ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗೆ ರಾಜ್ಯಕ್ಕೆ ₹326.02 ಕೋಟಿ ಅನುದಾನ: ಕಡಾಡಿ

KannadaprabhaNewsNetwork |  
Published : Dec 03, 2024, 12:32 AM IST
ರಾಜ್ಯಸಭಾ ಸಂಸದ ಈರಣ್ಣ ಕಡಾಡಿ | Kannada Prabha

ಸಾರಾಂಶ

ಕರ್ನಾಟಕದಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ 2024-25 ಆರ್ಥಿಕ ವರ್ಷದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅನುಷ್ಠಾಗೊಳಿಸಿ ರಾಜ್ಯಕ್ಕೆ ₹326.02 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲಿಖಿತ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮೂಡಲಗಿ

ಕರ್ನಾಟಕದಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ 2024-25 ಆರ್ಥಿಕ ವರ್ಷದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅನುಷ್ಠಾಗೊಳಿಸಿ ರಾಜ್ಯಕ್ಕೆ ₹326.02 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲಿಖಿತ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಚಳಿಗಾಲ ಅಧಿವೇಶನದಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಸ್ತುತ ಹಣಕಾಸು ವರ್ಷದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ವಿತರಿಸಿದ ಬಜೆಟ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,ಯೋಜನೆ ಅನುಷ್ಠಾನಕ್ಕೆ ₹7553 ಕೋಟಿ ನಿಗದಿಪಡಿಸಲಾಗಿದೆ. 2024ರ ನವೆಂಬರ್‌ 25ರವರೆಗೆ ₹3075.26 ಕೋಟಿ ಅನುದಾನವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಗೆ ಕೇಂದ್ರ ಶೇ.60, ರಾಜ್ಯದ 40 ಪಾಲು ಇರಲಿದೆ. ಆದರೆ ಇದು ಈಶಾನ್ಯ ಮತ್ತು ಹಿಮಾಲಯನ್ ರಾಜ್ಯಗಳಿಗೆ ಶೇ.90:10 ಆಗಿದೆ. ಕೇಂದ್ರಾಡಳಿತ ಪ್ರದೇಶಗಳಿಗೆ, ಕೇಂದ್ರ ಪಾಲು ಶೇ.100 ಆಗಿದೆ. ಯೋಜನೆಯಡಿ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ, ಮಳೆಯಾಧಾರಿತ ಪ್ರದೇಶ ಅಭಿವೃದ್ಧಿ, ಪರಂಪರಾಗತ ಕೃಷಿ ವಿಕಾಸ ಯೋಜನೆ, ಕೃಷಿ ಯಾಂತ್ರೀಕರಣದ ಉಪ ಮಿಷನ್, ಪರ್ ಡ್ರಾಪ್ ಮೋರ್ ಕ್ರಾಪ್, ಕೃಷಿ ಅರಣ್ಯ, ಬೆಳೆ ವೈವಿಧ್ಯೀಕರಣ ಕಾರ್ಯಕ್ರಮ, ಗೋದಾಮು ನಿರ್ಮಾಣ, ನೀರು ಕೊಯ್ಲು ರಚನೆಗಳು, ಪ್ರಾಥಮಿಕ ಪ್ರಾತ್ಯಕ್ಷಿಕೆ ಘಟಕಗಳ ಸ್ಥಾಪನೆ, ಟ್ರ್ಯಾಕ್ಟರ್‌ಗಳು, ಪವರ್ ಟ್ರೇಲರ್‌ಗಳು ಮತ್ತು ಡ್ರೋನ್‍ಗಳ ಖರೀದಿ, ಬೆಳೆ ವೈವಿಧ್ಯೀಕರಣ ಕಾರ್ಯಕ್ರಮ, ಸಮಗ್ರ ಕೃಷಿ ಉತ್ತೇಜನ, ಮಣ್ಣಿನ ಆರೋಗ್ಯ ಫಲವತ್ತತೆ, ಕೃಷಿ ವಲಯದ ಮೂಲಸೌಕರ್ಯ ಸುಧಾರಣೆಗೆ ಕಾರ್ಯಗತಗೊಳಿಸಲು ರಾಜ್ಯ ಸರ್ಕಾರ ಈ ಮೊತ್ತ ಬಳಸಲಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವಣಗೆರೆ, ಬಾಗಲಕೋಟೆ ಕ್ಷೇತ್ರ ನಮ್ದೆ : ಡಿ.ಕೆ.ಶಿವಕುಮಾರ್‌
ಟಿಬಿ ಡ್ಯಾಂ ಹಿನ್ನೀರಿನ ಕೈಗಾರಿಕೆ ಲೈಸೆನ್ಸ್‌ ರದ್ದತಿಗಾಗಿ ಹೋರಾಟ