ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದಲ್ಲಿ ‘ನಮಸ್ತೆ ಚಿಕ್ಕಬಳ್ಳಾಪುರ’ ಕಾರ್ಯಕ್ರಮದ ಅನ್ವಯ 17ನೇ ವಾರ್ಡ್ ನಲ್ಲಿ ಸೋಮವಾರ ವಾರ್ಡ್‌ಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಸಚಿವ ಬೈರತಿ ಸುರೇಶ್ ರವರು ಈ ಯುಜಿಡಿ ಹಣ ಮಂಜೂರು ಮಾಡಿಸಿ ಕೊಟ್ಟಿದ್ದಾರೆ ಎಂದರು.ನಗರಾಭಿವೃದ್ಧಿಗೆ ₹50 ಕೋಟಿ
ಇದಲ್ಲದೇ ನಗರದ ಅಭಿವೃದ್ಧಿಗೆ 50 ಕೋಟಿ ರು.ಗಳು, ಹಾಳಾಗಿರುವ ಕಂದವಾರ ಕೆರೆ ಕಟ್ಟೆಯ ರಸ್ತೆ ಅಭಿವೃದ್ಧಿಗೆ 8 ಕೋಟಿ ರು.ಗಳು, ಹಾಗೂ ನಗರದ ಹಾಳಾದ ರಸ್ತೆಗಳ ಕಾಮಗಾರಿ ಮಾಡಿಸಲು 25 ಕೋಟಿ ರೂಗಳನ್ನು ಮೀಸಲು ಇಟ್ಟಿದ್ದು ಹೆಚ್ಚಿನ ಹಾನಿಗೊಳಗಾದ ರಸ್ತೆಗಳನ್ನು ಆದ್ಯತೆ ಮೇರೆಗೆ ರಿಪೇರಿ ಮಾಡಿಸುವುದು ಅಥವಾ ಹೊಸ ರಸ್ತೆ ಮಾಡಿಸುವುದನ್ನು ಮಾಡುವುದಾಗಿ ತಿಳಿಸಿದರು.ಡೆಂಘೀ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಬಗ್ಗೆ ನಗರ ಮತ್ತು ಗ್ರಾಮೀಣ ಬಾಗಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಗರದ ಕಂದವಾರ ಕೆರೆಯಿಂದ ಮತ್ತು ತೆರೆದ ಚರಂಡಿಗಳಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ಈ ಎಲ್ಲ ಕಡೆಗಳಲ್ಲಿ ಕೂಡಲೆ ಸ್ವಚ್ಛತೆ ಮತ್ತು ಔಷಧ ಸಿಂಪರಣೆಗೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರವರೊಂದಿಗೆ ಚರ್ಚಿಸಿ ಜಿಲ್ಲಾಸ್ಪತ್ರೆಯಲ್ಲಿ ಡೆಂಘೀ ರೋಗಕ್ಕೆ ಉಚಿತ ರಕ್ತ ತಪಾಸಣೆ ಮತ್ತು ಪ್ರತ್ಯೇಕ ವಾರ್ಡ್ ಮೀಸಲಿದುವಂತೆ ಮನವಿ ಮಾಡಲಾಗುವುದು. ನಗರದಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ವರದಿಯಾಗುತ್ತಿರುವುದರಿಂದ ನಗರದ ರಸ್ತೆಗಳಲ್ಲಿ. ಖಾಲಿ ನಿವೇಶನಗಳಲ್ಲಿ, ಚರಂಡಿಗಳಲ್ಲಿ ಮತ್ತು ಎಲ್ಲೆಂದರಲ್ಲಿ ಕಸ ಬಿಸಾಡದೆ, ಮನೆ ಸುತ್ತ ಮುತ್ತಲು ಮಳೆ ನೀರು ನಿಲ್ಲದೇ ಸರಾಗವಾಗಿ ಹರಿದು ಹೋಗುವಂತೆ ನಗರವನ್ನು ಸ್ವಚ್ಚವಾಗಿ ಇಟ್ಟು ಕೊಳ್ಳುವುದು ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿ ಎಂದರು.
ಪ್ಲಾಸ್ಟಿಕ್ ಮುಕ್ತ ಕ್ಷೇತ್ರ
ಈ ವೇಳೆ ನಗರಸಭೆ ಉಸ್ತುವಾರಿ ಪೌರಾಯುಕ್ತ ಹಾಗೂ ಪರಿಸರ ಅಭಿಯಂತರ ಉಮಾಶಂಕರ್, ಆಹಾರ ನೀರೀಕ್ಷಕ ನಾರಾಯಣಸ್ವಾಮಿ, ಮುಖಂಡರಾದ ಕೆ.ಎಲ್.ಶ್ರೀನಿವಾಸ್,ಪಿ.ಎಂ. ರಘು ವಿನಯ್ ಬಂಗಾರಿ, ಡ್ಯಾನ್ಸ್ ಶ್ರೀನಿವಾಸ್, ನಾಗಭೂಷಣ್, ಅಲ್ಲು ಅನಿಲ್,ನಗರಸಭೆ, ಕಂದಾಯ,ಆಹಾರ, ಬೆಸ್ಕಾಂ,ಆರೋಗ್ಯ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳ ಅಧಿಕಾರಿಗಳು, ಮತ್ತಿತರರು ಇದ್ದರು.