ಶಿಕ್ಷಣ ಕ್ಷೇತ್ರಕ್ಕೆ ಶೇ.೩೦ ಅನುದಾನಕ್ಕೆ ಮೀಸಲಿಡಬೇಕು

KannadaprabhaNewsNetwork |  
Published : Mar 05, 2025, 12:30 AM IST
೪ಕೆಎಲ್‌ಆರ್-೫ಮುಂಬರಲಿರುವ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.೩೦ರಷ್ಟು ಅನುದಾನ ಮೀಸಲಿರಿಸುವಂತೆ ಒತ್ತಾಯಿಸಿ ಎಸ್‌ಎಫ್‌ಐನಿಂದ ಕೋಲಾರದ ತಹಸೀಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನಡೆಸುತ್ತಿರುವುದು. | Kannada Prabha

ಸಾರಾಂಶ

ಸಾರ್ವಜನಿಕ ಶಿಕ್ಷಣ ಕ್ಷೇತ್ರ ಕುಂಟಿತಗೋಳ್ಳುತ್ತಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಸರ್ಕಾರಗಳು ಸಾರ್ವಜನಿಕ ಶಿಕ್ಷಣವನ್ನು ಕಡೆಗಣಿಸುವುದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಕ ಕಾರ್ಪೊರೇಟ್ ಕಡೆಗೆ ಸಾಗುತ್ತಿದೆ

ಕನ್ನಡಪ್ರಭ ವಾರ್ತೆ ಕೋಲಾರ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.೩೦ರಷ್ಟು ಅನುದಾನ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನೆಯು ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯರಿಗೆ ಮನವಿ ಪತ್ರ ಸಲ್ಲಿಸಿತು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು ಮಾತನಾಡಿ, ಶಿಕ್ಷಣ ಕ್ಷೇತ್ರವು ವಿಶಾಲವಾಗಿ ವ್ಯಾಪಿಸಿದ್ದು ದೇಶ, ವಿದೇಶಗಳಿಂದಲೂ ವಿದ್ಯಾರ್ಥಿಗಳು ಬಂದು ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವಿದ್ಯಾಭ್ಯಾಸ ಮಾಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದರು.

ಸಾರ್ವಜನಿಕ ಶಿಕ್ಷಣ ಬಲಪಡಿಸಿ

ಆದರೆ ಗಣನೀಯವಾಗಿ ಸಾರ್ವಜನಿಕ ಶಿಕ್ಷಣ ಕ್ಷೇತ್ರ ಕುಂಟಿತಗೋಳ್ಳುತ್ತಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಸರ್ಕಾರಗಳು ಸಾರ್ವಜನಿಕ ಶಿಕ್ಷಣವನ್ನು ಕಡೆಗಣಿಸುವುದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಕ ಕಾರ್ಪೊರೇಟ್ ಕಡೆಗೆ ಸಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಒತ್ತಾಯಿಸಿ ಶೈಕ್ಷಣಿಕ ಸಮಸ್ಯೆಗಳನ್ನು ಗುರುತಿಸಿಕೊಂಡು ಎಸ್‌ಎಫ್‌ಐ ರಾಜ್ಯಾದ್ಯಂತ ಹೋರಾಟವನ್ನು ರೂಪಿಸುತ್ತ ಬರುತ್ತಿದೆ. ಆದರೆ ಶಿಕ್ಷಣವನ್ನು ದುರ್ಬಲಗೊಳಿಸುವ ಶಿಕ್ಷಣ ವಿರೋಧಿ ನೀತಿಗಳನ್ನು ಸರ್ಕಾರ ಜಾರಿ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ನಿರಂತರವಾಗಿ ಕುಸಿಯುತ್ತಿರುವುದು ಕಂಡು ಬರುತ್ತಿದೆ ಎಂದರು.

9 ವಿವಿಗಳನ್ನು ಮುಚ್ಚಲು ವಿರೋಧ

ಜಿಲ್ಲಾ ಉಪಾಧ್ಯಕ್ಷ ಜೆ.ಶಶಿಕುಮಾರ್ ಮಾತನಾಡಿ, ರಾಜ್ಯದ ೯ ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ಕೈ ಬಿಟ್ಟು ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಸುಧಾರಿಸಲು ರಾಜ್ಯ ಸರ್ಕಾರ ತನ್ನ ಮುಂಬರುವ ಬಜೆಟ್‌ನಲ್ಲಿ ಕೊಥಾರಿ ಆಯೋಗದಂತೆ ಶೇ.೩೦ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಒತ್ತಾಯಿಸಿದರು.

ಕಾಲೇಜುಗಳಿಗೆ ಸೌಲಭ್ಯ ಕಲ್ಪಿಸಿ

ರಾಜ್ಯದಲ್ಲಿರುವ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ೩೫೦೦ ರೂಗಳಿಗೆ ಹೆಚ್ಚಿಸಬೇಕು. ಮತ್ತು ಆರೋಗ್ಯ ಭದ್ರತೆ ನೀಡಬೇಕು ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ನೀಡಿ ಬಳಪಡಿಸಬೇಕು ಎಂದು ಒತ್ತಾಯಿಸಿದರು.ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ, ಉಪಾಧ್ಯಕ್ಷೆ ಲಾವಣ್ಯ, ಜಿಲ್ಲಾ ಸಮಿತಿ ಸದಸ್ಯರಾದ ಲೋಕೇಶ್, ಅರ್ಚನಾ, ನಾಗೇಶ್, ಕಾರ್ತಿಕ್, ಗಗನಶ್ರೀ, ಚಂದನ, ಸೋನಿಯಾ, ರಕ್ಷಿತಾ, ಐಶ್ವರ್ಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ