ದೊಡ್ಡಬಳ್ಳಾಪುರ: ಗ್ಯಾಸ್ ಸಂಪರ್ಕ ಹೊಂದಿಲ್ಲದ 3098 ಕುಟುಂಬಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿದ್ದು ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.
ಒಂದು ದೇಶ ಒಂದು ಪಡಿತರ ಯೋಜನೆ ಜಾರಿಯಾಗಿ ದೇಶದ ಜನರು ದೇಶದ ಯಾವುದೇ ಪಡಿತರ ಅಂಗಡಿಯಲ್ಲಿ ಬೇಕಾದರೂ ಪಡಿತರ ಪಡೆಯಬಹುದಾದ ಸೌಲಭ್ಯವಿದೆ. ಆದರೆ ಹೊರ ರಾಜ್ಯದಿಂದ ಬಂದು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ನಮ್ಮ ರಾಜ್ಯದಲ್ಲಿ ಪಡಿತರ ಪಡೆಯಲು ಆಗುತ್ತಿಲ್ಲ ಎಂಬ ಮಾಹಿತಿ ಬಂದಿದ್ದು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ವರದಿ ಸಲ್ಲಿಸುವಂತೆ ತಿಳಿಸಿದರು.
ಸ್ವಚ್ಛ ಭಾರತ ಪರಿಕಲ್ಪನೆ ಸಾಕಾರಗೊಳ್ಳಲಿ:ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ತ್ಯಾಜ್ಯ ನಿರ್ವಹಣಾ ಘಟಕಗಳು ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗುತ್ತಿದೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ. ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹಣೆ ಹಾಗೂ ಒಣ ಕಸ-ಹಸಿ ಕಸ ವಿಂಗಡಣೆ ಜತೆಗೆ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದರ ಮೂಲಕ ಕಸ ವಿಲೇವಾರಿ ಘಟಕಗಳ ಸದ್ಬಳಕೆ ಆಗಬೇಕು ಎಂದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. ಇದರಿಂದ ಗರ್ಭಿಣಿಯರ, ಶಿಶುಗಳ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದರು.
ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳ ಪ್ರಸ್ತಾವನೆ, ಅನುದಾನ, ಕಾಮಗಾರಿ ಹಾಗೂ ಇನ್ನಿತರ ಬಾಕಿ ಇರುವ ಕೆಲಸಗಳ ಬಗ್ಗೆ ಸಂಬಂಧಪಟ್ಟ ಆಯಾ ಇಲಾಖೆಗಳು ವರದಿ ಸಿದ್ಧಪಡಿಸಿ ಮಾಹಿತಿ ನೀಡಿ, ವರದಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕಾರ್ಯ ರೂಪಕ್ಕೆ ತರುವಲ್ಲಿ ಕೆಲಸ ಮಾಡಲಾಗುವುದು ಎಂದರು.
ಬಾಕ್ಸ್...........
ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ತಿಂಗಳಿಗೊಮ್ಮೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಜತೆಗೆ ಮಧ್ಯಾಹ್ನದ ಬಿಸಿಯೂಟ ಮಾಡಬೇಕು. ಇದರಿಂದ ಆಹಾರದ ಗುಣಮಟ್ಟ ಹಾಗೂ ಅಧಿಕಾರಿಗಳ ಕಾರ್ಯಕ್ಷಮತೆ ಕಾಣಬಹುದು ಎಂದು ಹೇಳಿದರು.
17ಕೆಡಿಬಿಪಿ2- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ದಿಶಾ ಸಮಿತಿ ಸಭೆ ಸಂಸದ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆಯಿತು.