ಹಾಸನಾಂಬೆ ದರ್ಶನಕ್ಕೆ ಈ ಬಾರಿ 30 ಲಕ್ಷ ಜನರ ಭೇಟಿ?

KannadaprabhaNewsNetwork |  
Published : Nov 08, 2026, 02:00 AM IST
7ಎಚ್ಎಸ್ಎನ್14 :  | Kannada Prabha

ಸಾರಾಂಶ

ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಬಾರಿ ಸುಮಾರು 28 ರಿಂದ 30 ಲಕ್ಷ ಭಕ್ತರು ದೇವಿಯ ದರ್ಶನ ಪಡೆಯುವ ನಿರೀಕ್ಷೆಯಿದೆ ಎಂದು ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಹಾಸನ

ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಬಾರಿ ಸುಮಾರು 28 ರಿಂದ 30 ಲಕ್ಷ ಭಕ್ತರು ದೇವಿಯ ದರ್ಶನ ಪಡೆಯುವ ನಿರೀಕ್ಷೆಯಿದೆ ಎಂದು ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ತಿಳಿಸಿದರು.

ಕಳೆದ ವರ್ಷ ಸುಮಾರು 25 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ಬಾರಿ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. 8 ದಿನಗಳ ಅವಧಿಯಲ್ಲಿ ಈಗಾಗಲೇ ಸುಮಾರು 25 ಲಕ್ಷದ ಸಮೀಪ ಭಕ್ತರು ದರ್ಶನ ಪಡೆದಿದ್ದಾರೆ. ಇನ್ನು ನಾಲ್ಕು ದಿನಗಳು ಬಾಕಿ ಇರುವುದರಿಂದ ಪ್ರತಿದಿನ ಎರಡೂವರೆ ಲಕ್ಷದಿಂದ ಮೂರು ಲಕ್ಷ ಭಕ್ತರು ಆಗಮಿಸಿದರೆ ಒಟ್ಟು ಸಂಖ್ಯೆ 28 ರಿಂದ 30 ಲಕ್ಷ ತಲುಪುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಆಗಮಿಸುವ ನಿರೀಕ್ಷೆಯಿದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಶನಿವಾರ ದೇವಿಯ ದರ್ಶನ ಪಡೆದಿದ್ದಾರೆ ಎಂದರು.

ಒಂದು ಸಾವಿರ ರು. ವಿಶೇಷ ದರ್ಶನ ಟಿಕೆಟ್, ಇತರೆ ವಿಶೇಷ ದರ್ಶನ ವ್ಯವಸ್ಥೆ ಹಾಗೂ ಲಾಡು ಮಾರಾಟದಿಂದ ದೇವಸ್ಥಾನಕ್ಕೆ ಈವರೆಗೆ ಒಟ್ಟು 18.36 ಕೋಟಿ ರು. ಆದಾಯ ಬಂದಿದೆ ಎಂದು ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ