ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ
ಮಂಡಗದ್ದೆಯಲ್ಲಿ ನಿರ್ಮಿಸಲಾದ ಮಿನಿ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಸೋಮವಾರ ನೆರವೇರಿಸಿ, ಈ ಭಾಗದ ಅಭಿವೃದ್ಧಿಗೆ ವಿಶೇಷವಾಗಿ ಶ್ರಮಿಸಿದ್ದು ಹಲವಾರು ಕಾಮಗಾರಿ ಮಂಜೂರು ಮಾಡಿಸಿದ್ದೇನೆ. ಆದರೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಪೂರ್ತಿಯಾದರೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವೇ ಬಿಡುಗಡೆಯಾಗುತ್ತಿಲ್ಲ ಎಂದು ದೂರಿದರು.
ಕೇಂದ್ರ ಸರ್ಕಾರದ ಜೆಜೆಎಂ ಯೋಜನೆಯಡಿ ಪ್ರತಿ ಮನೆಗಳಿಗೆ ಶುದ್ಧ ಕುಡಿವ ನೀರಿನ ಯೋಜನೆಗೆ ₹150 ಕೋಟಿ ಮಂಜೂರಾಗಿದೆ. ಇದರೊಂದಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹354 ಕೋಟಿ ಅನುದಾನ ಮಂಜೂರಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದರು.ಅಂಗನವಾಡಿ ಕೇಂದ್ರಗಳು ಗರ್ಭೀಣಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ರಕ್ಷಣೆ ಸೇರಿ ಚಟುವಟಿಕೆ ಕೇಂದ್ರವಾಗಿದೆ. ಮಹಿಳೆಯರು ಇದರಿಂದ ದೂರವಿರದೇ ಇದನ್ನು ಪೂರ್ಣ ಸದ್ಬಳಕೆ ಮಾಡಿಕೊಳ್ಳಬೇಕಿದೆ. ತಾಲೂಕಿನ 12 ಹನ್ನೆರಡು ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಹಾಗೂ ವಿವೇಕ ಯೋಜನೆಯಡಿ 52 ಶಾಲಾ ಕೊಠಡಿ ನಿರ್ಮಿಸಲಾಗಿದ್ದು ಕೇವಲ ಬೆರಳೆಣಿಕೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಮಾತ್ರ ನಿರ್ಮಿಸಬೇಕಿದೆ ಎಂದು ಹೇಳಿದರು.