ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಬಿ.ಹೊಸೂರು ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಿರ್ಮಿಸಿರುವ ಗಾಂಧಿ ಭವನ ಕಟ್ಟಡ ಉದ್ಘಾಟಿಸಿ ಮಾತನಾಡಿ, 2016-17ನೇ ಸಾಲಿನಲ್ಲಿ ಆಯವ್ಯಯ ಘೋಷಣೆಯನ್ವಯ 2016ರ ಫೆ.23ರಲ್ಲಿ ಮಹಾತ್ಮ ಗಾಂಧೀಜಿಯವರ ವಿಚಾರಧಾರೆ ಪ್ರಚುರಪಡಿಸಲು ಅನುಕೂಲವಾಗುವಂತೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ 3 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಗಾಂಧಿ ಭವನ ನಿರ್ಮಾಣಕ್ಕೆ ತಾಲೂಕಿನ ಬಿ.ಹೊಸೂರು ಗ್ರಾಮದಲ್ಲಿ 36 ಗುಂಟೆ ಜಮೀನನ್ನು ಜಿಲ್ಲಾಡಳಿತದಿಂದ ಮಂಜೂರು ಮಾಡಲಾಗಿತ್ತು. ಗಾಂಧಿ ಭವನ ಸುಸಜ್ಜಿತವಾಗಿ ನಿರ್ಮಾಣವಾಗಿದ್ದು, ಮಹಾತ್ಮ ಗಾಂಧಿ ಮೂರ್ತಿ, ಗ್ಯಾಲರಿಯಲ್ಲಿ ಭಾವಚಿತ್ರ ಅಳವಡಿಸಲಾಗಿದೆ ಎಂದರು.ಇದರ ಜೊತೆಗೆ ಗ್ರಂಥಾಲಯ, ವಾಚನಾಲಯ, ವಿವಿಧೋದ್ದೇಶ ಸಭಾಂಗಣ, ತರಬೇತಿ ಕೇಂದ್ರ, ಗಾಂಧಿಯವರ ಜೀವನದ ವಿವಿಧ ಹಂತಗಳ ಫೋಟೋ ಗ್ಯಾಲರಿ, 100 ಮಂದಿ ಕುಳಿತುಕೊಳ್ಳಬಹುದಾದ ಸಭಾಂಗಣ, ಸುಂದರ ಆಕೃತಿಗಳ ಒಳಾಂಗಣ, ಕಚೇರಿಯನ್ನು ಗಾಂಧಿ ಭವನ ಹೊಂದಿದೆ ಎಂದರು.
ನಂತರ ಗಾಂಧಿ ಭವನದಲ್ಲಿ ಸಂಗ್ರಹಿಸಲಾಗಿರುವ ಛಾಯಾಚಿತ್ರಗಳನ್ನು ಕಂಡು ಹರ್ಷ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ವಿ.ಜೆ.ಶೋಭರಾಣಿ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಮೈಷುಗರ್ ಅಧ್ಯಕ್ಷ ಸಿ.ಡಿ ಗಂಗಾಧರ, ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಉಪ ವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ವಿಶ್ವನಾಥ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯ ನಿರ್ದೇಶಕರಾದ ಟಿ.ಕೆ.ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.