ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ ರಕ್ತದಾನ ಶಿಬಿರ ಉದ್ಘಾಟಿಸಿದರು. ಉಡುಪಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಶುಭ ಹಾರೈಸಿದರು. ಗಾಂಧಿ ಆಸ್ಪತ್ರೆ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಆಸ್ಪತ್ರೆಯಲ್ಲಿ ಜನಿಸಿದ, ನಾನಾ ಕ್ಷೇತ್ರದ ಸಾಧಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗೌರವಿಸಲಾಯಿತು
ಕನ್ನಡಪ್ರಭ ವಾರ್ತೆ ಉಡುಪಿ
ನಗರದ ಗಾಂಧಿ ಆಸ್ಪತ್ರೆಗೆ 30 ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಆಸ್ಪತ್ರೆಯ ಲಹರಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಸಮಾಜದಿಂದ ಪಡೆದುದನ್ನು ಸಮಾಜಕ್ಕೆ ಹಂಚುವ ಕೆಲಸವನ್ನು ಗಾಂಧಿ ಆಸ್ಪತ್ರೆ ಮಾಡುತ್ತಿದೆ. ನಗರಸಭೆ ಜತೆ ಗಾಂಧಿ ಆಸ್ಪತ್ರೆ ಕೈಜೋಡಿಸಿದ್ದು ಎಂ.ಹರಿಶ್ಚಂದ್ರರ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದರುಉಡುಪಿ ನಗರಸಭೆ ಪೌರಾಯುಕ್ತ ಡಾ. ಉದಯ ಕುಮಾರ್ ಶೆಟ್ಟಿ ಮಾತನಾಡಿ, ಆರೋಗ್ಯ, ಶಿಕ್ಷಣ, ಆದಾಯದ ಆಧಾರದಲ್ಲಿ ಮಾನವ ಅಭಿವೃದ್ಧಿ ಅಳತೆಗೋಲಾಗಿದ್ದು, ಮಡಾಮಕ್ಕಿಯಂತಹ ಕುಗ್ರಾಮದಿಂದ ಬಂದ ಎಂ.ಹರಿಶ್ಚಂದ್ರರ ಸಾಧನೆ ಅನ್ಯರಿಗೆ ಮಾದರಿ ಎಂದು ಹೇಳಿದರು.ಉಡುಪಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಶುಭ ಹಾರೈಸಿದರು. ಗಾಂಧಿ ಆಸ್ಪತ್ರೆ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಆಸ್ಪತ್ರೆಯಲ್ಲಿ ಜನಿಸಿದ, ನಾನಾ ಕ್ಷೇತ್ರದ ಸಾಧಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗೌರವಿಸಲಾಯಿತು.ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಎಜಿಎಂ ವಾದಿರಾಜ ಭಟ್, ಲಕ್ಷ್ಮೀ ಹರಿಶ್ಚಂದ್ರ, ಡಾ. ಪಂಚಮಿ, ಡಾ. ವಿದ್ಯಾ ವಿ. ತಂತ್ರಿ ಉಪಸ್ಥಿತರಿದ್ದರು. ಗಾಂಧಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ ಪ್ರಾಸ್ತಾವಿಕ ಮಾತನಾಡಿದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿ, ಸುಮಾ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.