ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 3 ಲಕ್ಷ ಬಿಜೆಪಿ ಸದಸ್ಯತ್ವದ ಗುರಿ

KannadaprabhaNewsNetwork |  
Published : Aug 27, 2024, 01:38 AM ISTUpdated : Aug 27, 2024, 01:39 AM IST
ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಸೆ. 1ರಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರು ಮಿಸ್ ಕಾಲ್ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಈ ಅಭಿಯಾನ ಒಟ್ಟು 45 ದಿನ ನಡೆಯಲಿದೆ.

ಹುಬ್ಬಳ್ಳಿ:

ಹು-ಧಾ ಮಹಾನಗರದಲ್ಲಿಯೇ 3 ಲಕ್ಷ ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಅವರು ಇಲ್ಲಿನ ಅರವಿಂದ ನಗರದಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಿಸ್ ಕಾಲ್ ನಂಬರ್‌ (8800002024) ಲಾಂಚನ ಬಿಡುಗಡೆ ಮಾಡಿ ಮಾತನಾಡಿದರು.ಬಿಜೆಪಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದೆ. ಎಲ್ಲ ಜಿಲ್ಲೆಗಳಲ್ಲಿ 3 ದಿನದ ಪಕ್ಷದ ಪದಾಧಿಕಾರಿಗಳ ಕಾರ್ಯಾಗಾರ ನಡೆಸಲಾಗುವುದು. ರಾಜ್ಯದ 58,150 ಬೂತ್‌ಗಳಲ್ಲಿ ಅಭಿಯಾನದ ಕಾರ್ಯಾಗಾರ ನಡೆಯಲಿವೆ ಎಂದರು.

2016ರಲ್ಲಿ ಮಿಸ್ ಕಾಲ್ ಅಭಿಯಾನವನ್ನು ಪ್ರಾರಂಭಿಸಲಾಯಿತು. ಆಗ ದೇಶದಲ್ಲಿ 7 ಕೋಟಿ ಜನ ಸದಸ್ಯರಾಗುವ ಮೂಲಕ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಪ್ರಸ್ತುತ ದೇಶದಲ್ಲಿ 18 ಕೋಟಿ ಬಿಜೆಪಿ ಸದಸ್ಯರಿದ್ದಾರೆ. ಈಗ ಮತ್ತೆ 2024ರ ಸದಸ್ಯತ್ವ ಅಭಿಯಾನವನ್ನು ಸೆ. 1ರಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರು ಮಿಸ್ ಕಾಲ್ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಈ ಅಭಿಯಾನ ಒಟ್ಟು 45 ದಿನ ನಡೆಯಲಿದೆ. ಕಳೆದ ಬಾರಿ ಮಹಾನಗರದಲ್ಲಿ 2.75 ಲಕ್ಷ ಸದಸ್ಯತ್ವ ಹೊಂದಿದ್ದರು. ಈ ಬಾರಿ 3 ಲಕ್ಷ ಸದಸ್ಯತ್ವ ಹೊಂದುವ ಗುರಿ ಮುಟ್ಟುವ ಭರವಸೆ ಇದೆ. 7 ದಿನ ಪೂರ್ಣಾವಧಿ ಸದಸ್ಯತ್ವ ಅಭಿಯಾನ ಅಡಿಯಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಕೆಲಸ ಮಾಡಬೇಕಾಗಿದೆ. ಪ್ರತಿ ಕಾರ್ಯಕರ್ತರಿಗೆ 100 ಸದಸ್ಯರನ್ನು ಮಾಡುವ ಗುರಿ ನೀಡಿದ್ದು ಆಗ ಅವರನ್ನು ಸಕ್ರಿಯ ಕಾರ್ಯಕರ್ತರು ಎಂದು ಪರಿಗಣಿಸಲಾಗುವುದು ಎಂದರು.

ವಿಪ ಸದಸ್ಯ ಪ್ರದೀಪ ಶೆಟ್ಟರ ಮಾತನಾಡಿದರು. ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಪಾಲಿಕೆ ಮೇಯರ್‌ ರಾಮಣ್ಣ ಬಡಿಗೇರ, ಉಪಮೇಯರ್ ದುರ್ಗಮ್ಮ ಬಿಜವಾಡ, ಮಾಜಿ ಶಾಸಕ ಅಶೋಕ ಕಾಟವೆ, ಸದಸ್ಯತ್ವ ಅಭಿಯಾನದ ಸಂಚಾಲಕ ನಾರಾಯಣ ಜರತಾರಘರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಶಿವು ಮೆಣಸಿನಕಾಯಿ, ಮಂಡಲ ಅಧ್ಯಕ್ಷ ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ, ಬಸವರಾಜ ಗರಗ, ಸತೀಶ ಶೇಜವಾಡಕರ, ಮಣಿಕಂಠ ಶ್ಯಾಗೋಟಿ, ಮಾಜಿ ಮಹಾಪೌರ ವೀರಣ್ಣ ಸವಡಿ, ಜಿಲ್ಲಾ ವಕ್ತಾರ ರವಿ ನಾಯ್ಕ ಸೇರಿದಂತೆ ಹಲವರಿದ್ದರು.

PREV

Recommended Stories

ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ