖಲೆಯ 3.41 ಕೋಟಿ ರು. ಸಂಗ್ರಹವಾಗಿದೆ.

- 71 ಗ್ರಾಂ ಚಿನ್ನ, 2 ಕೇಜಿ ಬೆಳ್ಳಿ ಸಂಗ್ರಹ

---

ಕನ್ನಡಪ್ರಭ ವಾರ್ತೆ ಹನೂರು

ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ 28 ದಿನಗಳ ಅವಧಿಯಲ್ಲಿ ದಾಖಲೆಯ 3.41 ಕೋಟಿ ರು. ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ. ಇ, ರಘು ಸಮ್ಮುಖದಲ್ಲಿ ಹುಂಡಿಗಳನ್ನು ತೆರೆದು ಸಿಸಿಟೀವಿ ಕಣ್ಣಾವಲಿನಲ್ಲಿ ಎಣಿಕೆ ನಡೆಸಲಾಗಿದೆ. 3,41,44,208 ರು. ಸಂಗ್ರಹವಾಗಿದೆ. ಜೊತೆಗೆ, 71 ಗ್ರಾಂ ಚಿನ್ನ ಹಾಗೂ 2 ಕೆಜಿ ಬೆಳ್ಳಿ ಪದಾರ್ಥಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ ಎಂದು ಕಾರ್ಯದರ್ಶಿ ರಘು ತಿಳಿಸಿದ್ದಾರೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನ, ಅಮಾವಾಸ್ಯೆ, ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ದಾಖಲೆ ಮಟ್ಟದಲ್ಲಿ ಹುಂಡಿಹಣ ಸಂಗ್ರಹವಾಗಿದೆ.

---

4ಸಿಎಚ್ಎನ್‌19

ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದು ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ 28 ದಿನಗಳ ಅವಧಿಯಲ್ಲಿ ದಾಖಲೆಯ 3.41 ಕೋಟಿ ರು. ಸಂಗ್ರಹವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರಾಂತಿಕಾರಿ ಪುರುಷರ ಆದರ್ಶ ರೂಢಿಸಿಕೊಳ್ಳಿ: ವಿನಯಕುಮಾರ್‌
ಆದಿಚುಂಚನಗಿರಿ ಜಾತ್ರೆ ಮಹೋತ್ಸವದ ಕೊನೇ ದಿನ ಗಂಗಾಪೂಜೆ