ಬೇಸಿಗೆ ರಜೆ, ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ₹3,13,12,118 ನಗದು ಹಾಗೂ 64 ಗ್ರಾಂ ಚಿನ್ನ, 2 ಕೆಜಿ, 50 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ.
ಕನ್ನಡ ಪ್ರಭ ವಾರ್ತೆ ಹನೂರು
ತಾಲೂಕಿನ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರನ ಹುಂಡಿಯಲ್ಲಿ 33 ದಿನಕ್ಕೆ ₹3.13 ಕೋಟಿ ಹಣ ಸಂಗ್ರಹವಾಗಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಹಣ ಎಣಿಕೆ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಸಮ್ಮುಖದಲ್ಲಿ ಹುಂಡಿಗಳನ್ನು ತೆರೆದು ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಸಲಾಗಿದೆ. ಬೇಸಿಗೆ ರಜೆ, ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ₹3,13,12,118 ನಗದು ಹಾಗೂ 64 ಗ್ರಾಂ ಚಿನ್ನ, 2 ಕೆಜಿ, 50 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ. ಇ-ಹುಂಡಿಯಿಂದ ₹6,88,214, ಚಲಾವಣೆಯಲ್ಲಿ ಇಲ್ಲದ ₹2000 ಮುಖಬೆಲೆಯ 3 ನೋಟುಗಳು, ವಿದೇಶಿ 4 ನೋಟುಗಳನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ. ಕಳೆದ ಹಲವು ವರ್ಷಗಳಿಂದ ಮಲೆ ಮಹದೇಶ್ವರ ಆದಾಯ ಏರುಗತಿಯಲ್ಲಿದ್ದು ಶಕ್ತಿಯೋಜನೆಯ ಪರಿಣಾಮ ಮಹಿಳಾ ಭಕ್ತ ಸಾಗರವೇ ದೇವಾಲಯಕ್ಕೆ ಹರಿದು ಬರುತ್ತಿರುವುದರಿಂದ ಭರಪೂರ ಆದಾಯ ಬರುತ್ತಿದೆ. ಹುಂಡಿ ಎಣಿಕೆ ಕಾರ್ಯಕ್ರಮದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.