ಬ್ರಹ್ಮಣೀಪುರ ಕೆರೆಯಲ್ಲಿ ೩ ಆನೆಗಳು ಪ್ರತ್ಯಕ್ಷ

KannadaprabhaNewsNetwork |  
Published : Mar 23, 2026, 02:00 AM IST
ಪೊಟೋ೨೨ಸಿಪಿಟಿ೩: ತಾಲೂಕಿನ ಬ್ರಹ್ಮಣೀಪುರ ಗ್ರಾಮದ ಹೊರವಲಯದ ಕೆರೆಯಲ್ಲಿ ಆನೆಗಳು ಬೀಡುಬಿಟ್ಟಿರುವುದು. | Kannada Prabha

ಸಾರಾಂಶ

ಚನ್ನಪಟ್ಟಣ: ಭಾನುವಾರ ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ತಾಲೂಕಿನ ಬ್ರಹ್ಮಣೀಪುರ ಗ್ರಾಮದಲ್ಲಿ ನಡೆದಿದೆ

ಚನ್ನಪಟ್ಟಣ: ಭಾನುವಾರ ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ತಾಲೂಕಿನ ಬ್ರಹ್ಮಣೀಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ೩ ಕಾಡಾನೆಗಳು ಬೀಡುಬಿಟ್ಟಿವೆ. ಶನಿವಾರ ರಾತ್ರಿಯಿಡೀ ಕೆರೆ ಅಕ್ಕಪಕ್ಕದ ಜಮೀನುಗಳಲ್ಲಿ ಬೆಳೆ ತಿಂದು ನಾಶಪಡಿಸಿರುವ ಆನೆಗಳು ಭಾನುವಾರ ಕೆರೆಯ ಬಳಿ ಬೀಡುಬಿಟ್ಟಿವೆ.

ಆನೆಗಳು ಕೆರೆಯಲ್ಲಿ ಬೀಡುಬಿಟ್ಟಿರುವ ವಿಚಾರ ತಿಳಿದು ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಆನೆಗಳನ್ನು ನೋಡಲು ಜಮಾಯಿಸಿದ್ದರು. ಈ ವೇಳೆ ಕೆಲವು ಆನೆ ಕರೆಯಲ್ಲಿ ಜಲಕ್ರೀಡೆಯಲ್ಲಿ ತೊಡಗಿರುವ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಜೆ ಬಳಿಕ ಕಾಡಾನೆಗಳನ್ನು ವಾಪಸ್ ಕಾಡಿಗಟ್ಟಲು ಸಿದ್ಧತೆ ನಡೆಸಿದ್ದಾರೆ.

ಪೊಟೋ೨೨ಸಿಪಿಟಿ೩: ಚನ್ನಪಟ್ಟಣ ತಾಲೂಕಿನ ಬ್ರಹ್ಮಣೀಪುರ ಗ್ರಾಮದ ಹೊರವಲಯದ ಕೆರೆಯಲ್ಲಿ ಆನೆಗಳು ಬೀಡು ಬಿಟ್ಟಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತದಾನದ ಗೌಪ್ಯತೆ, ಇವಿಎಂ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಕುಮಾರ್ ರಮಣಿಕಾಂತ್
ಕುಡಿಯುವ ನೀರಿಗೆ ಕಾಡಿನಲ್ಲಿ ಜನರ ಪರದಾಟ